SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.

ಎಲ್ಲೆಲ್ಲಿ ಎಷ್ಟು ಹುದ್ದೆ :

ಗುಜರಾತ್ – 354 ಹುದ್ದೆಗಳು
ಕರ್ನಾಟಕ – 278 ಹುದ್ದೆಗಳು
ಮಧ್ಯಪ್ರದೇಶ – 162 ಹುದ್ದೆಗಳು
ಛತ್ತೀಸ್ ಗಢ – 52 ಹುದ್ದೆಗಳು
ತಮಿಳುನಾಡು – 276 ಹುದ್ದೆಗಳು
ರಾಜಸ್ತಾನ – 104 ಹುದ್ದೆಗಳು
ಒಟ್ಟು – 1226 ಹುದ್ದೆಗಳು

ವಿದ್ಯಾರ್ಹತೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ)ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಗಳು ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಬ್ಯಾಂಕಿನಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ : ಡಿ.1, 2021 ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/- ರೂ.ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್ ಆರ್ ಒ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು ರೂ. 750/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಎಸ್ ಬಿಐ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ನಂತರ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.

Leave a Comment