Railway Recruitment 2024: ರೈಲ್ವೆ ರಕ್ಷಣಾ ದಳದಲ್ಲಿ 4660 ಹುದ್ದೆ; ಕಾನ್ಸ್‌ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ನೇಮಕ; ಈಗಲೇ ಅಪ್ಲೈ ಮಾಡಿ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

RPF Recruitment 2024: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ ಎಂದೇ ಹೇಳಬಹುದು. ಆಸಕ್ತ ಅಭ್ಯರ್ಥಿಗಳು 14-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024

ಹುದ್ದೆಯ ವಿವರ ಇಲ್ಲಿದೆ
ಸಬ್-ಇನ್ಸ್‌ಪೆಕ್ಟರ್ ; 452 ಹುದ್ದೆಗಳು
ಕಾನ್ಸ್ಟೇಬಲ್ ; 4208 ಹುದ್ದೆಗಳು
ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ತೇರ್ಗಡೆ ಹೊಂದಿರಬೇಕು.
ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸಾಗಿದ್ದರೆ ಸಾಕು.

ವಯೋಮಿತಿ: ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-28ವರ್ಷದೊಳಗಿರಬೇಕು. ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 18-28ವರ್ಷ ವಯೋಮಿತಿಯಲ್ಲಿರಬೇಕು. ರೈಲ್ವೇ ಸಂರಕ್ಷಣಾ ದಳದ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕರು/ಮಹಿಳೆ/ಅಲ್ಪಸಂಖ್ಯಾತರು/EBC ಅಭ್ಯರ್ಥಿಗಳಿಗೆ ರೂ.250/-, ಇತರ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ವಿಧಿಸಲಾಗಿದೆ. ಆನ್‌ಲೈನ್‌ ಮೂಲಕ ಮಾತ್ರವೇ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35400/-, ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700/- ವೇತನ ಸಿಗಲಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ