ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸಕೋಟೆ, ನೆಲಮಂಗಲ ಹಾಗೂ ದೇವನಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸವಿರುವ ಆಸಕ್ತರು ಏಪ್ರಿಲ್ 23 ರೊಳಗೆ ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ – ಮಾಸಿಕ ರೂ.6000/- ವೇತನವಿರುತ್ತದೆ.
ಶೇ.40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಎಸ್ ಎಸ್ ಎಲ್ ಸಿ ಉತ್ತೀರ್ಣರಾದವರಿಗೆ ಹೆಚ್ಚು ಆದ್ಯತೆ. ಒಂದು ವೇಳೆ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಸಿಗದಿದ್ದರೆ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 45 ವಯೋಮಿತಿ ಹೊಂದಿರಬೇಕು. ಅಭ್ಯರ್ಥಿಗಳು ಆರೋಗ್ಯವಂತರಾಗಿರಬೇಕು. ಗ್ರಾಮ ಪಂಚಾಯತಿ/ ವ್ಯಾಪ್ತಿಯಲ್ಲಿ ಮಾಹಿತಿ / ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ಹೊಂದಿರಬೇಕು. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್ ಪರಿಶೀಲನೆಗೆ ಒಳಪಟ್ಟಿರುತ್ತದೆ.
ಪ್ರವಾಸ, ಲೇಖನ, ಸಾಮಾಗ್ರಿ ಮತ್ತು ಆಡಳಿತ ವೆಚ್ಚಕ್ಕಾಗಿ ರೂ.150/- ನೀಡಲಾಗುವುದು.
ದೇವನಹಳ್ಳಿ ತಾಲೂಕಿನ ಕೊಯಿರಾ, ಮಂಡಿಬೆಲೆ, ಜಾಲಿಗೆ, ಕೋರಮಂಗಲ ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ, ದೊಡ್ಡಬೆಲೆ, ಅಗಲುಕುಪ್ಪೆ, ಹೊಸಕೋಟೆ ತಾಲೂಕಿನ ದೇವನಗುಂದಿ, ಅನುಗೊಂಡನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ : 080-29787442