ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ /ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆಗಳ ವಿವರ : 1. ಕೇಂದ್ರ ಕಚೇರಿ- a. ಸಮಾಲೋಚಕರು – 03 b. ಐ.ಟಿ.ಸಮಾಲೋಚಕರು- 01 c. ಡಬ್ಲ್ಯೂ.ಕ್ಯೂ.ಎಮ್.ಎಸ್ ಸಮಾಲೋಚಕರು I – 01. d. ಡಬ್ಲ್ಯೂ. ಕ್ಯೂ.ಎಮ್.ಎಸ್ ಸಮಾಲೋಚಕರು 4,5,6 – 03 e. ಡಬ್ಲ್ಯೂ. ಕ್ಯೂ.ಎಮ್.ಎಸ್ ಐ.ಎಮ್.ಐ.ಎಸ್ ಸಮಾಲೋಚಕರು- 01
- ವೃತ್ತ ಕಚೇರಿ – ಜಲಜೀವನ ಮಿಷನ್
a. ಹಿರಿಯ ಸಮಾಲೋಚಕರು- 04
3. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ – ಜಲಜೀವನಮಿಷನ್
a. ಜಿಲ್ಲಾ ಯೋಜನಾ ವ್ಯವಸ್ಥಾಪಕ – 02
b. ಜಿಲ್ಲಾ MIS ಸಮಾಲೋಚಕರು- 05
c. ನೀರಿನ ಮಾದರಿಗಳ ಸಂಗ್ರಹಕೋಶದ ಉಸ್ತುವಾರಿ – 32
d. ಸೂಕ್ಷ್ಮಾಣುಜಿವಿ ಶಾಸ್ತ್ರಜ್ಞ – 80
e. ಹಿರಿಯ ವಿಶ್ಲೇಷಣೆಗಾರ – 04
f. ವಿಶ್ಲೇಷಣೆಗಾರ – 06
g. ಕಿರಿಯ ವಿಶ್ಲೇಷಣೆಗಾರ – 09
- ಜಿಲ್ಲಾ ಪಂಚಾಯಿತಿ ಕಛೇರಿ – ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)
a. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು -01
b. ಜಿಲ್ಲಾ MIS ಸಮಾಲೋಚಕರು -01
c. ಜಿಲ್ಲಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕರು – 01
ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟಿಸ್ ನೀಡಿ ರದ್ದು ಪಡಿಸಲಾಗುವುದು.
ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ಮೀರಿರಬಾರದು.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯ ಗಳು, ಹಾಗೂ ಅರ್ಜಿ ಜೊತೆಗೆ ” ನಿಗದಿತ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು – 5600-009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ : 28-04-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ವಿದ್ಯಾರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಆಯ್ಕೆ ಪ್ರಕ್ರಿಯೆ : ಕಿರು ಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು.
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.
RDPR website: https://rdpr.karnataka.gov.in ಮತ್ತು https://swachhamevajayate.org ( ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ