SSC Phase XII 2024: ಎಸ್‌ಎಸ್‌ಸಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ, 2049 ಪೋಸ್ಟ್‌ಗಳಿಗೆ ಈ ದಿನದವರೆಗೆ ನೋಂದಾಯಿಸಿ

Advertisements

SSC Recruitment 2024: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ಅಧಿಕೃತ ಅಧಿಸೂಚನೆಯ ಮೂಲಕ ಹಂತ-XII ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 2049 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 18-ಮಾರ್ಚ್-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು 26 ಮಾರ್ಚ್ 2024 ಅರ್ಜಿ ವರೆಗೆ ವಿಸ್ತರಿಸಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26ನೇ ಮಾರ್ಚ್ 2024 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 27, 2024 ರವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಪಾವತಿ ಸೇರಿದಂತೆ ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ ದಿನಾಂಕಗಳು: 30 ಮಾರ್ಚ್ 2024 ರಿಂದ 01 ಏಪ್ರಿಲ್ 2024
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳು: 06 ರಿಂದ 08 ಮೇ 2024

ಹುದ್ದೆಗಳ ವಿವರ
ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?
ಮಲ್ಟಿಟಾಸ್ಕಿಂಗ್‌ ಸ್ಟಾಫ್‌, ರಿಹ್ಯಾಬಿಲಿಟೇಶನ್‌ ಕೌನ್ಸೆಲರ್‌, ಕಂಸರ್‌ವೇಶನ್‌ ಅಸಿಸ್ಟಂಟ್‌, ಟೆಕ್ನಿಕಲ್‌ ಅಸಿಸ್ಟಂಟ್‌, ಟೆಕ್ನಿಕಲ್‌ ಸೂಪರಿಂಟೆಂಡೆಂಟ್‌, ಜೂನಿಯರ್‌ ಸೀಡ್‌ ಅನಾಲಿಸ್ಟ್‌, ಅಕೌಂಟೆಂಟ್‌, ಹೆಡ್‌ ಕ್ಲರ್ಕ್‌, ಸ್ಟಾಫ್‌ ಕಾರ್‌ ಡ್ರೈವರ್‌, ಗರ್ಲ್ಸ್‌ ಕೆಡೆಟ್‌ ಇನ್‌ಸ್ಟ್ರಕ್ಟರ್‌, ಮೆಕ್ಯಾನಿಕಲ್‌ ವಿಭಾಗ ಚಾರ್ಜ್‌ಮನ್‌, ಸೈಂಟಿಫಿಕ್‌ ಅಸಿಸ್ಟೆಂಟ್‌, ರಿಸರ್ಚ್‌ ಇನ್ವೆಸ್ಟಿಗೇಟರ್‌, ಜೂನಿಯರ್‌ ಕಂಪ್ಯೂಟರ್‌ ಅಪರೇಟರ್‌, ಸಬ್‌ ಎಡಿಟರ್‌ (ಹಿಂದಿ), ಸಬ್‌ ಎಡಿಟರ್‌ (ಇಂಗ್ಲೀಷ್‌), ಸೀನಿಯರ್‌ ಸೈಂಟಿಫಿಕ್‌ ಅಸಿಸ್ಟೆಂಟ್‌ (ಬಯೋಲಜಿ), ಇತರೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಮೇಲೆ ನೀಡಲಾದ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.2000 ರಿಂದ ರೂ.40000 ವರೆಗೆ ವೇತನವಿರುತ್ತದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಮತ್ತು ಆಫ್‌ಲೈನ್‌ ಚಲನ್‌ ಮೂಲಕ ಪಾವತಿಸಬೇಕು. ಎಸ್‌ಸಿ.ಎಸ್ಟಿ,ಮಹಿಳಾ ಅಭ್ಯರ್ಥಿಗಳು,PwBD ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಡಿ (ಒಬಿಸಿ)ಅಭ್ಯರ್ಥಿಗಳಿಗೆ 13 ವರ್ಷ, ಪಿಡಬ್ಲೂಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌, ದಾಖಲೆಗಳ ಪರಿಶೀಲನೆ ಮೂಲಕ ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಪರೀಕ್ಷೆಯ ಕೇಂದ್ರಗಳು ಎಲ್ಲೆಲ್ಲಿದೆ?
ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಕವರಟ್ಟಿ, ಬೆಳಗಾವಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ;
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://ssc.gov.in ಗೆ ಭೇಟಿ ನೀಡಬೇಕು, ನಂತರದ ಪುಟದಲ್ಲಿ ಕಾಣುವ Login or Register ಎಂಬಲ್ಲಿ ಕ್ಲಿಕ್‌ ಮಾಡಬೇಕು. ಈ ಲಿಂಕ್‌ ಕ್ಲಿಕ್‌ ಮಾಡಿದಾಗ ಇನ್ನೊಂದು ಪೇಜ್‌ ಬರುತ್ತದೆ, ಅಲ್ಲಿ ನಿಮ್ಮ ವಿವರಗಳನ್ನು ನೀಡಿ ರಿಜಿಸ್ಟ್ರೇಷನ್‌ ಮಾಡ್ಕೊಳ್ಳಿ. ಆಮೇಲೆ ಇನ್ನೊಮ್ಮೆ ಲಾಗಿನ್‌ ಆಗಿ ಎಲ್ಲಾ ಮಾಹಿತಿ, ದಾಖಲೆ ಸಹಿತ ನೀಡಿ.