Blog

  • KSP : 402 ಸಿವಿಲ್ ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್) ( ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ( ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಯ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ 22.06.2021 ಸಂಜೆ 06.00 ಗಂಟೆಯವರೆಗೆ ಮತ್ತು ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : 24.06.2021 ಕ್ಕೆ ನಿಗದಿಪಡಿಸಲಾಗಿತ್ತು.

    ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲು ತೀರ್ಮಾನಿಸಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 22-06-2021 ರಿಂದ 07-07-2021 ರವರೆಗೆ ವಿಸ್ತರಿಸಲಾಗಿದೆ.

    ಅಧಿಸೂಚನೆ ದಿನಾಂಕ : 03.03.2021 ರಲ್ಲಿ ಈಗಾಗಲೇ ನಿಗದಿಪಡಿಸಿರುವಂತೆ ದಿನಾಂಕ 03.05.2021 ನ್ನೇ ವಯೋಮಿತಿಯ ಕೊನೆಯ ದಿನಾಂಕವನ್ನಾಗಿ ಪರಿಗಣಿಸಲಾಗುವುದು. ಆದರೆ ಜಾತಿ ಮತ್ತು ಆದಾಯ ಮೀಸಲಾತಿ ಹಾಗೂ ಇತರೆ ದಾಖಲೆಗಳಿಗೆ ವಿಸ್ತರಿಸಿದ ದಿನಾಂಕವಾದ 07.07.2021 ನ್ನು ಕೊನೆಯ ದಿನಾಂಕವಾಗಿ ಪರಿಗಣಿಸಲಾಗುವುದು. ಉಳಿದಂತೆ ಸದರಿ ಅಧಿಸೂಚನೆಯಲ್ಲಿ ನೀಡಲಾಗಿರುವ ಇತರೆ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

  • KIOCL ಲಿಮಿಟೆಡ್: ಎಂಬಿಎ / ಎಂ.ಕಾಂ ಪದವೀಧರರಿಂದ ಅರ್ಜಿ ಆಹ್ವಾನ

    KIOCL ಲಿಮಿಟೆಡ್‌ ನಲ್ಲಿ ಖಾಲಿ ( ಕುದುರೆಮುಖ ಕಬ್ಬಿಣ ಅದಿರು ಕಂಪೆನಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಎಂ.ಕಾಂ/ ಎಂಬಿಎ ಪದವೀಧರರಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ ಸಂಖ್ಯೆ : 18

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-07-2021

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.kioclltd.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

  • ಜುಲೈ 5 ರಿಂದ ಪಿಎಸ್ ಐ ಹುದ್ದೆಗಳಿಗೆ ET, PST ಪರೀಕ್ಷೆ

    ಕರ್ನಾಟಕ ಸಿವಿಲ್ ಪಿಎಸ್ ಐ (ಪುರುಷ ಮತ್ತು ಮಹಿಳಾ ) ಹಾಗೂ ( ಸೇವಾನಿರತ) ಹುದ್ದೆಗಳ ನೇಮಕಾತಿ ಸಲುವಾಗಿ ಜುಲೈ 05 ರಿಂದ ಸಹಿಷ್ಣುತೆ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ‌ನಡೆಸಲು ನಿರ್ಧರಿಸಲಾಗಿದೆ.

    402 ಹುದ್ದೆಗಳಿಗೆ ನೇಮಕ ಪ್ರಕ್ರಿಯೆಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯು ಪ್ರಾರಂಭಿಸಿದೆ. ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ನಿಯಮಾನುಸಾರ ದೈಹಿಕ ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಜುಲೈ 05 ರಿಂದ ಪ್ರಾರಂಭಿಸಲು ನಿರ್ಧಾರ ಮಾಡಿದೆ.

    ಇದಕ್ಕಾಗಿ ಅಧಿಕಾರಿಗಳು ಅಗತ್ಯ ಮೈದಾನ ಮತ್ತು ಇತರೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಪೊಲೀಸ್ ಮಹಾ ನಿರೀಕ್ಷಕರವರ ಕಚೇರಿ ಪ್ರಕಟಣೆ ಹೊರಡಿಸಿದೆ.

  • ಬೆಂಗಳೂರು ಯುನಿವರ್ಸಿಟಿ ‌: ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು ಯುನಿವರ್ಸಿಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ www.bangaloreunivesity.ac.in ನಲ್ಲಿ ದಿನಾಂಕ 23-06-2021 ರ ನಂತರ ದೊರಕಲಿದೆ.

    ಅಭ್ಯರ್ಥಿಗಳು ರೂ.250/- ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ, ರೂ.500/- ನ್ನು ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗೆ ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

    ಭರ್ತಿ ಮಾಡಿದ ಅರ್ಜಿಯನ್ನು ಅಭ್ಯರ್ಥಿಗಳು ರಿಜಿಸ್ಟ್ರಾರ್, ಬೆಂಗಳೂರು ಯುನಿವರ್ಸಿಟಿ, ಬೆಂಗಳೂರು – 560056 ಗೆ ದಿನಾಂಕ 30-07-2021 (5 ಗಂಟೆಯೊಳಗಾಗಿ) ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-07-2021( 5 ಗಂಟೆಯೊಳಗಾಗಿ)

  • ಅರಣ್ಯ ಇಲಾಖೆ : 10 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಅರಣ್ಯ ಇಲಾಖೆ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ‌ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ ; ವ್ಯವಸ್ಥಾಪನಾಧಿಕಾರಿ ( forest settlement officer)
    ಹುದ್ದೆ ಸಂಖ್ಯೆ : 10

    ಸದರಿ ಅಧಿಸೂಚನೆಗಳಲ್ಲಿ ನಿಗದಿಪಡಿಸಿದ ಅರ್ಹತೆಯಂತೆ 5 ಹುದ್ದೆಗಳಿಗೆ ಮಾತ್ರ ಅರ್ಹ ಅರ್ಜಿದಾರರು ಲಭ್ಯವಾಗಿರುತ್ತದೆ. ಉಳಿದಂತೆ 5 ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಈ ಪ್ರಕಟಣೆಯೊಂದಿಗೆ ಪ್ರಕಟಿಸಲಾಗಿದೆ.

    ಅರ್ಜಿಯನ್ನು ನೋಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯಾ ಸಂರಕ್ಷಣಾಧಿಕಾರಿಗಳು ( ಅರಣ್ಯ ಪಡೆ ಮುಖ್ಯಸ್ಥರು) ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು – 560003 ರವರ ಕಚೇರಿಗೆ ದಿನಾಂಕ ‌15-06-2021 ರಿಂದ 15-07-2021 ರ ಸಂಜೆ 04.30 ಗಂಟೆಯೊಳಗಾಗಿ ಸಲ್ಲಿಸಬಹುದಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • Mazagon Dock : 1388 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ ‌04,2021

    ಹುದ್ದೆಗಳ ವಿವರ : 1388 ನಾನ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಎಸ್ ಎಸ್ ಸಿ, ಎನ್ ಟಿಸಿ, ಎನ್ ಎಸಿ, 8 ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಜೂನ್ 1, 2021ರ ಅನ್ವಯ, ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17,000/- ರಿಂದ ರೂ.64,360/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳನ್ನು ಟ್ರೇಡ್ ಪರೀಕ್ಷೆ, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಾಡಿ.

    ನೋಟಿಫಿಕೇಶನ್