Blog

  • ಆಡಳಿತ ತರಬೇತಿ ಸಂಸ್ಥೆ, ಮೈಸೂರು : 15 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

    ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಕೆಳಕಂಡ ಹುದ್ದೆಗಳನ್ನು ಗುತ್ತಿಗೆ/ ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ‌ಹೊರಡಿಸಲಾಗಿದೆ.

    ಹುದ್ದೆ ವಿವರ : ಬೋಧಕರು ( ಸಾರ್ವಜನಿಕ ಆಡಳಿತ) -02
    ಬೋಧಕರು (ಅರ್ಥಶಾಸ್ತ್ರ ಮತ್ತು ಆಡಳಿತ ) -01
    ಬೋಧಕರು ( ಮಹಿಳಾ ಅಧ್ಯಯನ ) – 01
    ಬೋಧಕರು ( ಅಭಿವೃದ್ಧಿ ಅರ್ಥಶಾಸ್ತ್ರ ಮತ್ತು ಯೋಜನೆ)- 01
    ಬೋಧಕರು ( ನಡವಳಿ ವಿಜ್ಞಾನ ) -01

    ವಿಕೋಪ ನಿರ್ವಹಣಾ ಕೇಂದ್ರ, ಆಡಳಿತ ತರಬೇತಿ ಸಂಸ್ಥೆ, ಮೈಸೂರು

    ಬೋಧಕರು ( ವಿ.ನಿ‌.ಕೇಂದ್ರ) – 2 ಹುದ್ದೆ
    ಕಮ್ಯುನಿಕೇಷನ್ – ಐಟಿ ಅಧಿಕಾರಿ (ವಿ.ನಿ.ಕೇಂದ್ರ) – 01
    ರಿಸರ್ಚ್ – ಟ್ರೈನಿಂಗ್ ಅಸೋಸಿಯೇಟ್ಸ್ : 02 ಹುದ್ದೆ
    ಸಿಸ್ಟಂ ಆಫೀಸರ್ – 02 ಹುದ್ದೆ
    ಅಸಿಸ್ಟೆಂಟ್ – 02 ಹುದ್ದೆ

    ಒಟ್ಟು ಹುದ್ದೆಗಳು : 15 ಹುದ್ದೆಗಳು

    ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ ವಿವರವು ಸಂಸ್ಥೆಯ ವೆಬ್‌ಸೈಟ್‌ www.atimysore.gov.in ನಲ್ಲಿ ಲಭ್ಯವಿರುತ್ತದೆ.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿನಾಂಕ 28-07-2021 ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ-ಮೇಲ್ ಮೂಲಕ ಮತ್ತು [email protected] ಮತ್ತು [email protected] ವಿಳಾಸಕ್ಕೆ ಕಳುಹಿಸುವುದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿಯೆ ಹಾಜರಾಗುವುದು.

    ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವುದು :

    0821-2520906( ಆಫೀಸ್) , 2520905(R),

  • ಮಂಗಳೂರಿನ ಬಾಲಭವನದಲ್ಲಿ ಉದ್ಯೋಗವಕಾಶ

    ಮಂಗಳೂರು ಜಿಲ್ಲಾ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ಸಹಾಯಕ/ ಸಂಯೋಜಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19, ಅಕ್ಟೋಬರ್ 2021

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಯಾವುದಾದರೊಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರಬೇಕು.

    ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ಮಾಸಿಕ ವೇತನ ನೀಡಲಾಗುತ್ತದೆ.

    ಅಗತ್ಯ ದಾಖಲೆಗಳು : ಆಧಾರ್ ಕಾರ್ಡ್, ಪದವು ಪಾಸ್ ಸರ್ಟಿಫಿಕೇಟ್, ಈ ಹಿಂದೆ ಉದ್ಯೋಗ ಮಾಡಿದ್ದಲ್ಲಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳು.

    ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

    ದೂರವಾಣಿ ಸಂಖ್ಯೆ : 0824-2451254

  • ಸೇನಾ ಪ್ರವೇಶ ಪರೀಕ್ಷೆ ಜುಲೈ 25 ಕ್ಕೆ

    ಭಾರತೀಯ ಸೇನೆಯು ನಡೆಸುವ ಸಾಮಾನ್ಯ ಪರೀಕ್ಷೆಯು ( ಸಿಇಇ) ಜುಲೈ 25 ರಂದು ರಾಜ್ಯದ ಮೂರು ಕೇಂದ್ರಗಳಲ್ಲಿ ನಡೆಯಲಿದೆ.
    ವೈದ್ಯಕೀಯ ಸಾಮರ್ಥ್ಯ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಲಿಖಿತ ಪರೀಕ್ಷೆಗೆ ಹಾಜರಾಗಬಹುದು.

    ಈ ಮೊದಲು ಎಪ್ರಿಲ್ 25 ರಂದು ಸಿಇಇ ನಿಗದಿ ಪಡಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು.

    ಬೆಂಗಳೂರಿನ ಕಾಮರಾಜ ರಸ್ತೆಯಲ್ಲಿರುವ ಸೇನಾ ಶಾಲೆ, ಮಂಗಳೂರಿನ ಮೂಡುಬಿದಿರೆಯಲ್ಲಿರುವ ಆಳ್ವಾಸ್ ಸಂಸ್ಥೆ, ಬೆಳಗಾವಿಯ ಕೆಎಲ್ ಇ ಸೊಸೈಟಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸೇನಾ ಪ್ರಕಟಣೆ ತಿಳಿಸಿದೆ.

  • SSC ನಲ್ಲಿ ಭರ್ಜರಿ ಉದ್ಯೋಗವಕಾಶ, 25,271 ಹುದ್ದೆ: SSLC ಪಾಸಾದವರಿಗೆ ಆದ್ಯತೆ

    ಸಿಬ್ಬಂದಿ ನೇಮಕಾತಿ ಆಯೋಗವು ( ಎಸ್ ಎಸ್ ಸಿ) ಜೆನರಲ್ ಡ್ಯೂಟಿ ಕಾನ್ಸ್‌ಟೇಬಲ್ ಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, 31-08-2021 ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿ ಹಾಗೂ ಇನ್ನಿತರ ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.

    ಹುದ್ದೆಗಳ ವಿವರ : ಗಡಿ ಭದ್ರತಾ ಪಡೆ: 7545
    ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 8464
    ಸಶಸ್ತ್ರ ಸೀಮಾ ಬಲ : 3806
    ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ : 1431
    ಅಸ್ಸಾಂ ರೈಫಲ್ಸ್ : 3785
    ಸೆಕ್ರರಿಯೇಟ್ ಸೆಕ್ಯುರಿಟಿ ಫೋರ್ಸ್ : 240

    ಒಟ್ಟು ಹುದ್ದೆಗಳ ಸಂಖ್ಯೆ : 25,271

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021
    ಆನ್ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ ಕಟ್ಟಲು ಕೊನೆಯ ದಿನಾಂಕ : 02-09-2021
    ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 04-09-2021

    ಶುಲ್ಕ : ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ ರೂ.100/- , ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
    ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಎಸ್ ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಸಲ್ಲಿಸಬಹುದು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌ 23 ವರ್ಷ ವಯೋಮಿತಿ ಮೀರಿರಬಾರದು.

    ವಿದ್ಯಾರ್ಹತೆ : ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

    ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಹೆಚ್ಚಿನ ವಿವರಗಳಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • NABARD : 162 ಹುದ್ದೆಗಳು

    ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( NABARD) ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-08-2021

    ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್ 148 ಹುದ್ದೆಗಳು
    ರಾಜಭಾಷಾ 05 ಹುದ್ದೆಗಳು
    ಸೆಕ್ಯುರಿಟಿ ಸರ್ವಿಸ್ 02 ಹುದ್ದೆಗಳು
    ಮ್ಯಾನೇಜರ್ ಇನ್ ಗ್ರೇಡ್ ಬಿ 07 ಹುದ್ದೆಗಳು

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ‌ರೂ. 100/- ಹಾಗೂ ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

    ವಯೋಮಿತಿ : ಜುಲೈ 1 ಕ್ಕೆ 2021 ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷದೊಳಗಿನವರಾಗಿರಬೇಕು. ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಹಾಗೂ ಗರಿಷ್ಠ 30 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಪದವಿ, ಸ್ನಾತಕೋತ್ತರ ಪದವಿ ಅಥವಾ ಹುದ್ದೆಗಳಿಗೆ ‌ಸಂಬಂಧಿಸಿದಂತೆ ಡಿಪ್ಲೋಮಾ ಕೋರ್ಸ್ ಪಡೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ನೇಮಕಾತಿಯ ಅಧಿಸೂಚನೆಯನ್ನು ವೀಕ್ಷಿಸಬಹುದು.

    ಆಯ್ಕೆ ಪ್ರಕ್ರಿಯೆ : ಮೂರು ಹಂತಗಳಲ್ಲಿ ನೇಮಕಾತಿಯು ನಡೆಯಲಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

  • DCPU ಯಾದಗಿರಿಯಲ್ಲಿ 11 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಮಾರ್ಗಸೂಚಿಗಳಿಗನುಗುಣವಾಗಿ ಸರಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಯಾದಗಿರಿ ವಿಶೇಷ ‌ಮತ್ತು ದತ್ತು ಕೇಂದ್ರ ಸಂಸ್ಥೆಯನ್ನು ತಾತ್ಕಾಲಿಕವಾಗಿ ‌ಪ್ರಾರಂಭಿಸಲಾಗಿದ್ದು, ನೂತನವಾಗಿ ಪ್ರಾರಂಭವಾಗಿರುವ ವಿಶೇಷ ದತ್ತು ಕೇಂದ್ರ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಅತೀ ಅವಶ್ಯಕತೆವಿರುವ ಎಲ್ಲಾ ಹುದ್ದೆಗಳನ್ನು ಹೊರಗುತ್ತಿಗೆ ಆಧಾರ ಮೇಲೆ ತಾತ್ಪೂತಿಕವಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-07-2021

    ಹುದ್ದೆ : ಮ್ಯಾನೇಜರ್ / ಕೋರ್ಡಿನೇಟರ್: 1 ಮಹಿಳಾ ಹುದ್ದೆ . ಎಂಎ/ ಎಂಎಸಡಬ್ಲೂ ಸೋಶಿಯಲ್ ವರ್ಕ್ಸ್ ಹಾಗೂ‌2 ವರ್ಷಗಳು ಕಾರ್ಯನಿರ್ವಹಿಸಿದ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
    ಸೋಶಿಯಲ್ ವರ್ಕರ್ ಕಮ್ ಅರ್ಲಿ ಚೈಲ್ಡ್ ಹುಡ್ ಎಜುಕೇಟರ್ : 1 ಮಹಿಳಾ ಹುದ್ದೆ. ಎಂ.ಎ/ಎಂಎಸ್ ಡಬ್ಲ್ಯೂ ಸೋಶಿಯಲ್ ವರ್ಕ್ಸ್‌ ಮಾಡಿರಬೇಕು.
    ಚೈಲ್ಡ್ ಡಾಕ್ಟರ್ : 1 ಮಹಿಳಾ ಹುದ್ದೆ. ಮಕ್ಕಳ ತಜ್ಞರು.‌ಎಂಬಿಬಿಎಸ್ ಮಾಡಿರಬೇಕು.
    ಸ್ಟಾಫ್ ನರ್ಸ್ : 1 ಮಹಿಳಾ ಹುದ್ದೆ. ಎ/ಎನ್/ಎಂ/ಜಿಎನ್ ಎಂ/ಡಿ.ಹೆಚ್.ಐ/ ಬಿ.ಎಸ್ಸಿ ನರ್ಸಿಂಗ್. 2 ವರ್ಷಗಳು ಕಾರ್ಯನಿರ್ವಹಿಸಿದ ಅನುಭವ ಹಾಗೂ ಕಂಪ್ಯೂಟರ್ ‌ಜ್ಞಾನ.
    ಆಯಾ : 6 ಮಹಿಳಾ ಹುದ್ದೆ. 7 ನೇ ತರಗತಿ ಪಾಸಾಗಿರಬೇಕು.
    ಚೌಕಿದಾರ್ : 1 ಮಹಿಳಾ ಹುದ್ದೆ. 7 ನೇ ತರಗತಿ ಪಾಸಾಗಿರಬೇಕು.

    ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಕರ್ನಾಟಕ ರಾಜ್ಯದ ಅಂಗೀಕೃತ ಕಾಲೇಜು / ವಿಶ್ವ ವಿದ್ಯಾಲಯಗಳಿಂದ ಶಿಕ್ಷಣ ಪಡೆದಿರಬೇಕು. ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಜೊತೆಗೆ ರೂ.100/- ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು,ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಾದಗಿರಿ ರವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು. ಮಕ್ಕಳ ರಕ್ಷಣಾ ಘಟಕ ಯೋಜನೆಯ ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಕನ್ನಡ ಮತ್ತು ಇಂಗ್ಲೀಷ್ ಜ್ಞಾನ ಅಗತ್ಯವಾಗಿರುತ್ತದೆ. ಅಭ್ಯರ್ಥಿಗಳು ಕನ್ನಡ/ ಇಂಗ್ಲೀಷ್ / ನುಡಿ / ಬರಹ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಕನಿಷ್ಠ ಅರ್ಹತೆಗಿಂತ ಹೆಚ್ಚಿನ ಅರ್ಹತೆ ಹಾಗೂ ಅನುಭವ ಇದ್ದರೆ ಆದ್ಯತೆ ನೀಡಿ ಪರಿಗಣಿಸಲಾಗುವುದು.