ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Advertisements

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

ಹುದ್ದೆಯ ಹೆಸರು

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆ

ಹುದ್ದೆಯ ಸಂಖ್ಯೆ

19 ಅಂಗನವಾಡಿ ಕಾರ್ಯಕರ್ತೆ
110 ಅಂಗನವಾಡಿ ಸಹಾಯಕಿ

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 27-01-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-02-2021

ಅರ್ಜಿ ಸಲ್ಲಿಸುವುದು ಹೇಗೆ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಬೇಕಾಗುತ್ತದೆ.

ನೇಮಕಾತಿ ಮಾರ್ಗಸೂಚಿ/ ನಿಬಂಧನೆಗಳನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಎಲ್ಲಾ ದಾಖಲಾತಿಗಳನ್ನು ಆನ್ ಲೈನ್ ಮೂಲಕ . ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.

ಇತರೆ ಅರ್ಹತೆಗಳು

ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18- 35 ವರ್ಷ ವಯೋಮಿತಿಯೊಳಗಿರಬೇಕು.

ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ: ಎಸ್ ಎಸ್ ಎಲ್ ಸಿ ತೇರ್ಗಡೆ. ಹೆಚ್ಚಿನ ವಿದ್ಯಾರ್ಹತೆ ಯನ್ನು ಪರಿಗಣಿಸುವುದಿಲ್ಲ.

ಅಂಗನವಾಡಿ ಸಹಾಯಕಿ:
ಕನಿಷ್ಠ 4 ನೇ ತರಗತಿ.ಗರಿಷ್ಠ 9 ನೇ ತರಗತಿ. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದು. 9ನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸವನ್ನು ಪರಿಗಣಿಸುವುದಿಲ್ಲ

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ವಿಳಾಸ https://anganwadirecruit.kar.nic.in/docs/10560383515.pdf

Leave a Comment