RDPR : ವಿವಿಧ ಹುದ್ದೆ

Advertisements

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು, ಕಾರ್ಯಾನುಭವ, ವಿದ್ಯಾರ್ಹತೆಗಳನ್ನು ಈ ಕೆಳಗೆ ನೀಡಲಾಗಿದೆ.

ಜಿಲ್ಲಾ ಪಂಚಾಯತಿ ಕಚೇರಿ – ಜಲ ಜೀವನ ಮಿಷನ್
ಹುದ್ದೆ : ಜಿಲ್ಲಾ MIS ಸಮಾಲೋಚಕರು – 05 ಹುದ್ದೆಗಳು

ಜಿಲ್ಲಾ ಪಂಚಾಯತಿ ಕಚೇರಿ – ಸ್ವಚ್ಛ ಭಾರತ್ ಮಿಷನ್
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು – 01

ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷ ಮೀರಿರಬಾರದು.

ಹುದ್ದೆ ಸ್ಥಳ : ಬೆಂಗಳೂರು-ಚಿಕ್ಕಬಳ್ಳಾಪುರ-ಹರಪನಹಳ್ಳಿ- ಕೊಡಗು

ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ಅರ್ಜಿ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಪ್ರಮುಖ ಸಾಮರ್ಥ್ಯ ಗಳು, ಅನುಭವ ಮತ್ತು resume ನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು- 5600- 009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ 05-07-2021 ರ ಸಂಜೆ 5:30 ರೊಳಗೆ ಸಲ್ಲಿಸಬೇಕು. ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ https://rdpr.karnataka.gov.in ಮತ್ತು https://swachhamevajayate.org ಗೆ ಭೇಟಿ ನೀಡಬಹುದು.

Leave a Comment