ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ ಈ ಕೆಳಗಿನಂತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ
- ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು- 02
2.ಜಿಲ್ಲಾ ಯೋಜನಾ ವ್ಯವಸ್ಥಾಪಕರು-01 - ಜಿಲ್ಲಾ MIS ಸಮಾಲೋಚಕರು-05
- ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು(IEC)-04
5.ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು
ಈ ಮೇಲಿನ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಒಂದು ವರ್ಷದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಮೇರೆಗೆ ನೇಮಿಸಿಕೊಳ್ಳಲಾಗುವುದು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಆಗಿರಬೇಕು.
ದೂರ ಶಿಕ್ಷಣದ ಮುಖಾಂತರ ಸ್ನಾತಕೋತ್ತರ ಪದವಿ ಪಡೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು.
ಅನುಭವದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ್ಕ ನಿಗದಿಪಡಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ಮುಂದುವರೆಯಲು ಯಾವುದೇ ಹಕ್ಕು ಇರುವುದಿಲ್ಲ
ಅರ್ಜಿ ನಮೂನೆಯಲ್ಲಿ ಮಾಹಿತಿ ಯನ್ನು ತುಂಬಿ, ವಿದ್ಯಾರ್ಹತೆ, ಅನುಭವ ಪ್ರಮುಖ ಸಾಮರ್ಥ್ಯ ಗಳು, ವಯಸ್ಸಿನ ದೃಢೀಕರಣ, resume ಹಾಗೂ ಅರ್ಜಿ ಜೊತೆಗೆ ” ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗಯ ಟಿಪ್ಪಣಿ ಬರೆದು ಅರ್ಜಿಯ ಹಾರ್ಡ್ ಪ್ರತಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
2ನೇ ಮಹಡಿ,
ಕೆ.ಹೆಚ್.ಬಿ. ಕಟ್ಟಡ,
ಕಾವೇರಿ ಭವನ,
ಕೆ.ಜಿ.ರಸ್ತೆ, ಬೆಂಗಳೂರು-5600009
ಅಭ್ಯರ್ಥಿಗಳು ದಿನಾಂಕ 20.02.2021 , ಸಂಜೆ 5.30 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗಿರುವುದು ಹಾಗೂ ಆಯ್ಕೆಯಾದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ನಿಗದಿಸಿದ ದಿನಾಂಕದಂದು ಅಭ್ಯರ್ಥಿಗಳು ಹಾಜರಿರತಕ್ಕದ್ದು.
ಅರ್ಜಿ ನಮೂನೆಯು RDPR website : https://rdpr.Karnataka.gov.in ಮತ್ತು https://swachhamevajayate.org(ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.