ಸಿಬ್ಬಂದಿ ನೇಮಕಾತಿ ಆಯೋಗವು ( ಎಸ್ ಎಸ್ ಸಿ) ಜೆನರಲ್ ಡ್ಯೂಟಿ ಕಾನ್ಸ್‌ಟೇಬಲ್ ಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, 31-08-2021 ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿ ಹಾಗೂ ಇನ್ನಿತರ ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ : ಗಡಿ ಭದ್ರತಾ ಪಡೆ: 7545
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 8464
ಸಶಸ್ತ್ರ ಸೀಮಾ ಬಲ : 3806
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ : 1431
ಅಸ್ಸಾಂ ರೈಫಲ್ಸ್ : 3785
ಸೆಕ್ರರಿಯೇಟ್ ಸೆಕ್ಯುರಿಟಿ ಫೋರ್ಸ್ : 240
ಒಟ್ಟು ಹುದ್ದೆಗಳ ಸಂಖ್ಯೆ : 25,271
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021
ಆನ್ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ ಕಟ್ಟಲು ಕೊನೆಯ ದಿನಾಂಕ : 02-09-2021
ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 04-09-2021
ಶುಲ್ಕ : ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ ರೂ.100/- , ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಎಸ್ ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಸಲ್ಲಿಸಬಹುದು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ ವಯೋಮಿತಿ ಮೀರಿರಬಾರದು.
ವಿದ್ಯಾರ್ಹತೆ : ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಹೆಚ್ಚಿನ ವಿವರಗಳಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ