ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ ಮಿಷನ್ ( ಗ್ರಾಮೀಣ ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲು ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರಗಳು, ವಿದ್ಯಾರ್ಹತೆ ಹಾಗೂ ಕಾರ್ಯಾನುಭವದ ವಿವರಗಳನ್ನು ಕೆಳಕಂಡಂತೆ ನೀಡಲಾಗಿದೆ.
ಕೇಂದ್ರ ಕಚೇರಿ :
ಕಿರಿಯ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸುವವರು ಗ್ರಾಜ್ಯುಯೇಶನ್ ಇನ್ ಸಿವಿಲ್ ಇಂಜಿನಿಯರಿಂಗ್ ಮಾಡಿರಬೇಕು. ಈ ಹುದ್ದೆಗೆ ಮಾಸಿಕ ರೂ.60,000/- ಮತ್ತು ರೂ. 15,000/- ರವರೆಗೆ ವೇತನವಿರುತ್ತದೆ.
ಪ್ರಾನೌನ್ಸ್ ಮೆಂಟ್ ಕನ್ಸಲ್ಟೆಂಟ್ – ಹುದ್ದೆಗೆ ಅರ್ಜಿ ಸಲ್ಲಿಸುವವರು ಪೋಸ್ಟ್ ಗ್ರಾಜ್ಯುಯೇಶನ್ ಇನ್ ಕಾಮರ್ಸ್ / ಮ್ಯಾನೇಜ್ಮೆಂಟ್ ಅಥವಾ ಗ್ರಾಜ್ಯುಯೇಶನ್ ಇನ್ ಇಂಜಿನಿಯರಿಂಗ್ ಮಾಡಿರಬೇಕು. ಈ ಹುದ್ದೆಗೆ ರೂ.65,000/- ರಿಂದ ರೂ. 1,00,000/- ವರೆಗೆ ವೇತನವಿರುತ್ತದೆ.
ಘನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ : ಗ್ರಾಜ್ಯುಯೇಶನ್ ಇನ್ ಎನ್ವೆರ್ಮೆಂಟಲ್ ಇಂಜಿನಿಯರಿಂಗ್ / ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾಡಿರಬೇಕು. ಈ ಹುದ್ದೆಗೆ ರೂ.1,00,000/- ರಿಂದ ರೂ. 1,20,000/- ರವರೆಗೆ ವೇತನ ನಿಗದಿಪಡಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ – ಜಲ ಜೀವನ ಮಿಷನ್
ಭೂ ವಿಜ್ಞಾನಿ – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೋಸ್ಟ್ ಗ್ರಾಜ್ಯುಯೇಶನ್ ಡಿಗ್ರಿ ಇನ್ ಜಿಯಾಲಜಿಯನ್ನು ಅಂಗೀಕೃತ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು. ಈ ಹುದ್ದೆಗೆ ಮಾಸಿಕ ರೂ.30,000/- ರಿಂದ ರೂ.35,000/- ರವರೆಗೆ ವೇತನವಿರುತ್ತದೆ.
ಜಿಲ್ಲಾ ಪಂಚಾಯತಿ ಕಚೇರಿ – ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) & ಜಲಜೀವನ ಮಿಷನ್
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು : ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಯುನಿವರ್ಸಿಟಿಯಿಂದ ಎಂ.ಸಿ.ಎ/ ಸ್ಟಾಟಿಸ್ಟಿಕ್ಸ್. ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್/ ಬಿ.ಇ.ಕಂಪ್ಯೂಟರ್ ಸೈನ್ಸ್ ಪಡೆದುಕೊಂಡಿರಬೇಕು. ಈ ಹುದ್ದೆಗೆ ಮಾಸಿಕ ರೂ.22,000/- ರಿಂದ ರೂ.25,000/- ರವರೆಗೆ ವೇತನವಿರುತ್ತದೆ.
ಗುತ್ತಿಗೆಯ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.
ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಸಾಮರ್ಥ್ಯಗಳು, ರೆಸ್ಯೂಮ್ ಹಾಗೂ ಅರ್ಜಿ ಜೊತೆಗೆ “ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತವಾಗಿದ್ದೇನೆ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು – 560009
ಸ್ನಾತಕ/ ಸ್ನಾತಕೋತ್ತರ ಪದವಿಯನ್ನು ದೂರಶಿಕ್ಷಣ ಮುಖಾಂತರ ಪಡೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಕಿರುಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಚೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಈ ಸಂದರ್ಭದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.