SAI : 320 ಕೋಚ್ ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Advertisements

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಈ ಹಿಂದೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮೇ 20 ರವರೆಗೆ ನಿಗದಿಪಡಿಸಲಾಗಿತ್ತು. ಆದರೆ ಈಗ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 5,2021 ರವರೆಗೆ ವಿಸ್ತರಿಸಿದೆ. ಇತರೆ ವಿವರಗಳು ಈ ಕೆಳಗಿನಂತಿವೆ:

ಕೋಚ್ : 100 ಹುದ್ದೆಗಳು
ಅಸಿಸ್ಟೆಂಟ್ ಹುದ್ದೆ : 220 ಹುದ್ದೆ

ಒಟ್ಟು ಹುದ್ದೆಗಳ ಸಂಖ್ಯೆ : 320 ಹುದ್ದೆ

ಸ್ಪೋರ್ಟ್ಸ್ ಮತ್ತು ಡಿಪ್ಲೋಮಾ ಗೆ ಸಂಬಂಧ ಪಟ್ಟ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕೋಚ್ ಹುದ್ದೆಗೆ ಗರಿಷ್ಠ 45 ವರ್ಷ ಹಾಗೂ ಅಸಿಸ್ಟೆಂಟ್ ಕೋಚ್ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು.

ಕೋಚ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,05,000/- ರೂ ನಿಂದ ರೂ. 1,50,000/- ವೇತನವಿರುತ್ತದೆ.

ಅಸಿಸ್ಟೆಂಟ್ ಕೋಚ್ ಹುದ್ದೆಗೆ ಮಾಸಿಕ ರೂ.41,420/- ನಿಂದ ರೂ.1,12,400/- ವೇತನವಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ‌‌ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ‌ ಜೂನ್ 05, 2021ರೊಳಗೆ ಸಲ್ಲಿಸಬೇಕು.

ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment