SSC Jobs: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನಲ್ಲಿ 12 ಅಕೌಂಟ್ಸ್‌ ಆಫೀಸರ್‌, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಮಾಸಿಕ ಲಕ್ಷ ಸಂಬಳ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

SSC Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ವಿವಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 12 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಕೌಂಟೆಂಟ್, ಅಕೌಂಟ್ಸ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳುವ ಸುವರ್ಣಾವಕಾಶ ನಿಮಗಿದೆ. ಆಸಕ್ತ ಅಭ್ಯರ್ಥಿಗಳು 27-ಮೇ-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2024

ಹುದ್ದೆಯ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಸಿಬ್ಬಂದಿ ಆಯ್ಕೆ ಆಯೋಗ (SSC) ಒಟ್ಟು 12 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅಖಿಲ ಭಾರತ ಸರಕಾರದಲ್ಲಿ ಕೆಲಸ ಮಾಡಬೇಕೆನ್ನುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9300-142400/- ವೇತನ ಲಭಿಸಲಿದೆ.

ಹುದ್ದೆಯ ಹೆಸರು: ಅಕೌಂಟೆಂಟ್, ಅಕೌಂಟ್ಸ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹೆಸರು ಮತ್ತು ಸಂಖ್ಯೆ:
ಅಕೌಂಟೆಂಟ್ ಹುದ್ದೆ – 7 ಹುದ್ದೆಗಳು ಖಾಲಿ ಇದೆ.
ಲೆಕ್ಕಾಧಿಕಾರಿ ಹುದ್ದೆ- 5 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ: SSC ನಿಯಮಗಳ ಪ್ರಕಾರ ವಿದ್ಯಾಭ್ಯಾಸದ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯಸ್ಸಿನ ಮಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಸಿಬ್ಬಂದಿ ಆಯ್ಕೆ ಆಯೋಗದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಲೆಕ್ಕಾಧಿಕಾರಿ ಹುದ್ದೆಗೆ ಮಾಸಿಕ ರೂ.9300-34800/- ವೇತನವಿರಲಿದೆ.
ಖಾತೆ ಅಧಿಕಾರಿ ಹುದ್ದೆಗೆ ರೂ.44900-142400/- ವೇತನವಿರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ. ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ವಿಳಾಸ: Secretary (Estt.), Block No. 12, CGO Complex, Lodhi Road, New Delhi-110003 ಇಲ್ಲಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಅಂದರೆ 27-05-2024 ರೊಳಗೆ ಅರ್ಜಿ ಸಲ್ಲಿಸಬೇಕು.‌

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.