SAI : 21 ಯಂಗ್ ಪ್ರೊಫೆಷನಲ್ ಹುದ್ದೆಗೆ ನೇಮಕ

Advertisements

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ( ಎಸ್ಎಐ)ದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 16,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-04-2021( 5.00pm)
ಆನ್ಲೈನ್ ಅರ್ಜಿ ಸಲ್ಲಿಸಲು ಕೊ‌ನೆಯ ದಿನಾಂಕ 16-04-2021 (5.00 pm ವರೆಗೆ)

ಹುದ್ದೆ : ಯಂಗ್ ಪ್ರೊಫೆಷನಲ್ (ಎಆರ್ ಎಂ) (ಅಥ್ಲೇಟ್ ರಿಲೇಷನ್ ಮ್ಯಾನೇಜರ್ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಈ ಮೇಲ್ಕಂಡ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಒಟ್ಟು ಹುದ್ದೆ : 21

ವಿದ್ಯಾರ್ಹತೆ : ಅಭ್ಯರ್ಥಿಗಳು ಪದವಿ, ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ : ಗರಿಷ್ಠ 35 ವರ್ಷದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ : ಯಂಗ್ ಪ್ರೊಫೆಷನಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,000 ರಿಂದ ರೂ.60,000/- ವರೆಗೆ ವೇತನವಿರುತ್ತದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 16, 2011 ಸಂಜೆ 5 ರೊಳಗಾಗಿ ಸಲ್ಲಿಸಬೇಕು.

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment