Advertisements
ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :
ಹುದ್ದೆ : 2021-22 ನೇ ಸಾಲಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೌಟುಂಬಿಕ ದೌರ್ಜನ್ಯ ಕಾಯಿದೆಯಡಿ ಕಚೇರಿಯ ಕೆಲಸಗಳಿಗೆ ಡಿ ಗ್ರೂಪ್ ಕಂಪ್ಯೂಟರ್ ಅಪರೇಟರ್, ಜವಾನ ಕೆಲಸಗಳಿಗೆ ಸೇರಿದಂತೆ 04 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10.30 ರಿಂದ ಸಾಯಂಕಾಲ 4.00 ರವರೆಗೆ ಅರ್ಜಿಗಳನ್ನು ಪಡೆಯಬಹುದಾಗಿದೆ.
ಆಸಕ್ತರು ಅರ್ಜಿಯನ್ನು ಸಲ್ಲಿಕೆ ಮಾಡಲು ಜೂನ್ 11, 2021 ಕೊನೆಯ ದಿನಾಂಕವಾಗಿದೆ.
ಜೂನ್, 11 ರ ಮಧ್ಯಾಹ್ನ 4.00 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.