841 ಆಫೀಸ್ ಅಟೆಂಡೆಂಟ್ ಹುದ್ದೆ : ಕೂಡಲೇ ಅರ್ಜಿ ಸಲ್ಲಿಸಿ

Advertisements

ಆರ್ಬಿಐ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 15, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಹುದ್ದೆಗಳ ವಿವರ: ಆರ್ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ನಲ್ಲಿ 841 ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಮಾರ್ಚ್ 15, 2021
ಆಯ್ಕೆ ಪ್ರಕ್ರಿಯೆ: – ಅಟೆಂಡೆಂಟ್ ಹುದ್ದೆಗೆ ಆನ್ ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ: ಆರ್ಬಿಐ
ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಅರ್ಜಿ ಶುಲ್ಕ: ರೂ. 500/- ಸಾಮಾನ್ಯ/ಒಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ರೂ.50/- ಶುಲ್ಕ ನಿಗದಿಯಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/ ಮೆಟ್ರಿಕ್ಯುಲೇಶನ್ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಠ18 ಹಾಗೂ ಗರಿಷ್ಠ 25 ವಯೋಮಿತಿ ಉಳ್ಳವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಒಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.10,940/- ರಿಂದ ರೂ. 23,700/- ವೇತನವನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಆರ್ಬಿಐ ನ ಅಧಿಕೃತ ವೆಬ್‌ಸೈಟ್‌ https://www.rbi.org.in/ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಿ ಮಾರ್ಚ್ 15, 2021 ರೊಳಗೆ ಸಲ್ಲಿಸಬೇಕು.

 

Leave a Comment