ಸಾರಸ್ವತ್ ಕೋಅಪರೇಟಿವ್ ಬ್ಯಾಂಕ್ ನಲ್ಲಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಸಾರಸ್ವತ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್, 19 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-03-2021
ಅರ್ಜಿ ಶುಲ್ಕ: ರೂ.750/-

ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಸಾರಸ್ವತ ಬ್ಯಾಂಕ್ ನಲ್ಲಿ 150 ಜ್ಯೂನಿಯರ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ : ರೂ. 21,620 ರಿಂದ ರೂ. 23,300 ರವರೆಗೆ

ಹುದ್ದೆ ಸ್ಥಳ: ಮಹಾರಾಷ್ಟ್ರ, ಗೋವಾ,ಕರ್ನಾಟಕ, ಗುಜರಾತ್

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು 750/ ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ವಿದ್ಯಾರ್ಹತೆ: ಸಾರಸ್ವತ ಬ್ಯಾಂಕ್ ನಲ್ಲಿ ಗ್ರಾಜ್ಯುಯೇಶನ್, ಪೋಸ್ಟ್ ಗ್ರಾಜ್ಯುಯೇಶನ್ ಪದವಿಯನ್ನು ಯಾವುದಾದರೂ ಸಂಸ್ಥೆ/ಬೋರ್ಡ್ ನಿಂದ ಹೊಂದಿರಬೇಕು.

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 27 ವಯೋಮಿತಿ ಹೊಂದಿರಬೇಕು.

Leave a Comment