RGUHS Recruitment 2024: ಕೆಇಎ ಇಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Advertisements

RGUHS Recruitment 2024: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇದ್ದು, ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದೆ. RGUHS ಅಧಿಕೃತ ಅಧಿಸೂಚನೆಯ ಮೂಲಕ ಮಾರ್ಚ್ 2024 ರ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು 25-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2024
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 26-04-2024

ಹುದ್ದೆಗಳ ವಿವರ ಇಲ್ಲಿದೆ;
ಹುದ್ದೆಯ ಹೆಸರು ಮತ್ತು ಸಂಖ್ಯೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ದಲ್ಲಿ 44 ಹುದ್ದೆಗಳು ಖಾಲಿ ಇದ್ದು, ಕಿರಿಯ ಸಹಾಯಕ, ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪೋಸ್ಟ್ ಹೆಸರು:
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್‌-ಬಿ) 5, ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌-ಬಿ) 1, ಸಹಾಯಕ ಗ್ರಂಥಪಾಲಕ (ಗ್ರೂಪ್‌-C) 1, ಸಹಾಯಕ (ಗ್ರೂಪ್‌-C) 12, ಕಿರಿಯ ಸಹಾಯಕ (ಗ್ರೂಪ್‌-C) 25 ಹುದ್ದೆಗಳು ಖಾಲಿ ಇದೆ.

ವಿದ್ಯಾರ್ಹತೆ: ಜೂನಿಯರ್ ಪ್ರೋಗ್ರಾಮರ್ (ಗ್ರೂಪ್‌-ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ, MCA ಮಾಡಿರಬೇಕು.
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌ -ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್‌ನಲ್ಲಿ ಎಂಜಿನಿಯರಿಂಗ್ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
ಸಹಾಯಕ ಗ್ರಂಥಪಾಲಕ (ಗ್ರೂಪ್‌-C) ಹುದ್ದೆಗೆ ಅರ್ಜಿ ಸಲ್ಲಿಸುವವರು ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ (ಗ್ರೂಪ್‌-ಸಿ) ಹುದ್ದೆಗೆ ಪದವಿ ಮಾಡಿರಬೇಕು.
ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ) ಹುದ್ದೆಗೆ ಪಿಯುಸಿ‌ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-I ಅಭ್ಯರ್ಥಿಗಳಿಗೆ 05 ವರ್ಷ, Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ರೂ.500/-, ಸಾಮಾನ್ಯ/OBC ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಜೂನಿಯರ್ ಪ್ರೋಗ್ರಾಮರ್ (Grop-ಬಿ), ಸಹಾಯಕ ಇಂಜಿನಿಯರ್ (ಸಿವಿಲ್) (Group-ಬಿ) ಹುದ್ದೆಗೆ ರೂ.43100-83900/- ವೇತನ ನಿಗದಿಪಡಿಸಲಾಗಿದೆ. ಸಹಾಯಕ ಗ್ರಂಥಪಾಲಕ (Group-C) ಹುದ್ದೆಗೆ ರೂ.30350-58250/- ವೇತನ, ಸಹಾಯಕ (Group-C) ರೂ.37900-70850/- ವೇತನ, ಕಿರಿಯ ಸಹಾಯಕ (Group-C) ರೂ.21400-42000/- ವೇತನ ಸಿಗಲಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ