ಪವರ್ ಗ್ರೇಡ್ ಕಾರ್ಪೋರೇಷನ್ ಆಫ್ ಇಂಡಿಯಾ ( ಪಿಜಿಸಿಐಎಲ್) ದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 15,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಎಪ್ರಿಲ್,2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.500/- ನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪಿಡ್ಬ್ಯುಡಿ/ಎಕ್ಸ್ – ಸರ್ವಿಸ್ ಮ್ಯಾನ್ ಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಹುದ್ದೆ ವಿವರ : ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ : 40
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆ /ಬೋರ್ಡ್/ ಯುನಿವರ್ಸಿಟಿಯಿಂದ ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ : ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಲು ಬಹುದು.
ಅಧಿಕೃತ ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ