ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಲೈಬ್ರೆರಿ ಟ್ರೈನಿ ಹುದ್ದೆಗೆ, (01) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-03-2021
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ : 24 ಫೆಬ್ರವರಿ 2021 ರ ಅನ್ವಯ ಅಭ್ಯರ್ಥಿಗೆ ಗರಿಷ್ಠ 30 ವಯಸ್ಸಾಗಿರಬೇಕು.
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ ಬೋರ್ಡ್ ನಿಂದ ಎಂಎಲ್ ಐ ಎಸ್ ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ 24 ಮಾರ್ಚ್ 2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸತಕ್ಕದ್ದು.
ವಿಳಾಸ : Librarian, Raman Research Institute,C.V.Raman Avenue, Sadashivanagar, Bangalore – 560080
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ