ಸಾರಸ್ವತ್ ಕೋ-ಅಪರೇಟಿವ್ ಬ್ಯಾಂಕ್ ನಲ್ಲಿ ಹುದ್ದೆಗಳಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಮಾರ್ಚ್ ಕೊನೆಯ ದಿನಾಂಕವಾಗಿರುತ್ತದೆ. ಹುದ್ದೆಗಳ ವಿವರ, ಅರ್ಜಿ ಶುಲ್ಕ, ವಯೋಮಿತಿ, ವಿದ್ಯಾರ್ಹತೆಯ ಬಗ್ಗೆ ಮುಂದೆ ನೀಡಲಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-03-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-03-2021
ಅಪ್ಲಿಕೇಶನ್ ಮಾಹಿತಿ ತಿದ್ದುಪಡಿಗೆ ಕೊನೆಯ ದಿನಾಂಕ : 31-03-2021
ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 15-04-2021
ಆನ್‌ಲೈನ್ ಪರೀಕ್ಷಾ ದಿನಾಂಕ : ಮೇ 2021
ಸಾರಸ್ವತ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ಬ್ಯುಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳು ಗ್ರೇಡ್ ಬಿ ( ಕ್ಲೆರಿಕಲ್ ಕೇಡರ್) ಹುದ್ದೆಗಳಾಗಿವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬ್ಯುಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳ ವಿವರ
ಮಹಾರಾಷ್ಟ್ರ-134
ಮಧ್ಯಪ್ರದೇಶ-2
ಗೋವಾ -3
ಕರ್ನಾಟಕ-6
ಗುಜರಾತ್ -5
ಒಟ್ಟು ಹುದ್ದೆಗಳು – 150
ಕರ್ನಾಟಕದಲ್ಲಿ ಬೆಂಗಳೂರು, ದಾವಣಗೆರೆ, ಮೈಸೂರು, ಮಂಗಳೂರು ಶಾಖೆಗಳಲ್ಲಿ ನೇಮಕ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಅಪ್ಲಿಕೇಶನ್ ಶುಲ್ಕ ರೂ. 750/- ಪಾವತಿಸಬೇಕು. ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್,ಮೊಬೈಲ್ ವ್ಯಾಲೆಟ್ ಬಳಸಿ ಶುಲ್ಕ ಪಾವತಿಸಬಹುದು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಿದ್ಯಾರ್ಹತೆ : ಯಾವುದೇ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಡೆದುಕೊಂಡಿರಬೇಕು.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ