SSC Recruitment 2024: ಮಾರ್ಚ್ 2024 ರ SSC ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 4187 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 4187 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಬ್-ಇನ್ಸ್‌ಪೆಕ್ಟರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಸಿಬ್ಬಂದಿ ಆಯ್ಕೆ ಆಯೋಗವು ಅರ್ಜಿ ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 28-Mar-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-03-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-03-2024
‘ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್‌ಲೈನ್ ಪಾವತಿಯ ದಿನಾಂಕ: 30.03.2024 ರಿಂದ 31.03.2024.
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ: 9ನೇ, 10ನೇ ಮತ್ತು 13ನೇ ಮೇ, 2024.
ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
ಹುದ್ದೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)ವು ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 4187 ಹುದ್ದೆಗಳು ಖಾಲಿ ಇದ್ದು, ಭಾರತದಾದ್ಯಂತ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ವೇತನ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 – 1,12,400/- ವೇತನ ಸಿಗಲಿದೆ.
ಹುದ್ದೆಗಳು ಹಾಗೂ ಪೋಸ್ಟ್‌ಗಳ ಸಂಖ್ಯೆ:
ದೆಹಲಿ ಪೊಲೀಸ್ SI (ಪುರುಷ) 125
ದೆಹಲಿ ಪೊಲೀಸ್ SI (ಮಹಿಳೆ) 61
ಬಿಎಸ್‌ಎಫ್- 892
ಸಿಐಎಸ್‌ಎಫ್- 1597
ಸಿಆರ್‌ಪಿಎಫ್- 1172
ಐಟಿಬಿಪಿ- 278
ಎಸ್‌ಎಸ್‌ಬಿ- 62
ಒಟ್ಟು ಹುದ್ದೆಗಳು 4187
ವಿದ್ಯಾರ್ಹತೆ: ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ 25 ವರ್ಷಗಳನ್ನು ಮೀರಿರಬಾರದು. OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ, PWD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, PWD (OBC) ಅಭ್ಯರ್ಥಿಗಳಿಗೆ 13 ವರ್ಷ, PWD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:ಸಾಮಾನ್ಯ/ OBC/EWS ಅಭ್ಯರ್ಥಿಗಳು: ರೂ. 100/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. SC/ST ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು CBT ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ