ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಲಿದ್ದು, ಮೇ 20, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 20-04-2021
ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2021
ಹುದ್ದೆ : ಅಸಿಸ್ಟೆಂಟ್ ಕೋಚ್ – 220
ಕೋಚ್ – 100
ಹುದ್ದೆ ಸ್ಥಳ : ಆಲ್ ಇಂಡಿಯಾ (ಭಾರತದೆಲ್ಲೆಡೆ)
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಬೋರ್ಡ್/ ಯುನಿವರ್ಸಿಟಿಯಿಂದ ಡಿಪ್ಲೋಮಾ ತೇರ್ಗಡೆ ಹೊಂದಿರಬೇಕು.
ಅಸಿಸ್ಟೆಂಟ್ ಕೋಚ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.41,420/-ರಿಂದ 1,12,400/- ರೂ. ವೇತನವಿರುತ್ತದೆ. ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಮೀರಿರಬಾರದು.
ಕೋಚ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.1,05,000/- ರಿಂದ ರೂ.1,50,000/- ವೇತನವಿರುತ್ತದೆ. ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ : ಈ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.
ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕೋಚ್ ಹುದ್ದೆ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಸಿಸ್ಟೆಂಟ್ ಕೋಚ್ ಹುದ್ದೆಗಳ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ