Blog

  • ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ(AIISH) ಹುದ್ದೆಗೆ ಅರ್ಜಿ ಆಹ್ವಾನ

    ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ(AIISH) ಹುದ್ದೆಗೆ ಅರ್ಜಿ ಆಹ್ವಾನ

    ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು (ಎಐಐಎಸ್ ಹೆಚ್) ಅಸಿಸ್ಟೆಂಟ್ ಅಡಿಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮೈಸೂರು-ಕರ್ನಾಟಕ ದಲ್ಲಿ ಕೆಲಸ ಹುಡುಕುವವರಿಗ ಇದೊಂದು ಅವಕಾಶ. ವಿವರಗಳು ಈ ಕೆಳಗಿನಂತಿವೆ.

    ಹುದ್ದೆ : ಅಸಿಸ್ಟೆಂಟ್ ಅಡಿಟ್ ಆಫೀಸರ್ (ಸಹಾಯಕ ಲೆಕ್ಕ ಪರಿಶೋಧಕ ಅಧಿಕಾರಿ )


    ಹುದ್ದೆಯ ಸ್ಥಳ : ಮೈಸೂರು-ಕರ್ನಾಟಕ

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,೦೦೦/- ವೇತನವಿರುತ್ತದೆ.

    ಹುದ್ದೆ ಸಂಖ್ಯೆ : 01

    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಶುಲ್ಕವಿರುವುದಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


    ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 65 ವಯೋಮಿತಿ ಹೊಂದಿರಬೇಕು.


    ಸಹಾಯಕ ಲೆಕ್ಕ ಪರಿಶೋಧಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಮಾರ್ಚ್ 04, 2021 ಬೆಳಗ್ಗೆ 11.00 ಗಂಟೆಗೆ ಸಂದರ್ಶನಕ್ಕೆ ಹಾಜರಿರಬೇಕು.

    ವಿಳಾಸ ಈ ಕೆಳಗಿನಂತಿವೆ

    Board Room,
    AIISH,
    Manasagangothri, Mysore-5750006

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    https://aiishmysore.in/en/

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕರ್ನಾಟಕ ಲೋಕಸೇವಾ ಆಯೋಗದಿಂದ ದಾಖಲಾತಿ ಪರಿಶೀಲನೆ ರದ್ದು

    ಕರ್ನಾಟಕ ಲೋಕಸೇವಾ ಆಯೋಗದಿಂದ ದಾಖಲಾತಿ ಪರಿಶೀಲನೆ ರದ್ದು

    ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ದಿನಾಂಕ 18 ಮತ್ತು 19 ಫೆಬ್ರವರಿ 2021 ರಂದು ನಿಗದಿಪಡಿಸಲಾಗಿದ್ದ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ರದ್ದು ಗೊಳಿಸಲಾಗಿದೆ., ಅಭ್ಯರ್ಥಿಗಳು ಆಯೋಗಕ್ಕೆ ಖುದ್ದಾಗಿ ಹಾಜರಾಗುವಂತಿಲ್ಲ. ಹಾಗಾಗಿ ಈಗಾಗಲೇ ಕಳುಹಿಸಿರುವ ಸೂಚನಾ ಪತ್ರದಲ್ಲಿರುವಂತೆ ನಿಯಮಗಳಿಗೆ ಅನುಗುಣವಾಗಿ ನಿಮ್ಮ ಎಲ್ಲಾ ಪ್ರಮಾಣ ಪತ್ರಗಳ 2 ಸೆಟ್ ಜೆರಾಕ್ಸ್ ಪ್ರತಿಗಳನ್ನು ಅಧಿಕಾರಿಗಳಿಂದ ದೃಢೀಕರಿಸಿ ದಿನಾಂಕ ಫೆಬ್ರವರಿ 22, 2021 ರೊಳಗಾಗಿ ಸ್ಪೀಡ್ ಪೋಸ್ಟ್ (ತ್ವರಿತ ಅಂಚೆ ) ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು.

    ವಿಳಾಸ :

    ಕರ್ನಾಟಕ ಲೋಕಸೇವಾಆಯೋಗ (ನೇಮಕಾತಿ ಶಾಖೆ-2)
    ಉದ್ಯೋಗ ಸೌಧ, ಬೆಂಗಳೂರು -01

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಇಂಡಿಯನ್ ನೇವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : 10th/ITI ಅಭ್ಯರ್ಥಿಗಳೂ  ಅರ್ಜಿ ಸಲ್ಲಿಸಬಹುದು

    ಇಂಡಿಯನ್ ನೇವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : 10th/ITI ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು

    ಇಂಡಿಯನ್ ನೇವಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿ

    ಹುದ್ದೆ : ಟ್ರೇಡ್ಸ್ ಮೆನ್ ಮೇಟ್

    ಹುದ್ದೆ ಸಂಖ್ಯೆ : 1159

    ಹುದ್ದೆಯ ಸ್ಥಳ : ಆಲ್ ಇಂಡಿಯಾ

    ಈ ಹುದ್ದೆ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 18,000/- ರಿಂದ 56,900/- ವೇತನವಿರುತ್ತದೆ.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ , ಪಿಡ್ಬ್ಯು ಬಿಡಿಎಸ್,ಎಕ್ಸ್ ಸರ್ವಿಸ್ ಮೆನ್ / ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

    ಜನರಲ್ ಅಭ್ಯರ್ಥಿಗಳಿಗೆ ರೂ.205/- ಅರ್ಜಿ ಶುಲ್ಕವಿರುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವಯೋಮಿತಿ ಹೊಂದಿರಬೇಕು.

    ಪಿಡ್ಬ್ಯು ಡಿ ಅಭ್ಯರ್ಥಿಗಳಿಗೆ 10 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ 5 ವರ್ಷ, ಒಬಿಸಿ , 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ 10th / ಐಟಿಐ ತೇರ್ಗಡೆ ಹೊಂದಿರಬೇಕು.

    ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 22, ಫೆಬ್ರವರಿ 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07, ಮಾರ್ಚ್ 2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ:
    https://www.joinindiannavy.gov.in/

  • ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಿ.

    ಹುದ್ದೆ : ನಾನ್ ಪಿ.ಜಿ.ಜೂನಿಯರ್ ರೆಸಿಡೆಂಟ್

    ಹುದ್ದೆ ಸಂಖ್ಯೆ : 1

    ಹುದ್ದೆಯ ಸ್ಥಳ : ಬೆಂಗಳೂರು

    ವೇತನ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 56,100/- ರೂ.ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-02-2021

    ವಿದ್ಯಾರ್ಹತೆ : ಅಭ್ಯರ್ಥಿಯು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗೆ ಗರಿಷ್ಠ 32 ವರ್ಷ ವಯಸ್ಸಾಗಿರಬೇಕು. (26.02.2021)

    ಅರ್ಜಿ ಶುಲ್ಕ : ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯು ಡಿ ಅಭ್ಯರ್ಥಿಗಳು ರೂ.885/- ಹಾಗೂ ಜನರಲ್, ಒಬಿಸಿ ಅಭ್ಯರ್ಥಿಗಳಿಗೆ ರೂ.1180/- ಶುಲ್ಕವಿರುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.

    ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 26,ಫೆಬ್ರವರಿ 2021 ಸಮಯ 9.30 ರ ವೇಳೆಗೆ ಸಂದರ್ಶನದಲ್ಲಿ ಭಾಗಿಯಾಗಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ:
    https://nimhans.ac.in/

  • ರೈಲು ಮೂಲ ಸೌಲಭ್ಯ ಅಭಿವೃದ್ಧಿ ಕಂಪನಿ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೈಲು ಮೂಲ ಸೌಲಭ್ಯ ಅಭಿವೃದ್ಧಿ ಕಂಪನಿ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ ) ನಿಯಮಿತ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆಸಕ್ತರು ಅರ್ಜಿ ಸಲ್ಲಿಸಿ

    ಹುದ್ದೆ : ಸಿವಿಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಒಎಚ್ ಇ/ರೋಲಿಂಗ್ ಸ್ಟಾಕ್/ಎಸ್&ಟಿ/ಭೂಸ್ವಾಧೀನ/ಕೈಗಾರಿಕಾ ಬಾಂಧವ್ಯಗಳು

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kride.in ಭೇಟಿ ನೀಡಿ ‘careers’ ಮೇಲೆ ಕ್ಲಿಕ್ ಮಾಡಿ

  • ಕರಾವಳಿ ಕಾವಲು ಪೊಲೀಸ್ ಪಡೆ ಯಲ್ಲಿ  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಕೂಡಲೇ ‌ಅರ್ಜಿ ಸಲ್ಲಿಸಿ

    ಕರಾವಳಿ ಕಾವಲು ಪೊಲೀಸ್ ಪಡೆ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಸಕ್ತರು ಕೂಡಲೇ ‌ಅರ್ಜಿ ಸಲ್ಲಿಸಿ

    ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ:

    ಹುದ್ದೆ : ಬೋಟ್ ಮ್ಯಾನ್, ಸಹಾಯಕ ಬೋಟ್ ಮ್ಯಾನ್,ಮೋಟಾರ್ ಲಾಂಚ್ ಮೆಕ್ಯಾನಿಕ್, ಇಂಜಿನ್ ಡ್ರೈವರ್, ಕಲಾಸಿಗಳು

    ಹುದ್ದೆ ಸಂಖ್ಯೆ : 29

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10.03.2021(5.30pm)

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ಭೇಟಿ ನೀಡಿ