Blog

  • NIMHANS Jobs: ನಿಮ್ಹಾನ್ಸ್‌ನಲ್ಲಿ ಡೇಟಾ ಸುಪರ್‌ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ

    NIMHANS Jobs: ನಿಮ್ಹಾನ್ಸ್‌ನಲ್ಲಿ ಡೇಟಾ ಸುಪರ್‌ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ

    NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ, ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 01 ಹುದ್ದೆ ಖಾಲಿ ಇದ್ದು, ಡೇಟಾ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ನೇರ ಸಂದರ್ಶನ ನಡೆಯಲಿದ್ದು, ದಿನಾಂಕ 05-Jun-2024 ರಂದು 10:00 AM ರಂದು ವಾಕ್-ಇನ್-ಇಂಟರ್ವ್ಯೂ ನಡೆಯಲಿದೆ.

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆಯಾದ ದಿನಾಂಕ: 18-05-2024
    ನೇರ ಸಂದರ್ಶನದ ದಿನಾಂಕ: 05-ಜೂನ್-2024 10:00 AM ಗೆ.

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಇಲ್ಲಿ ಡೇಟಾ ಮೇಲ್ಚಿಚಾರಕರು ಹುದ್ದೆ ಖಾಲಿ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40000 ವೇತನ ಸಿಗಲಿದೆ.

    ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಮಾಡಿರಬೇಕು.

    ವಯೋಮಿತಿ: ಡೇಡಾ ಮೇಲ್ವಿಚಾರಕರು ಹುದ್ದೆಗೆ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಲಿಖಿತ/ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಡೇಟಾ ಮೇಲ್ಚಿಚಾರಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಯೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ ಈ ಕೆಳಗೆ ನೀಡಲಾಗಿದೆ.
    ನೇರ ಸಂದರ್ಶನದ ವಿಳಾಸ;
    Lecture hall-1, 1st floor, Old Administrative Building, NIMHANS, Bengaluru-560029 ಇಲ್ಲಿಗೆ ದಿನಾಂಕ 05-Jun-2024 10:00 AM ರಂದು ಅಭ್ಯರ್ಥಿಗಳು ಹಾಜರಿರಬೇಕು.

    ಅಧಿಕೃತ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ nimhans.ac.in
    ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • IAF Recritment 2024: ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ಹುಡುಕುವವರಿಗೆ ಸುವರ್ಣಾವಕಾಶ; 304 ವಿವಿಧ ಹುದ್ದೆಗಳು, ಮಾಸಿಕ ಲಕ್ಷಕ್ಕೂ ಹೆಚ್ಚು ಸಂಬಳ

    IAF Recritment 2024: ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ಹುಡುಕುವವರಿಗೆ ಸುವರ್ಣಾವಕಾಶ; 304 ವಿವಿಧ ಹುದ್ದೆಗಳು, ಮಾಸಿಕ ಲಕ್ಷಕ್ಕೂ ಹೆಚ್ಚು ಸಂಬಳ

    IAF Recritment2024: ಭಾರತೀಯ ವಾಯುಪಡೆಯಲ್ಲಿ (IAF) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 304 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕಮಿಷನ್ಡ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ 28-Jun-2024 ಕೊನೆಯ ದಿನವಾಗಿದ್ದು, ಇದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 30-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-06-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಇಂಡಿಯನ್ ಏರ್ ಫೋರ್ಸ್ (IAF) ಕಮಿಷನ್ಡ್‌ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 304 ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.56100-177500/- ವೇತನ ಸಿಗಲಿದೆ.

    ಹುದ್ದೆಯ ಹೆಸರು ಮತ್ತು ಪೋಸ್ಟ್‌ಗಳ ಸಂಖ್ಯೆ
    ಫ್ಲೈಯಿಂಗ್ ಬ್ರಾಂಚ್ – 29 ಹುದ್ದೆಗಳು
    ಗ್ರೌಂಡ್ ಡ್ಯೂಟಿ (ತಾಂತ್ರಿಕ) – 156 ಹುದ್ದೆಗಳು
    ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 119 ಹುದ್ದೆಗಳು

    ವಿದ್ಯಾರ್ಹತೆ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ IAF ಮಾನದಂಡಗಳ ಪ್ರಕಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ:
    ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-24 ವರ್ಷದೊಳಗಿರಬೇಕು.
    ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-26 ವರ್ಷದೊಳಗಿರಬೇಕು.
    ಭಾರತೀಯ ವಾಯುಪಡೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸಲಾಗುತ್ತದೆ.

    ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.550/-ನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕು. ಬೇರೆ ಯಾವುದೇ ವಿಧಾನದಿಂದ ಪಾವತಿ ಮಾಡಬಾರದು.

    ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ವೇತನ:
    ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ಇರಲಿದೆ.
    ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) ಹುದ್ದೆಗೆ ಆಯ್ಕೆಯಾದವರಿಗೆ IAF ಮಾನದಂಡಗಳ ಪ್ರಕಾರ ವೇತನ ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • KSFES Jobs: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 975  ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

    KSFES Jobs: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 975 ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

    KSFES Recruitment 2024: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 975 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೈರ್‌ಮ್ಯಾನ್, ಅಗ್ನಿಶಾಮಕ ಇಂಜಿನ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಕರ್ನಾಟಕ ಸರಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ. ಹಾಗಾಗಿ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES) ಇಲ್ಲಿ 975 ಹುದ್ದೆಗಳಿಗೆ ಅತಿ ಶೀಘ್ರದಲ್ಲಿ ಅಧಿಸೂಚನೆ ಪ್ರಕಟಗೊಳ್ಳಲಿದೆ.
    ಫೈರ್‌ಮ್ಯಾನ್, ಫೈರ್ ಇಂಜಿನ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.33450-62600/- ಪ್ರತಿ ತಿಂಗಳು ವೇತನ ದೊರಕಲಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಶೀಘ್ರದಲ್ಲೇ ನವೀಕರಿಸಲಾಗುತ್ತಿದೆ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ

    ಹುದ್ದೆ ಸಂಖ್ಯೆ ಮತ್ತು ಹೆಸರು;
    ಅಗ್ನಿಶಾಮಕ ಠಾಣಾಧಿಕಾರಿ – 64 ಹುದ್ದೆಗಳು
    ಚಾಲಕ ತಂತ್ರಜ್ಞ – 27 ಹುದ್ದೆಗಳು
    ಅಗ್ನಿಶಾಮಕ ಯಂತ್ರ ಚಾಲಕ – 153 ಹುದ್ದೆಗಳು
    ಅಗ್ನಿಶಾಮಕ- 731 ಹುದ್ದೆಗಳು

    ವಿದ್ಯಾರ್ಹತೆ: 10 ನೇ, ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

    ವಯೋಮಿತಿ: 18 ರಿಂದ 28 ವರ್ಷದೊಳಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. OBC, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, SC, ST ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ ರೂ.250/-, SC/ST ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

  • IIT Dharwad Jobs: ಸ್ನಾತಕೋತ್ತರ ಪದವಿ ಆಗಿದ್ರೆ ಇಲ್ಲಿದೆ ಬಂಪರ್‌ ಉದ್ಯೋಗಾವಕಾಶ; ಮಾಸಿಕ 42 ಸಾವಿರ ಸಂಬಳ

    IIT Dharwad Jobs: ಸ್ನಾತಕೋತ್ತರ ಪದವಿ ಆಗಿದ್ರೆ ಇಲ್ಲಿದೆ ಬಂಪರ್‌ ಉದ್ಯೋಗಾವಕಾಶ; ಮಾಸಿಕ 42 ಸಾವಿರ ಸಂಬಳ

    IIT Dharwad Recruitment 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad) ತನ್ನ ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹಿರಿಯ ಸಂಶೋಧನಾ ಫೆಲೋ (SRF) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯ ಪೋಸ್ಟಿಂಗ್‌ ಧಾರವಾಡ – ಕರ್ನಾಟಕದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 30-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 17-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 30-05-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಹುದ್ದೆ ಹೆಸರು ಮತ್ತು ಸಂಖ್ಯೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT ಧಾರವಾಡ) ಇಲ್ಲಿ ಸೀನಿಯರ್‌ ರಿಸರ್ಚ್‌ ಫೆಲೋ (ಎಸ್‌ಆರ್‌ಎಫ್) ಒಂದು ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.42,000 ವೇತನ ಸಿಗಲಿದೆ. ಧಾರವಾಡದಲ್ಲಿ ಈ ಹುದ್ದೆಗೆ ಆಯ್ಕೆಯಾದವರಿಗೆ ಪೋಸ್ಟಿಂಗ್‌ ಆಗಲಿದೆ.

    ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ತೆರ್ಗಡೆ ಹೊಂದಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಎರಡು ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿದ್ದರೆ ಉತ್ತಮ.

    ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಎಸ್‌ಆರ್‌ಎಫ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 35 ವರ್ಷ ಮೀರಿರಬಾರದು.
    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

  • BEML Jobs: ಕಾರು ಡ್ರೈವರ್‌ ಹುದ್ದೆಗಳು ಖಾಲಿ ಇದೆ; ಮಾಸಿಕ ರೂ.23,500 ವೇತನ

    BEML Jobs: ಕಾರು ಡ್ರೈವರ್‌ ಹುದ್ದೆಗಳು ಖಾಲಿ ಇದೆ; ಮಾಸಿಕ ರೂ.23,500 ವೇತನ

    BEML Recruitment 2024: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 04 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಟಾಫ್ ಡ್ರೈವರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಪೋಸ್ಟಿಂಗ್‌ ಬೆಂಗಳೂರು – ಕರ್ನಾಟಕದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 05-Jun-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ; 15-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-06-2024

    ಹುದ್ದೆಗಳ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು:
    ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಲ್ಲಿ 04 ಹುದ್ದೆಗಳು ಖಾಲಿ ಇದ್ದು, ಸ್ಟಾಫ್‌ ಡ್ರೈವರ್‌ (ಸಿಬ್ಬಂದಿ ಚಾಲಕ) ಪೋಸ್ಟ್‌ಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20000-23500/- ವೇತನ ದೊರಕಲಿದೆ.

    ವಿದ್ಯಾರ್ಹತೆ: BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ ಮೀರಿರಬಾರದು. ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST ಅಭ್ಯರ್ಥಿಗಳು ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ/EWS/OBC/ExSM ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ಪಾವತಿಸಬೇಕಾಗಿದೆ. ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ? ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಈ ಕೆಳಗೆ ನೀಡಿದ ವಿಳಾಸಕ್ಕೆ ಕಳುಹಿಸಬೇಕು;
    ವಿಳಾಸ: Sr. Manager (Corporate Recruitment), Recruitment Cell, BEML Soudha, No.23/1, 4th Main Road, S.R Nagar, Bangalore-560027

  • EPFO Jobs: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಸ್ಟೆನೋಗ್ರಾಫರ್‌ ಹುದ್ದೆಗಳ ಭರ್ತಿ; ಒಟ್ಟು 62 ಹುದ್ದೆಗಳು ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

    EPFO Jobs: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಸ್ಟೆನೋಗ್ರಾಫರ್‌ ಹುದ್ದೆಗಳ ಭರ್ತಿ; ಒಟ್ಟು 62 ಹುದ್ದೆಗಳು ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

    EPFO Recruitment 2024: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 62 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸ್ಟೆನೋಗ್ರಾಫರ್ಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 25-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 16-05-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-05-2024

    ಹುದ್ದೆಗಳ ವಿವರ ಇಲ್ಲಿದೆ;
    ಹುದ್ದೆ ಸಂಸ್ಥೆ:
    ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನಲ್ಲಿ ಸ್ಟೆನೋಗ್ರಾಫರ್ಸ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 62 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,500-ರೂ.81100 ವೇತನ ಸಿಗಲಿದೆ.

    ಸ್ಥಳದ ಹೆಸರು ಪೋಸ್ಟ್‌ಗಳ ಸಂಖ್ಯೆ
    ಅಹಮದಾಬಾದ್ 3
    ಬಾಂದ್ರಾ (ಮುಂಬೈ) 3
    ಬೆಂಗಳೂರು 3
    ಭೋಪಾಲ್ 1
    ಭುವನೇಶ್ವರ 1
    ಚಂಡೀಗಢ 1
    ಚೆನ್ನೈ 3
    ಕೊಯಮತ್ತೂರು 3
    ದೆಹಲಿ 18
    ಫರಿದಾಬಾದ್ 2
    ಗುರುಗ್ರಾಮ 1
    ಗುವಾಹಟಿ 3
    ಹುಬ್ಬಳ್ಳಿ 1
    ಹೈದರಾಬಾದ್ 3
    ಜೈಪುರ 2
    ಕಾನ್ಪುರ್ 2
    ಕೋಲ್ಕತ್ತಾ 3
    ಪಾಟ್ನಾ 2
    ಪುಣೆ 2
    ಥಾಣೆ 2
    ತಿರುವನಂತಪುರಂ 1
    ಉಜ್ಜಯಿನಿ 1
    ವಿಜಯವಾಡ 1

    ವಯೋಮಿತಿ ಹಾಗೂ ವಿದ್ಯಾಭ್ಯಾಸ: ಇಪಿಎಫ್‌ಒ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಮತ್ತು ವಿದ್ಯಾಭ್ಯಾಸದ ಅರ್ಹತೆಯು EPFO ​​ನಿಯಮಗಳ ಪ್ರಕಾರ ಇರಬೇಕು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ: ಸ್ಟೆನೋಗ್ರಾಫರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ