ದಾವಣಗೆರೆ ಜಿಲ್ಲಾ ಬಾಲ ಭವನದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಬಾಲ ಭವನದಲ್ಲಿ ಜಿಲ್ಲಾಭವನದಲ್ಲಿ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2021-22 ನೇ ಸಾಲಿನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಹೊಂದಿರುವ ಜೊತೆಗೆ ಕಂಪ್ಯೂಟರ್ ಜ್ಞಾನ, ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯ ಹೊಂದಿರಬೇಕು. ಬಾಲಭವನದಲ್ಲಿ ಕನಿಷ್ಠ 5 ವರ್ಷ ಹಾಗೂ ಅಥವಾ ಅದಕ್ಕಿಂತ ಮೇಲ್ಪಟ್ಟು ಅನುಭವ ಹೊಂದಿರುವವರಿಗೆ ಆದ್ಯತೆ ಮೇರೆಗೆ ವಿದ್ಯಾರ್ಹತೆಯಲ್ಲಿ ಸಡಿಲಿಕೆ ನೀಡಲಾಗಿದೆ.
ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹಾಗೂ ಅದಕ್ಕಿಂತ ಮೇಲ್ಪಟ್ಟು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ : ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ವೇತನ ನೀಡಲಾಗುತ್ತದೆ.
ಕಚೇರಿ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ. 10,000/- ವೇತನ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಬಾಲಭವನ, ಜೆಹೆಚ್ ಬಡಾವಣೆ, ಪಾರ್ಕ್ -1 ಎ ಬ್ಲಾಕ್, ನಾಗನೂರು ರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು