ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆ : ಐದು ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ (Junior Assistant cum sales clerk) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿ : 3
ಪರಿಶಿಷ್ಟ ಜಾತಿ : 2
ಪ್ರವರ್ಗ – 1-1
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸಂಘವು ಪೂರೈಸುವ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ : 24-05-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಕಲಿತಿರಬೇಕು. ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಅಪರೇಟ್ ಮತ್ತು ಅಪ್ಲಿಕೇಶನ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ ಹದಿನೆಂಟು ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ಗರಿಷ್ಠ ವಯೋಮಿತಿಗೊಳಪಟ್ಟಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ – 1 ಅಭ್ಯರ್ಥಿಗಳಿಗೆ 40 ವರ್ಷ, 2a, 2b,3a, 3b ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ : ಸಂಘದ ಕೇಂದ್ರ ಕಚೇರಿಯಲ್ಲಿ ಅರ್ಜಿಯನ್ನು ವಿತರಿಸಲಾಗುವುದು. ರೂ.2000 ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು.
ಸಂಘದಿಂದ ಪೂರೈಸಿದ ಮೂಲ ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ -562125 ಇಲ್ಲಿಗೆ ಸಲ್ಲಿಸಬೇಕು.