ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ಇಲ್ಲಿ ಖಾಲಿ ಇರುವ 8 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ‌ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ 01-10-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು.

ಹುದ್ದೆಯ ಹೆಸರು : ಕಿರಿಯ ಸಹಾಯಕ

ವೇತಣ ಶ್ರೇಣಿ : ರೂ.21,400/- ರಿಂದ ರೂ.42,000/- + ಇತರ ಭತ್ಯೆಗಳು

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ/ಬಿಎಸ್ ಸಿ/ಬಿಸಿಎ/ ಬಿಕಾಂ/ ಬಿಬಿಎ ಯಾವುದಾದರೂ ಪದವಿಯಲ್ಲಿ ಕನಿ ಶೇಕಡ 50 ಹಾಗೂ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.

ವಯೋಮಿತಿ : ಅಭ್ಯರ್ಥಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ ಈ ಕೆಳಕಂಡಂತೆ ‌ಗರಿಷ್ಠ ವಯೋಮಿತಿ ‌ಮೀರಿರಬಾರದು.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಪ್ರವರ್ಗ 1 – 40 ವರ್ಷ
ಹಿಂದುಳಿದ ವರ್ಗದ ಪ್ರವರ್ಗಗಳು – 38 ವರ್ಷ
ಸಾಮಾನ್ಯ ವರ್ಗ – 35 ವರ್ಷ

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ 1
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ 2

Leave a Comment