ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (ಮಹಾತ್ಮಗಾಂಧಿ ನರೇಗಾ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯಕ್ಕೆ (ಮಹಾತ್ಮಾಗಾಂಧಿ ನರೇಗಾ) ಗುತ್ತಿಗೆ ಆಧಾರದ ಮೇಲೆ 2 ವರ್ಷದ ಅವಧಿಗೆ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ, ವಯಸ್ಸು, ವಿದ್ಯಾರ್ಹತೆ, ಅನುಭವ, ಸಂಭಾವನೆ ನಿಬಂಧನೆಗಳು ಇತ್ಯಾದಿ ವಿವರಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೆಬ್‌ಸೈಟ್ www.rdpr.karnataka.gov.in ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3 ನೇ ಹಂತ, 2 ನೇ ಮಹಡಿ, ಡಾ||ಅಂಬೇಡ್ಕರ್ ವಿಧಿ, ಬೆಂಗಳೂರು- 560001 ಕಛೇರಿಗೆ ದಿನಾಂಕ 12.04.2021 ರ ಸಂಜೆ 5.30 ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಗಡುವು ಮೀರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.