RPF Recruitment 2024: ಆರ್‌ಪಿಎಫ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆರ್‌ಪಿಎಫ್ ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 14-ಮೇ-2024 ರಂದು ಅಥವಾ ಮೊದಲು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024
ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
ಸಂಸ್ಥೆಯ ಹೆಸರು: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF)
ಹುದ್ದೆಗಳ ಸಂಖ್ಯೆ: ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ನಲ್ಲಿ ಸಬ್ ಇನ್ಸ್ಪೆಕ್ಟರ್, ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ: ಸಬ್ ಇನ್ಸ್ಪೆಕ್ಟರ್, ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-ರೂ.35400/- ವೇತನ ದೊರಕಲಿದೆ.
ವಿದ್ಯಾರ್ಹತೆ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಷನ್ (ಪದವಿ) ಹೊಂದಿರಬೇಕು. ಕಾನ್‌ಸ್ಟೇಬಲ್ ಹುದ್ದಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ, ಹಾಗೂ ಗರಿಷ್ಠ 28ವರ್ಷ ಮೀರಿರಬಾರದು. ಕಾನ್‌ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ ಮೀರಿರಬಾರದು. ಉಳಿದಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಸಂಸ್ಥೆಯ ನಿಯಮಾನುಸಾರ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/ಎಕ್ಸ್ ಸರ್ವಿಸ್‌ಮೆನ್/ಮಹಿಳೆಯರು/ ಮೈನಾರಿಟೀಸ್/ಇಬಿಸಿ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಪರೀಕ್ಷೆ, ಫಿಸಿಕಲ್ ಎಫಿಶಿಯೆನ್ಸಿ ಟೆಸ್ಟ್ (ದೈಹಿಕ ದಕ್ಷತೆ ಪರೀಕ್ಷೆ) ಮತ್ತು ಫಿಸಿಕಲ್ ಮೆಷರ್‌ಮೆಂಟ್ ಟೆಸ್ಟ್ (ದೈಹಿಕ ಮಾಪನ ಪರೀಕ್ಷೆ) ಮೂಲಕ ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.
ವೇತನ: ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400/-, ಕಾನ್‌ಸ್ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವ ಇದ್ದವರು ದಾಖಲೆಗಳನ್ನು ಅರ್ಜಿ ಸಲ್ಲಿಸುವ ಮೊದಲು ರೆಡಿಮಾಡಿ ಇಡಬೇಕು.
ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೆಳಗೆ ನೀಡಲಾದ ಲಿಂಕ್ ಕ್ಲಿಕ್ ಮಾಡಿ.
ನಂತರ ಆರ್‌ಪಿಎಫ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡುವ ಕಾಲಂ ಕ್ಲಿಕ್ ಮಾಡಿ.
ನಂತರ ಎಲ್ಲಾ ವಿವಿರಗಳನ್ನು ಭರ್ತಿ ಮಾಡಿದ ನಂತರ ಸಲ್ಲಿಸು ಬಟನ್ ಕ್ಲಿಕ್ ಮಾಡಿ.
ಕೊನೆಯದಾಗಿ ಕ್ಲಿಕ್ ಬಟನ್ ಮೇಲೆ ಕ್ಲಿಕ್ ಮಾಡಿ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ