ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು.

ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ರೀತಿಯಲ್ಲಿ ರೂ. 15,000/- + 2,000/- ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2021

ಇಂಟರ್ನ್‌ ಅವಧಿಯು 3 ತಿಂಗಳಾಗಿದ್ದು, ಅಗತ್ಯವಿದ್ದಲ್ಲಿ ವಿಸ್ತರಣೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ನಿಯೋಜಿಸುವ ಜಿಲ್ಲೆ ಹಾಗೂ ವಾಸ ಮಾಡಲು ಸಿದ್ಧರಿರಬೇಕು. ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ 10-04-2021 ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್‌ ಪ್ರತಿಯನ್ನು ಸ್ವೀಕರಿಸುವುದಿಲ್ಲ.

ಹೆಚ್ವಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ರವನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆ : 080-22342163

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment