ಭಾರತೀಯ ಪ್ರಾಧಿಕಾರ, ಪ್ರಾದೇಶಿಕ ಕೇಂದ್ರ, ಬೆಂಗಳೂರು ಇವರು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ಬಾನಿಸುತ್ತಿದ್ದಾರೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ:
ಹುದ್ದೆ: ಜ್ಯೂನಿಯರ್ ಕನ್ಸಲ್ಟೆಂಟ್ ( ಪರ್ಫಾಮೆನ್ಸ್ ಮಾನಿಟರಿಂಗ್) -03, ಜ್ಯೂನಿಯರ್ ಕನ್ಸಲ್ಟೆಂಟ್ ( ಇನ್ ಫ್ರಾ) -02 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಜ್ಯೂನಿಯರ್ ಕನ್ಸಲ್ಟೆಂಟ್ ( ಪರ್ಫಾಮೆನ್ಸ್ ಮಾನಿಟರಿಂಗ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ/ಪಿಜಿಡಿಎಂ(2 ವರ್ಷಗಳ) ಪದವಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ಜ್ಯೂನಿಯರ್ ಕನ್ಸಲ್ಟೆಂಟ್ ( ಇನ್ ಫ್ರಾ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ಬಿ.ಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
ವಯೋಮಿತಿ : ಈ ಜಾಹೀರಾತು ಕೊನೆಯ ದಿನಾಂಕದನುಸಾರ 55 ವರ್ಷಗಳು.
ವೇತನ ಶ್ರೇಣಿ : ತಿಂಗಳಿಗೆ ರೂ. 75,000/- ರಿಂದ ರೂ. 1,00,000/- ರವರೆಗೆ ಮಾಸಿಕ ವೇತನವಿರುತ್ತದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-04-2021
ಆನ್ಲೈನ್ ( ಇ-ಮೇಲ್) ಅರ್ಜಿಗಳನ್ನು ಪರಿಶೀಲಿಸಿದ ನಂತರ, ಸಂದರ್ಶನಕ್ಕಾಗಿ ಕರೆ ಪತ್ರವನ್ನು ಕಳುಹಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು [email protected] ಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ವಿವರವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.
https://saisouthbengaluru.org/