RLDA Jobs: ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತೆ, ಸಂಬಳ ವಿವರ ಇಲ್ಲಿದೆ

ಉದ್ಯೋಗ ವಿವರ- ಕ್ವಿಕ್‌ ಲುಕ್

  • ಎಲ್ಲಿ ಉದ್ಯೋಗ?: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ
  • ಹುದ್ದೆಯ ಹೆಸರು: ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆ
  • ಹುದ್ದೆಗಳ ಸಂಖ್ಯೆ: 04
  • ಅರ್ಜಿ ಸಲ್ಲಿಸುವುದು ಹೇಗೆ?: ಆಫ್‌ಲೈನ್‌ ಮೂಲಕ
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: May 28, 2024
  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: June 21, 2024
  • ವೆಬ್‌ ವಿಳಾಸ: https://rlda.indianrailways.gov.in/
Advertisements

RLDA Recruitment 2024: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 04 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಅಲಹಾಬಾದ್ – ಚೆನ್ನೈ – ಪಾಟ್ನಾ – ಬೆಂಗಳೂರು ಇಲ್ಲಿ ಪೋಸ್ಟಿಂಗ್‌ ಆಗಲಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 21-Jun-2024 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 28-05-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2024

ಹುದ್ದೆಯ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ (RLDA) ಇಲ್ಲಿ ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಆರ್‌ಎಲ್‌ಡಿಎ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

ಹುದ್ದೆ ಹೆಸರು ಮತ್ತು ಸಂಖ್ಯೆ:
ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್ 3 ಹುದ್ದೆಗಳು
ಜಂಟಿ/ಉಪ ಜನರಲ್ ಮ್ಯಾನೇಜರ್ 1 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಜಂಟಿ/ಉಪ ಜನರಲ್ ಮ್ಯಾನೇಜರ್ ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
ಮುಖ್ಯ ಪ್ರಾಜೆಕ್ಟ್‌ ಮ್ಯಾನೇಜರ್‌ ಹುದ್ದೆಗೆ ಆರ್‌ಎಲ್‌ಡಿಎ ನಿಯಮಗಳ ಪ್ರಕಾರ

ವಯೋಮಿತಿ: ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಾಗೆ ಅಭ್ಯರ್ಥಿಗಳು ಆರ್‌ಎಲ್‌ಡಿಎ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿದಾರರು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dy ಗೆ ಕಳುಹಿಸಬೇಕಾಗುತ್ತದೆ. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
ವಿಳಾಸ: Dy. General Manager (HR), Rail Land Development Authority, Unit No.-702-B, 7th Floor, Konnectus Tower-II, DMRC Building, Ajmeri Gate, Delhi-110002 ಇಲ್ಲಿಗೆ ಅರ್ಜಿಗಳ ಸಾಫ್ಟ್ ಕಾಪಿಯನ್ನು ಇಮೇಲ್ ಐಡಿಯಲ್ಲಿ ಫಾರ್ವರ್ಡ್ ಮಾಡಬಹುದು: [email protected]