ರೈಲ್ ಇಂಡಿಯಾ ಟೆಕ್ನಿಕಲ್ ಆಂಡ್ ಎಕಾನಾಮಿಕ್ ಸರ್ವಿಸ್ ( ಆರ್ ಐಟಿಇಎಸ್) ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ,12,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 22-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಹುದ್ದೆ: ಗ್ರಾಜ್ಯುಯೇಟ್ ಅಪ್ರೆಂಟಿಸ್ – 96, ಡಿಪ್ಲೋಮಾ ಅಪ್ರೆಂಟಿಸ್ – 15, ಟ್ರೇಡ್ ಅಪ್ರೆಂಟಿಸ್ – 35 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ
ಹುದ್ದೆ ಸಂಖ್ಯೆ : 146
ಹುದ್ದೆ ಸ್ಥಳ : ಭಾರತದೆಲ್ಲೆಡೆ
ಹುದ್ದೆ ವಿವರ: ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗೆ ಬಿ.ಇ/ಬಿ.ಟೆಕ್, ಬಿಎ/ಬಿಬಿಎ / ಬಿ.ಕಾಂ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.14,000/-ಮಾಸಿಕ ವೇತನ ಇರುತ್ತದೆ.
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗೆ ಡಿಪ್ಲೋಮಾ ತೇರ್ಗಡೆ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.12,000/-ಮಾಸಿಕ ವೇತನ ಇರುತ್ತದೆ.
ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಐಟಿಐ ಪಾಸಾಗಿರಬೇಕು. ಹಾಗೂ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.10,000/-ವೇತನವಿರುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ, ಇ-ಮೇಲ್ ಮಾಡಬೇಕು.
ಇ- ಮೇಲ್ ವಿಳಾಸ : [email protected] ಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ