RRB Recruitment 2024: RRB ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 9144 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಟೆಕ್ನಿಷಿಯನ್ ಹುದ್ದೆಗಳಿಗೆ ಆರ್‌ಆರ್‌ಬಿ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ನೇಮಕಾತಿ ಪ್ರಾರಂಭ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು 08-Apr-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 09-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 08-04-2024
ಹುದ್ದೆಯ ವಿವರಗಳು ಈ ಕೆಳಗೆ ನೀಡಲಾಗಿದೆ;
ಹುದ್ದೆಯ ಹೆಸರು: ತಂತ್ರಜ್ಞ ಹುದ್ದೆಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 9144 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ: ತಂತ್ರಜ್ಞ ಗ್ರೇಡ್ I ಸಿಗ್ನಲ್: 1092 ಪೋಸ್ಟ್‌ಗಳು
ತಂತ್ರಜ್ಞ ಗ್ರೇಡ್ III: 8052 ಪೋಸ್ಟ್‌ಗಳು
ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900 – 29,200/-ರೂ. ವೇತನ ಸಿಗಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು 10th, 12th, ITI, ಡಿಪ್ಲೊಮಾ, B.Sc, BE/ B.Tech ಅನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ತೇರ್ಗಡೆ ಹೊಂದಿರಬೇಕು.
ಹುದ್ದೆ ಹೆಸರು ಮತ್ತು ಅರ್ಹತೆ;
ತಂತ್ರಜ್ಞ Gr I ಸಿಗ್ನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, B.Sc, BE/ B.Tech ತೇರ್ಗಡೆ ಹೊಂದಿರಬೇಕು.
ತಂತ್ರಜ್ಞ III ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ, 12ನೇ, ಐಟಿಐ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 18 ವರ್ಷ, ಗರಿಷ್ಠ 36 ವರ್ಷ ಮೀರಿರಬಾರದು. ಒಬಿಸಿ(ಎನ್‌ಸಿಎಲ್) ಅಭ್ಯರ್ಥಿಗಳಿಗೆ -3 ವರ್ಷ, ಎಸ್‌ಸಿ,ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ, ಎಕ್ಸ್ ಸರ್ವಿಸ್‌ಮೆನ್, PwBD, ಮಹಿಳೆಯರು, Transgender, ಇಬಿಸಿ ಅಭ್ಯರ್ಥಿಗಳಿಗೆ ರೂ.250, ಉಳಿದ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕವಷ್ಟೇ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ವೇತನ: ಟೆಕ್ನಿಷಿಯನ್ Gr 1 Signal ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.29,200 ವೇತನವಿರಲಿದೆ. ಟೆಕ್ನಿಷಿಯನ್111 ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.19,900 ವೇತನವಿರಲಿದೆ.
ಅರ್ಜಿ ಸಲ್ಲಿಸುವುದು ಹೇಗೆ? ರೈಲ್ವೆ ನೇಮಕಾತಿ ಮಂಡಳಿಯ (RRB) ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಿ, ಇಲ್ಲಿ ನೀವು ‘ಆನ್‌ಲೈನ್‌ನಲ್ಲಿ ಅನ್ವಯಿಸು – ತಂತ್ರಜ್ಞರ ನೇಮಕಾತಿ 2024’ ಎಂಬ ಆಯ್ಕೆಯನ್ನು ಕಾಣಬಹುದು ಮತ್ತು ಅದರ ಮೇಲೆ ಕ್ಲಿಕ್ ಮಾಡಿ, ನಂತರ ಅಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ, ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಇಮೇಲ್ ವಿಳಾಸ, ಪಾಸ್‌ವರ್ಡ್ ಬಳಸಿ ಲಾಗ್‌ಇನ್ ಮಾಡಿ, ಶೈಕ್ಷಣಿಕ ಅರ್ಹತೆ, ಭಾವಚಿತ್ರ ಮತ್ತು ಸಹಿಯನ್ನು ಒಳಗೊಂಡ ದಾಖಲೆಗಳನ್ನು ಅಪಲೋಡ್ ಮಾಡಿ, ಅರ್ಜಿ ಶುಲ್ಕ ಪಾವತಿಸಿ. ಸಬ್‌ಮಿಟ್ ಬಟನ್ ಒತ್ತುವ ಮೊದಲು ನೀವು ನಮೂದಿಸಿದ ಎಲ್ಲಾ ವಿವರಗಳನ್ನು ಕ್ರಾಸ್-ಚೆಕ್ ಮಾಡಿ, ನಂತರ ಸಬ್‌ಮಿಟ್ ಬಟ್ ಕ್ಲಿಕ್ ಮಾಡಿ
ಹುದ್ದೆಯ ಕುರಿತು ಡಿಟೇಲ್ಡ್ ನೋಟಿಫಿಕೇಷನ್ ಇಲ್ಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ.