SEBI Recruitment 2024: ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 97 ಹುದ್ದೆಗಳು ಖಾಲಿ ಇದ್ದು, ಆಫೀಸರ್ ಗ್ರೇಡ್ ಎ (ಸಹಾಯಕ ಮ್ಯಾನೇಜರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: coming soon
ಹುದ್ದೆಯ ವಿವರ ಇಲ್ಲಿದೆ
ಹುದ್ದೆ ಹೆಸರು ಮತ್ತು ಸಂಖ್ಯೆ: ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಒಟ್ಟು 97 ಹುದ್ದೆಗಳಿದ್ದು, ಆಫೀಸರ್ ಗ್ರೇಡ್ ಎ (ಸಹಾಯಕ ವ್ಯವಸ್ಥಾಪಕ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44500-89150/- ವೇತನವಿರಲಿದೆ.
ಹುದ್ದೆಯ ವಿವರ:
ಸಾಮಾನ್ಯ (General) 62 ಹುದ್ದೆಗಳು
ಕಾನೂನು 5 ಹುದ್ದೆ
ಮಾಹಿತಿ ತಂತ್ರಜ್ಞಾನ 24 ಹುದ್ದೆಗಳು
ಇಂಜಿನಿಯರಿಂಗ್ (ಎಲೆಕ್ಟ್ರಿಕಲ್) 2 ಹುದ್ದೆಗಳು
ಸಂಶೋಧನೆ 2 ಹುದ್ದೆಗಳು
ಅಧಿಕೃತ ಭಾಷೆ 2 ಹುದ್ದೆಗಳು
ಒಟ್ಟು 97 ಹುದ್ದೆಗಳು
ವಿದ್ಯಾರ್ಹತೆ:
ಸಾಮಾನ್ಯ (General) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು/ಎಂಜಿನಿಯರಿಂಗ್‌ನಲ್ಲಿ ಪದವಿ, LLB, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
ಕಾನೂನು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿ, LLB ತೇರ್ಗಡೆ ಹೊಂದಿರಬೇಕು.
ಮಾಹಿತಿ ತಂತ್ರಜ್ಞಾನ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರಬೇಕು.
ಎಂಜಿನಿಯರಿಂಗ್ (ಎಲೆಕ್ಟ್ರಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರಬೇಕು.
ಸಂಶೋಧನೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭರ್ಥಿಗಳು ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.
ಅಧಿಕೃತ ಭಾಷೆ (Official Langugage) ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ ರೂ.100/-, UR/OBC/EWS ಅಭ್ಯರ್ಥಿಗಳಿಗೆ ರೂ.1000/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ