Blog

  • Karnataka Govt Jobs: ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ, ಯಾವುದೇ ಪರೀಕ್ಷೆ ಇಲ್ಲ, ನೇರ ನೇಮಕಾತಿ; ದ್ವಿತೀಯ ಪಿಯುಸಿ ಪಾಸಾದವರಿಗೆ ಆದ್ಯತೆ

    Karnataka Govt Jobs: ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ, ಯಾವುದೇ ಪರೀಕ್ಷೆ ಇಲ್ಲ, ನೇರ ನೇಮಕಾತಿ; ದ್ವಿತೀಯ ಪಿಯುಸಿ ಪಾಸಾದವರಿಗೆ ಆದ್ಯತೆ

    Karnatka Grama Panchayath Recruitment 2024: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಖಾಲಿ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕ; 05-02-2024
    ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 23-02-2024

    ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ: ಶಿವಮೊಗ್ಗ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 14 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,196 ವೇತನ ನಿಗದಿಪಡಿಸಲಾಗಿದೆ.

    ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್‌ ಮತ್ತು ರೋಸ್ಟರ್ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

    ಉದ್ಯೋಗ ಸ್ಥಳ: ಮೇಲೆ ತಿಳಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸರ್ಟಿಫಿಕೇಶನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಅಭ್ಯರ್ಥಿಗಳು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್‌ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕೆಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ವಾಸಸ್ಥಳ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿಯ ನಿವಾಸಿಯಾಗಿರಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ವಾಸಸ್ಥಳ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದ ತಹಶೀಲ್ದಾರರಿಂದ ವಾಸಸ್ಥಳ ಪ್ರಮಾಣ ಪತ್ರ ಪಡೆದಿರತಕ್ಕದ್ದು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗಿದಪಡಿಸಿದ ಕೊನೆಯ ದಿನಾಂಕ 23-02-2೦24 ಕ್ಕೆ ಅಭ್ಯರ್ಥಿಯ ವಯಸ್ಸು 18 ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತೆ ಇರತಕ್ಕದ್ದು.
    ಸಾಮಾನ್ಯ ವರ್ಗ 18 ರಿಂದ 35 ವರ್ಷ, 2ಎ,2ಬಿ,3ಎ,3ಬಿ 18 ರಿಂದ 38 ವರ್ಷ, ಪ.ಜಾರಿ/ಪ.ಪಂ/ಪ್ರ.ವರ್ಗ-1 18 ರಿಂದ 40 ವರ್ಷ

    ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್‌ https://shimoga.nic.in ರಲ್ಲಿ ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿದ ನಂತರ ದಾಖಲೆಗಳ ಸಹಿತ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಲ್ಲಿ ಎರಡು ಪ್ರತಿ ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆಯಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ಅಭ್ಯರ್ಥಿಗಳು ದಿನಾಂಕ 23-02-2024 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಗಳನ್ನು ನೇರವಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಈ ವಿಳಾಸಕ್ಕೆ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ 23-02-2024 ಸಂಜೆ 5.30 ಗಂಟೆ ಮುಗಿದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Sri Sudha Co-operative Bank Recruitment 2024: ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ನೇಮಕಾತಿ; ಮಾಸಿಕ ರೂ.88,300 ವೇತನ, ಫೆ.23, 2024 ಅರ್ಜಿ ಸಲ್ಲಿಸಲು ಕೊನೆಯ ದಿನ

    Sri Sudha Co-operative Bank Recruitment 2024: ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ನೇಮಕಾತಿ; ಮಾಸಿಕ ರೂ.88,300 ವೇತನ, ಫೆ.23, 2024 ಅರ್ಜಿ ಸಲ್ಲಿಸಲು ಕೊನೆಯ ದಿನ

    Shri Sudha Co-Operative Bank Ltd: ಶ್ರೀ ಸುಧಾ ಕೋ ಆಪರೇಟಿವ್‌ ಬ್ಯಾಂಕ್‌ ಲಿ.ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ-ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಕಿರಿಯ ಸಹಾಯಕರು, ಸಿಸ್ಟಂ ಅಡ್ಮಿನಿಸ್ಟ್ರೆಟರ್‌, ಕಚೇರಿ ಸಹಾಯಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ, ಹೆಚ್ಚಿನ ವಿವರಗಳನ್ನು ಪಡೆದು ಅರ್ಜಿ ಸಲ್ಲಿಸಿ.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ; 02-02-2024
    ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ; 23-02-2024

    ಹುದ್ದೆಗಳ ವಿವರ;
    ಶ್ರೀ ಸುಧಾ ಕೋ-ಅಪರೇಟಿವ್‌ ಬ್ಯಾಂಕ್‌ ಲಿ. ನಲ್ಲಿ ಕಿರಿಯ ಸಹಾಯಕರು ಗ್ರೇಡ್‌-II, ಸಿಸ್ಟಂ ಅಡ್ಮಿನಿಸ್ಟ್ರೇಟರ್‌, ಕಚೇರಿ ಸಹಾಯಕರು(ಅಟೆಂಡರ್‌) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ:
    ಕಿರಿಯ ಸಹಾಯಕರು ಗ್ರೇಡ್‌-II: 10 ಹುದ್ದೆಗಳು
    ಸಿಸ್ಟಂ ಅಡ್ಮಿನಿಸ್ಟ್ರೇಟರ್‌: 01 ಹುದ್ದೆ
    ಕಚೇರಿ ಸಹಾಯಕರು(ಅಟೆಂಡರ್‌): 07 ಹುದ್ದೆಗಳು

    ವಿದ್ಯಾರ್ಹತೆ:
    ಕಿರಿಯ ಸಹಾಯಕರು ಗ್ರೇಡ್‌ -II: ಅಂಗೀಕೃತ ವಿಶ್ವವಿದ್ಯಾಲಯದ ಬ್ಯಾಚುಲರ್‌ ಪದವಿ, ಕಂಪ್ಯೂಟರ್‌ ಅಪರೇಷನ್ಸ್‌ ಮತ್ತು ಅಪ್ಲಿಕೇಷನ್ಸ್‌ ತಿಳಿದಿರಬೇಕು. ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಉಳ್ಳವರಿಗೆ ಆದ್ಯತೆ

    ಸಿಸ್ಟಂ ಅಡ್ಮಿನಿಸ್ಟ್ರೇಟರ್‌: ಅಂಗೀಕೃತ ವಿಶ್ವವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌/ಎಲೆಕ್ಟ್ರಾನಿಕ್‌ ಮತ್ತು ಕಮ್ಯೂನಿಕೇಷನ್ಸ್‌/ಇನ್ಫಾರ್ಮೇಷನ್‌ ಸೈನ್ಸ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ತಾಂತ್ರಿಕ ಪದವಿಯನ್ನು ತೇರ್ಗಡೆ ಮಾಡಿರಬೇಕು. ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಜೊತೆಗೆ ಕೋರ್‌ ಬ್ಯಾಂಕಿಂಗ್‌, ನೆಟ್‌ವರ್ಕಿಂಗ್‌, ಸೈಬರ್‌ ಸೆಕ್ಯೂರಿಟಿಯಲ್ಲಿ ಪಾಂಡಿತ್ಯ ಹೊಂದಿರಬೇಕು.

    ಕಚೇರಿ ಸಹಾಯಕರು (ಅಟೆಂಡರ್‌): ಕನ್ನಡ ಪ್ರಥಮ ಭಾಷೆಯೊಂದಿಗೆ ಎಸ್‌ಎಸ್‌ಎಲ್‌ಸಿ, ಕನ್ನಡದಲ್ಲಿ ಮಾತನಾಡುವ, ಬರೆಯುವ, ಅರ್ಥ ಮಾಡಿಕೊಳ್ಳುವ, ಓದುವ ಜ್ಞಾನ ಉಳ್ಳವರಿಗೆ ಆದ್ಯತೆ

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ಸಾಮಾನ್ಯ ವರ್ಗಕ್ಕೆ 35 ವರ್ಷ, ಹಿಂದುಳಿದ ವರ್ಗ/ಜಾರಿಗೆ 38 ವರ್ಷ, ಪರಿಶಿಷ್ಟ ಜಾತಿ/ವರ್ಗಕ್ಕೆ 40 ವರ್ಷ ನಿಗದಿಪಡಿಸಲಾಗಿದೆ.

    ವೇತನ ಶ್ರೇಣಿ: ಕಿರಿಯ ಸಹಾಯಕರು -II; 27650-650-29600-750-32600-850-36000-950-39800- 1100-46400-1250-52650.
    ಸಿಸ್ಟಂ ಅಡ್ಮಿನಿಸ್ಟ್ರೇಟರ್:‌ 45300-1100-46400-1250-53900-1450-62600-1650-72500-1900-83900- 2200-88300
    ಕಚೇರಿ ಸಹಾಯಕರು (ಅಟೆಂಡರ್‌) : 23500-550-24600-600-27000-650-29600-750-32600-850-36000-950-39800-1100-46400-1250-47650

    ಅರ್ಜಿ ಶುಲ್ಕ:ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ರೂ.1180 ಡಿಡಿ ಪೇ/ಆರ್ಡರ್‌ನ್ನು “ಪ್ರಧಾನ ವ್ಯವಸ್ಥಾಪಕರು, ಶ್ರೀ ಸುಧಾ ಕೋ ಅಪರೇಟಿವ್‌ ಬ್ಯಾಂಕ್‌ ಲಿ., ಬೆಂಗಳೂರು” ಇಲ್ಲಿಗೆ ಪಾವತಿ ಮಾಡಬೇಕು.

    ಅರ್ಜಿ ಸಲ್ಲಿಸುವ ರೀತಿ;
    ಅರ್ಜಿಯನ್ನು ಪ್ರಧಾನ ವ್ಯವಸ್ಥಾಪಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ, “ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ಶ್ರೀ ಸುಧಾ ಕೋ-ಆಪರೇಟಿವ್‌ ಬ್ಯಾಂಕ್‌ ಲಿ., ನಂ.195/33 ” ಶ್ರೀ ಸುಧಾ ರಜತ ಭವನ”, ಆರ್.ವಿ.ರಸ್ತೆ, ಜಯನಗರ, ಬೆಂಗಳೂರು-560004 ಕ್ಕೆ ದಿನಾಂಕ ಫೆ.23, 2024 ಸಮಯ 5.00 ಗಂಟೆಯೊಳಗೆ ತಲುಪಿಸಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ಅರ್ಜಿ ನಮೂನೆಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ, ಅಧಿಕೃತ ವೆಬ್‌ಸೈಟ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • DULT Recruitment 2024: ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗ; ಹುದ್ದೆ ಕುರಿತ ಮಾಹಿತಿ ಇಲ್ಲಿದೆ

    DULT Recruitment 2024: ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಉದ್ಯೋಗ; ಹುದ್ದೆ ಕುರಿತ ಮಾಹಿತಿ ಇಲ್ಲಿದೆ

    DULT Recruitment 2024: ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರಕಾರದ ಅಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನಗರ ಸಾರಿಗೆ ವಿಶೇಷಜ್ಞರು, ಅಭಿಯಂತರರು ಸಿವಿಲ್‌ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 20-02-2024 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಅಧಿಸೂಚನೆಯಲ್ಲಿ ಹೇಳಿರುವ ಪ್ರಕಾರ ಈ ಹುದ್ದೆಗಳು ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಯ ಒಪ್ಪಂದದ ಮೇರೆ ನೇಮಕ ಮಾಡಲಾಗುವುದು. ಅಭ್ಯರ್ಥಿಯ ಕಾರ್ಯನಿರ್ವಹಣೆಯು ಮೊದಲ ವರ್ಷದ ಕೊನೆಗೆ ನಡೆಸುವ ಮೌಲ್ಯಾಂಕ ತೃಪ್ತಿಯಾಗಿದ್ದಲ್ಲಿ ಪುನಃ ಒಂದು ವರ್ಷದ ಅವಧಿಗೆ ಏರಿಸಲಾಗುವುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2024

    ಹುದ್ದೆಗಳ ವಿವರ
    ಹುದ್ದೆಗಳು: ನಗರ ಸಾರಿಗೆ ವಿಶೇಷಜ್ಞರು -ಒಟ್ಟು 01 ಹುದ್ದೆ ಖಾಲಿ ಇದ್ದು, ಅಭ್ಯರ್ಥಿಗಳಿಗೆ 10 ವರ್ಷಗಳ ಅನುಭವ ಇರಬೇಕು.
    ಅಭಿಯಂತರರು-ಸಿವಿಲ್‌ (ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಇಲಾಖೆಯ ದರ್ಜೆಗೆ ಸಮಾನದ)- 01 ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಅಭ್ಯರ್ಥಿಗೆ 15ವರ್ಷದ ಅನುಭವ ಇರಬೇಕು ಎಂದು ನೋಟಿಫಿಕೇಶನ್‌ನಲ್ಲಿ ಹೇಳಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.

    ಶೈಕ್ಷಣಿಕ ಅರ್ಹತೆ: ನಗರ ಸಾರಿಗೆ ವಿಶೇಷಜ್ಞರು ಈ ಹುದ್ದೆಗೆ ಅಭ್ಯರ್ಥಿಗಳು ಸಾರಿಗೆ ಇಂಜಿನಿಯರಿಂಗ್‌ ವಿಷಯಗಳಲ್ಲಿ ಮಾಸ್ಟರ್ಸ್‌ ಪದವಿ ಅಥವಾ ತತ್ಸಮಾನ ಅಥವಾ ಹೆಚ್ಚಿನ ಪದವಿ ಹೊಂದಿರತಕ್ಕದ್ದು.
    ಅಭಿಯಂತರರು – ಸಿವಿಲ್‌ ಈ ಹುದ್ದೆಗೆ ಅಭ್ಯರ್ಥಿಗಳು ಸಿವಿಲ್‌ ಇಂಜಿನಿಯರಿಂಗ್‌ ಪದವಿಯೊಂದಿಗೆ ನಗರ ರಸ್ತೆಗಳು ಮತ್ತು ಸಿವಿಲ್‌ ಇಂಜಿನಿಯರ್‌ ಯೋಜನೆಗಳ ವಿಷಯದಲ್ಲಿ ಕಾರ್ಯಪಾಲಕ ಅಭಿಯಂತರರ ದರ್ಜೆಗೆ ಸಮಾನದ ಸೇವೆಯಲ್ಲಿ ಕನಿಷ್ಠ 15 ವರ್ಷಗಳ ಅನುಭ ಹೊಂದಿರಬೇಕು.

    ಅರ್ಹತೆ: ತಂಡ ನಿರ್ವಹಿಸುವ ಕೌಶಲ್ಯದೊಂದಿಗೆ ನಾಯಕತ್ವ ಗುಣ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವುದು ಅತ್ಯಗತ್ಯ.

    ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

    ತಮ್ಮ ಜಿ-ಮೇಲ್‌ ಐಡಿ ಬಳಸಿ ಇಲ್ಲಿ ನೀಡಲಾಗಿರುವ ಲಿಂಕ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧದಿಂದ ಕಳುಹಿಸಲಾದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
    ನಗರ ಸಾರಿಗೆ ವಿಶೇಷಜ್ಞರ ಹುದ್ದೆಗೆ ಲಿಂಕ್
    ಅಭಿಯಂತರರು-ಸಿವಿಲ್‌ ಹುದ್ದೆಗೆ ಲಿಂಕ್‌

    ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

  • IDBI Bank Karnataka Jobs 2024: ಐಡಿಬಿಐ ಬ್ಯಾಂಕ್‌ನಿಂದ ಭರ್ಜರಿ ಉದ್ಯೋಗಾವಕಾಶ, 500 ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌ಗಳ ನೇಮಕ, ಲಕ್ಷಕ್ಕಿಂತಲೂ ಅಧಿಕ ವೇತನ

    IDBI Bank Karnataka Jobs 2024: ಐಡಿಬಿಐ ಬ್ಯಾಂಕ್‌ನಿಂದ ಭರ್ಜರಿ ಉದ್ಯೋಗಾವಕಾಶ, 500 ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌ಗಳ ನೇಮಕ, ಲಕ್ಷಕ್ಕಿಂತಲೂ ಅಧಿಕ ವೇತನ

    IDBI Bank JOB: ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಡಿಬಿಐನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ‘O’ ಹುದ್ದೆಯ ನೇಮಕಾತಿ ನಡೆಯಲಿದೆ. ಹುದ್ದೆಯ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಐಡಿಬಿಐ ಬ್ಯಾಂಕ್ (IDBI)ಸೇರಲು ಬಯಸುವ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಮತ್ತು ಫೈನಾನ್ಸ್‌ನಲ್ಲಿ ತರಬೇತಿ ನೀಡಲು IDBI ಬ್ಯಾಂಕ್ ಯುವ, ಕ್ರಿಯಾತ್ಮಕ ಪದವೀಧರರಿಂದ 1 ವರ್ಷದ ಬ್ಯಾಂಕಿಂಗ್ ಮತ್ತು ಹಣಕಾಸು (PGDBF) ನಲ್ಲಿ ಆಯಾ ಕ್ಯಾಂಪಸ್‌ನಲ್ಲಿ 6 ತಿಂಗಳ ತರಗತಿಯ ಅಧ್ಯಯನ, 2 ತಿಂಗಳ ಇಂಟರ್ನ್‌ಶಿಪ್ ಮತ್ತು 4 ತಿಂಗಳ ಆನ್ ಜಾಬ್ ಟ್ರೈನಿಂಗ್ (OJT) ಒಳಗೊಂಡಿರುವ ಸ್ನಾತಕೋತ್ತರ ಡಿಪ್ಲೊಮಾಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತದೆ. ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಯು PGDBF ಡಿಪ್ಲೊಮಾವನ್ನು ನೀಡಲಾಗುವುದು. ಅರ್ಹತಾ ಮಾನದಂಡಗಳನ್ನು ಪೂರೈಸಿದ ಅಭ್ಯರ್ಥಿಯು ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘O’) ಆಗಿ ಬ್ಯಾಂಕ್‌ಗೆ ಸೇರ್ಪಡೆಗೊಳ್ಳುತ್ತಾರೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 12-02-2024
    ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-02-2024
    ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-02-2024
    ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 17-03-2024

    ಹುದ್ದೆಗಳ ವಿವರ:
    ಹುದ್ದೆ: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯ ನೇಮಕಾತಿ ನಡೆಯಲಿದೆ.
    ಹುದ್ದೆ ಸಂಖ್ಯೆ: 500

    ಅರ್ಜಿ ಶುಲ್ಕ: SC/ST/PWD ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ. 200/-, ರೂ. ರೂ.1000 ಇತರರಿಗೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕು. (ii) ಡೆಬಿಟ್ ಕಾರ್ಡ್‌ಗಳು (ರುಪೇ/ವೀಸಾ/ಮಾಸ್ಟರ್‌ಕಾರ್ಡ್/ಮ್ಯಾಸ್ಟ್ರೋ), ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್‌ಗಳ ಮೂಲಕ ಪಾವತಿಯನ್ನು ಮಾಡಬಹುದು.

    ಶೈಕ್ಷಣಿಕ ಅರ್ಹತೆ:

    • ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಿಂದ ಪದವೀಧರರಾಗಿರಬೇಕು.
      -ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು
      -ಪ್ರಾದೇಶಿಕ ಭಾಷೆಯಲ್ಲಿ ಪ್ರಾವೀಣ್ಯತೆಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

    ವಯೋಮಿತಿ: ಅಭ್ಯರ್ಥಿಯ ವಯಸ್ಸು ಕನಿಷ್ಠ: 20 ವರ್ಷಗಳು, ಗರಿಷ್ಠ: 25 ವರ್ಷಗಳನ್ನು ಮೀರಿರಬಾರದು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳು 3 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಸ್ಟೈಫಂಡ್‌ ವಿವರ: ಮಾಸಿಕ ರೂ.5000, ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ರೂ.15,000 ನ್ನು ಆರು ತಿಂಗಳ ತರಬೇತಿ ಅವಧಿಯಲ್ಲಿ ಮಾಸಿಕ ಸ್ಟೈಫಂಡ್‌ ರೀತಿಯಲ್ಲಿ ನೀಡಲಾಗುತ್ತದೆ. ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌ಗೆ ಆಯ್ಕೆಯಾದವರಿಗೆ ವಾರ್ಷಿಕ ಮೊದಲಿಗೆ 6.14 ಲಕ್ಷದಿಂದ 6.50 ಲಕ್ಷ ಸಂಭಾವನೆ ನೀಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಮಾಡಲಾಗುತ್ತದೆ.

    ಅರ್ಜಿ ಸಲ್ಲಿಸುವ ರೀತಿ
    ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಫೆ.12, 2024 ರಂದು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ನೀಡಲಾಗುವ ಲಿಂಕ್‌ ಕ್ಲಿಕ್‌ ಮಾಡುವುದರ ಮೂಲಕ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಲಿಂಕ್‌ಗಾಗಿ ವೆಬ್‌ ಪೇಜ್‌ ಲಿಂಕ್ ಇಲ್ಲಿ ನೀಡಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • NIACL Recruitment 2024: ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಯಲ್ಲಿ 300 ಸಹಾಯಕರ ಹುದ್ದೆಗಳು; ಉತ್ತಮ ವೇತನ, ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

    NIACL Recruitment 2024: ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಯಲ್ಲಿ 300 ಸಹಾಯಕರ ಹುದ್ದೆಗಳು; ಉತ್ತಮ ವೇತನ, ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

    NIACL Recruitment 2024: ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ 300 ಸಹಾಯಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಇತರ ವಿಧಾನಗಳಿಂದ ಅರ್ಜಿ ಸಲ್ಲಿಕೆಯ ವಿಧಾನವನ್ನು ಸ್ವೀಕರಿಸಲಾಗುವುದಿಲ್ಲ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
    ಶ್ರೇಣಿ I ಆನ್‌ಲೈನ್ ಪರೀಕ್ಷೆ (ಪೂರ್ವಭಾವಿ ಪರೀಕ್ಷೆ): 02/03/2024 (ಶನಿವಾರ)
    ಶ್ರೇಣಿ II ಆನ್‌ಲೈನ್ ಪರೀಕ್ಷೆ (ಮುಖ್ಯ ಪರೀಕ್ಷೆ): ನಂತರ ತಿಳಿಸಲಾಗುವುದು
    ಕರೆ ಪತ್ರಗಳ ಡೌನ್‌ಲೋಡ್: ಪ್ರತಿ ಪರೀಕ್ಷೆಯ ದಿನಾಂಕಕ್ಕೆ 7 ದಿನಗಳ ಮೊದಲು (ತಾತ್ಕಾಲಿಕ) (ಪೂರ್ವಭಾವಿ ಪರೀಕ್ಷೆಗಳು ಮತ್ತು ಮುಖ್ಯ ಪರೀಕ್ಷೆ)

    ಹುದ್ದೆಗಳ ವಿವರ;
    ಹುದ್ದೆ; ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
    ಒಟ್ಟು ಹುದ್ದೆ: 300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಖಾಲಿ ಹುದ್ದೆಗಳು ಇರುವ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಯಾವುದು?
    ಆಂದ್ರಪ್ರದೇಶ-6 ಅಸ್ಸಾಮ್‌-8 ಚಂಡೀಗಢ-4, ಛತ್ತೀಸ್‌ಗಡ-10, ಡೆಲ್ಲಿ-23, ಗೋವಾ-1, ಗುಜರಾತ್‌-24, ಹರಿಯಾಣ-3, ಜಮ್ಮು ಕಾಶ್ಮೀರ-3, ಕರ್ನಾಟಕ-17, ಕೇರಳ-24, ಮಧ್ಯಪ್ರದೇಶ-9, ಮಹಾರಾಷ್ಟ್ರ-81, ಮಿಜೋರಾಂ-1, ಒಡಿಶಾ-8, ಪಂಜಾಬ್‌-7, ರಾಜಸ್ಥಾನ-5, ತಮಿಳುನಾಡು-32, ತೆಲಂಗಾಣ-6, ತ್ರಿಪುರ-3, ಉತ್ತರ ಪ್ರದೇಶ-14, ಉತ್ತರಖಂಡ-5, ಪಶ್ಚಿಮ ಬಂಗಾಳ-6

    ವಯೋಮಿತಿ: ಕನಿಷ್ಠ ವಯಸ್ಸು 21 ವರ್ಷಗಳು, ಗರಿಷ್ಠ ವಯಸ್ಸು: 01/01/2024 ರಂತೆ 30 ವರ್ಷಗಳು. ಅಭ್ಯರ್ಥಿಗಳು 02/01/1994 ಕ್ಕಿಂತ ಮೊದಲು ಮತ್ತು 01/01/2003 ಕ್ಕಿಂತ ನಂತರ ಹುಟ್ಟಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ವಿಧಾನ:
    ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ (ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ). ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳನ್ನು ಅಂತಿಮ ಆಯ್ಕೆಯ ಮೊದಲು ಪ್ರಾದೇಶಿಕ ಭಾಷಾ ಪರೀಕ್ಷೆಗೆ ಮತ್ತಷ್ಟು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

    ಅರ್ಜಿ ಶುಲ್ಕ;
    SC/ST/PwBD ಅಭ್ಯರ್ಥಿಗಳಿಗೆ ರೂ. 100/-
    ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. 850/-

    ವೇತನ ಶ್ರೇಣಿ: ರೂ. 22406-1305(1)-23710-1425(2)-26560-1605(5)-34585-1855(2)-38295-2260(3)-45075-2345(2)-49765-2565-25602(6)
    ಒಟ್ಟು ಸರಿಸುಮಾರು ರೂ 37,000/- ಮಾಸಿಕ ವೇತನವಿರಲಿದೆ. ಪೋಸ್ಟ್ ಮಾಡುವ ಸ್ಥಳವನ್ನು ಅವಲಂಬಿಸಿ ಇತರ ಭತ್ಯೆಗಳು ಬದಲಾಗಬಹುದು.

    ಪರೀಕ್ಷೆ ಯಾವ ರೀತಿ ಇರುತ್ತದೆ?
    ಇಂಗ್ಲೀಷ್‌ ಪರೀಕ್ಷೆ, ಸಾಮಾನ್ಯ ಜ್ಞಾನ, ಕಂಪ್ಯೂಟರ್‌ ಜ್ಞಾನ, ತಾರ್ಕಿಕ ಸಾಮರ್ಥ್ಯ, ಸಂಖ್ಯಾತ್ಮಕ ಸಾಮರ್ಥ್ಯ ಈ ವಿಷಯಕ್ಕೆ ಕುರಿತಾಗಿ ಒಟ್ಟು ನೂರು ಅಂಕಗಳ ಪ್ರಶ್ನೆಗಳಿರುತ್ತದೆ. ಅರುವತ್ತು ನಿಮಿಷಗಳ ಸಮಯದಲ್ಲಿ ಆನ್‌ಲೈನ್‌ ಪರೀಕ್ಷೆ ನಡೆಸಲಾಗುವುದು. ಇಲ್ಲಿ ನೀವು ಗಳಿಸಿದ ಕಟ್‌ಆಫ್‌ ಅಂಕಗಳ ಆಧಾರದಲ್ಲಿ ನಿಮ್ಮನ್ನು ಮುಂದಿನ ಹಂತದ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್ ಮಾಡಿ

  • Karnataka Jobs: ಮಹಾಗನಗರ ಪಾಲಿಕೆಯಲ್ಲಿ 93 ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ವಿದ್ಯಾರ್ಹತೆಯ ಅಗತ್ಯವಿಲ್ಲ

    Karnataka Jobs: ಮಹಾಗನಗರ ಪಾಲಿಕೆಯಲ್ಲಿ 93 ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾವುದೇ ವಿದ್ಯಾರ್ಹತೆಯ ಅಗತ್ಯವಿಲ್ಲ

    Vijayapura City Corporation: ವಿಜಯಪುರ ಮಹಾನಗರಪಾಲಿಕೆಗೆ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 05-02-2024 ರಿಂದ 05-03-2024 ರವರೆಗೆ ವಿಜಯಪುರ ಮಹಾನಗರಪಾಲಿಕೆಯ ಆಡಳಿತ ಶಾಖೆಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಕಚೇರಿಗೆ ಸಲ್ಲಿತಕ್ಕದ್ದು. ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024 (ಸಾಯಂಕಾರಲ 05.30 ಘಂಟೆಯೊಳಗೆ)

    ಹುದ್ದೆಗಳ ವಿವರ;
    ಹುದ್ದೆ ಹೆಸರು: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ʼಪೌರಕಾರ್ಮಿಕರುʼ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
    ಹುದ್ದೆ ಸಂಖ್ಯೆ: 93 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ;
    ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು
    ಎರಡು ವರ್ಷಕ್ಕಿಂತ ಕಡಿಮೆಯಿಲ್ಲದಂತೆ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡಬೇಕು

    ವಯೋಮಿತಿ: ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು. ದಿನಾಂಕ 09-03-2023 ಕ್ಕೆ ಅನುಗುಣವಾಗುವಂತೆ ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರಿರಬಾರದು.

    ಶೈಕ್ಷಣಿಕ ವಿದ್ಯಾರ್ಹತೆ: ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಭಾಷೆ ಮಾತನಾಡುವ ಕುರಿತು ಜ್ಞಾನವಿರಬೇಕು.

    ವೇತನ ಶ್ರೇಣಿ: ಪೌರಕಾರ್ಮಿಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000 ರಿಂದ ರೂ.28,950 ರೂ. ವೇತನವಿರುತ್ತದೆ.

    ಅರ್ಜಿ ನಮೂನೆಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:
    ಜನ್ಮ ದಿನಾಂಕವನ್ನು ನಮೂದಿಸಿರುವ ಶೈಕ್ಷಣಿಕ/ವಿದ್ಯಾರ್ಹತೆ ದಾಖಲಾತಿಗಳು ಅಥವಾ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ಅಥವಾ ಮತದಾರರ ಗುರುತಿನ ಚೀಟಿ ಅಥವಾ ಪ್ರಾವಿಡೆಂಟ್‌ ಫಂಡ್‌ ಅಥವಾ ಇ.ಎಸ್‌.ಐ. ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

    ಅರ್ಜಿ ಸಲ್ಲಿಕೆಯ ವಿಧಾನ
    ನಿಗದಿಪಡಿಸಿದ ನಮೂನೆಯಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಬೇರೆ ಯಾವುದೇ ನಮೂನೆಯಲ್ಲಾಗಲೀ ಅಥವಾ ಬೆರಳಚ್ಚು/ಜೆರಾಕ್ಸ್‌ ಪ್ರತಿಯಲ್ಲಿ ಸಲ್ಲಿಸಲ್ಪಡುವ ಅರ್ಜಿಯನ್ನು ತಿರಸ್ಕರಿಸಲಾಗುವುದು.
    ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಬಾರಿ ಅರ್ಜಿ ಸಲ್ಲಿಸಿದ್ದಲ್ಲಿ, ಒಂದು ಅರ್ಜಿಯನ್ನು ಪರಿಗಣಿಸಲಾಗುವುದು. ಉಳಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
    ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಸಮಯದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
    ಅರ್ಜಿಗಳನ್ನು ಖುದ್ದಾಗಿ ಕಚೇರಿಗೆ ಸಲ್ಲಿಸತಕ್ಕದ್ದು. ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಅರ್ಜಿ ಭರ್ತಿ ಮಾಡುವ ಮೊದಲು ಕಡ್ಡಾಯವಾಗಿ ಓದಬೇಕು. ಅಲ್ಲಿ ನೀಡಿರುವ ಸೂಚನೆಗಳನ್ವಯವೇ ಅರ್ಜಿ ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅಂತವರ ವಿರುದ್ಧ ಪಾಲಿಕೆಯ ಕಾನೂನಿನ್ವಯ ಸೂಕ್ರ ಕ್ರಮ ಕೈಗೊಳ್ಳಲಾಗುವುದು.

    ವಿಶೇಷ ಸೂಚನೆ: ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಯಾವುದೇ ಅನುಮಾನಗಳಿದ್ದಲ್ಲಿ ಕಚೇರಿಯ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಕಚೇರಿಯ ಆಡಳಿತ ಶಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಅರ್ಜಿ ಸಲ್ಲಿಸುವುದು.

    ಅಧಿಸೂಚನೆಯಲ್ಲಿ ನೀಡಿದ ಹುದ್ದೆಯ ವಿವರಗಳನ್ನು ಪಾಲಿಕೆ ವೆಬ್‌ಸೈಟ್‌ www.vijayapuracity.mrc.gov.in ನಲ್ಲಿ ಹಾಗೂ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ವೀಕ್ಷಿಸಬಹುದು.