ಧಾರವಾಡ ಜಿಲ್ಲೆ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಹುದ್ದೆ: ಬಾಲ ಕಾರ್ಮಿಕ ಯೋಜನಾ ಸೊಸೈಟಿಯು ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 20,2021
ವೇತನ: ಗೌರವ ಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್.ಡಬ್ಲ್ಯೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ(ಎನ್ ಜಿಒ) ಹಾಗೂ ನಿರ್ವಹಣಾ ಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅನುಭವ : ಹಲವು ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದು, ಬಾಲಕಾರ್ಮಿಕ ನಿರ್ಮೂಲನೆ ಮಾಡುವಲ್ಲಿ ಅನುಭವ ಇರುವವರಿಗೆ ಆದ್ಯತೆ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಒಳಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಷ್ ಮಾತನಾಡಲು ಹಾಗೂ ಬರೆಯುವ ಕೌಶಲ್ಯ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ, ಕಚೇರಿ ಲೆಕ್ಕ ಪತ್ರಗಳ ನಿರ್ವಹಣೆ ತಿಳಿದಿರಬೇಕು.
ಯಾವುದೇ ಸರಕಾರಿ ಕೆಲಸದಿಂದ ವಜಾಗೊಂಡಿರುವವರು, ನಿವೃತ್ತಿ ಹೊಂದಿರುವ, ಸರ್ಕಾರಿ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಗಳಿಗಾಗಿ ಯೋಜನಾ ನಿರ್ದೇಶಕರು, ರಾಷ್ಟ್ರಿಯ ಬಾಲ ಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದು.
ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಎಪ್ರಿಲ್ 20, 2021 ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.
ವಿಳಾಸ:
ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ, ಧಾರವಾಡ