SBI : ಭರ್ಜರಿ ನೇಮಕ : ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

ಹುದ್ದೆ : ಕ್ಲರ್ಕ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದೆ.

ಹುದ್ದೆ ಸಂಖ್ಯೆ : 5237

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಎಪ್ರಿಲ್ 27, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 17, 2021

ಕರ್ನಾಟಕದಲ್ಲಿ 509 ಕ್ಲರ್ಕ್ ಹುದ್ದೆಗಳನ್ನು ನೇಮಕ ಮಾಡಲಾಗುವುದು.

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿವಿಯಿಂದ ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ವಿದ್ಯಾಭ್ಯಾಸ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಾಸ್ ಮಾಡಿರಬೇಕು.

ವಯೋಮಿತಿ : ಈ ಹುದ್ದೆಗೆ ಕನಿಷ್ಠ 20 ಹಾಗೂ ಗರಿಷ್ಠ 28 ವಯೋಮಿತಿ ಮೀರದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗೆ ರೂ. 750/- ಹಿಂದುಳಿದ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.750/- ಎಸ್‌ಸಿ/ಎಸ್‌ಟಿ/ಪಿಡಬ್ಲೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ರಿಜಿಸ್ಟ್ರೇಷನ್ ಪಡೆದ ಅಭ್ಯರ್ಥಿಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 31, 2021 ರಂದು ಮಾಡಲಾಗುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ದಿನಾಂಕಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ಇರಬಹುದು. ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯಲ್ಲಿಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಮತ್ತು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ಅಧಿಕೃತ ಭಾಷೆಗಳ ಕುರಿತು ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಂತಿಮವಾಗಿ ಕ್ಲರ್ಕ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮೂಲ ವೇತನ ರೂ. 13,075 ನೀಡಲಾಗುತ್ತದೆ. ಜತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment