Tag: ಉದ್ಯೋಗ ವಾರ್ತೆ

  • RRB Technician Recruitment 2024: 9144 ಟೆಕ್ನಿಷಿಯನ್‌ ಪೋಸ್ಟ್‌ಗಳಿಗೆ ನೋಂದಣಿ ಪ್ರಾರಂಭ, ಅರ್ಜಿ ಸಲ್ಲಿಸಲು ನೇರ ಲಿಂಕ್‌ ಇಲ್ಲಿದೆ

    RRB Technician Recruitment 2024: 9144 ಟೆಕ್ನಿಷಿಯನ್‌ ಪೋಸ್ಟ್‌ಗಳಿಗೆ ನೋಂದಣಿ ಪ್ರಾರಂಭ, ಅರ್ಜಿ ಸಲ್ಲಿಸಲು ನೇರ ಲಿಂಕ್‌ ಇಲ್ಲಿದೆ

    RRB Recruitment 2024: RRB ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 9144 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಟೆಕ್ನಿಷಿಯನ್‌ ಹುದ್ದೆಗಳಿಗೆ ಆರ್‌ಆರ್‌ಬಿ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ನೇಮಕಾತಿ ಪ್ರಾರಂಭ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಕೂಡಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು 08-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 09-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 08-04-2024

    ಹುದ್ದೆಯ ವಿವರಗಳು ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ತಂತ್ರಜ್ಞ ಹುದ್ದೆಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 9144 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ತಂತ್ರಜ್ಞ ಗ್ರೇಡ್ I ಸಿಗ್ನಲ್: 1092 ಪೋಸ್ಟ್‌ಗಳು
    ತಂತ್ರಜ್ಞ ಗ್ರೇಡ್ III: 8052 ಪೋಸ್ಟ್‌ಗಳು

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900 – 29,200/-ರೂ. ವೇತನ ಸಿಗಲಿದೆ.

    ವಿದ್ಯಾರ್ಹತೆ: ಅಭ್ಯರ್ಥಿಗಳು 10th, 12th, ITI, ಡಿಪ್ಲೊಮಾ, B.Sc, BE/ B.Tech ಅನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ತೇರ್ಗಡೆ ಹೊಂದಿರಬೇಕು.

    ಹುದ್ದೆ ಹೆಸರು ಮತ್ತು ಅರ್ಹತೆ;
    ತಂತ್ರಜ್ಞ Gr I ಸಿಗ್ನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, B.Sc, BE/ B.Tech ತೇರ್ಗಡೆ ಹೊಂದಿರಬೇಕು.
    ತಂತ್ರಜ್ಞ III ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ, 12ನೇ, ಐಟಿಐ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 18 ವರ್ಷ, ಗರಿಷ್ಠ 36 ವರ್ಷ ಮೀರಿರಬಾರದು. ಒಬಿಸಿ(ಎನ್‌ಸಿಎಲ್‌) ಅಭ್ಯರ್ಥಿಗಳಿಗೆ -3 ವರ್ಷ, ಎಸ್‌ಸಿ,ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ, ಎಕ್ಸ್‌ ಸರ್ವಿಸ್‌ಮೆನ್‌, PwBD, ಮಹಿಳೆಯರು, Transgender, ಇಬಿಸಿ ಅಭ್ಯರ್ಥಿಗಳಿಗೆ ರೂ.250, ಉಳಿದ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್‌ ಮೂಲಕವಷ್ಟೇ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ವೇತನ: ಟೆಕ್ನಿಷಿಯನ್‌ Gr 1 Signal ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.29,200 ವೇತನವಿರಲಿದೆ. ಟೆಕ್ನಿಷಿಯನ್‌111 ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.19,900 ವೇತನವಿರಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ? ರೈಲ್ವೆ ನೇಮಕಾತಿ ಮಂಡಳಿಯ (RRB) ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಿ, ಇಲ್ಲಿ ನೀವು ‘ಆನ್‌ಲೈನ್‌ನಲ್ಲಿ ಅನ್ವಯಿಸು – ತಂತ್ರಜ್ಞರ ನೇಮಕಾತಿ 2024’ ಎಂಬ ಆಯ್ಕೆಯನ್ನು ಕಾಣಬಹುದು ಮತ್ತು ಅದರ ಮೇಲೆ ಕ್ಲಿಕ್ ಮಾಡಿ, ನಂತರ ಅಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ, ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಬಳಸಿ ಲಾಗ್‌ಇನ್‌ ಮಾಡಿ, ಶೈಕ್ಷಣಿಕ ಅರ್ಹತೆ, ಭಾವಚಿತ್ರ ಮತ್ತು ಸಹಿಯನ್ನು ಒಳಗೊಂಡ ದಾಖಲೆಗಳನ್ನು ಅಪಲೋಡ್‌ ಮಾಡಿ, ಅರ್ಜಿ ಶುಲ್ಕ ಪಾವತಿಸಿ. ಸಬ್‌ಮಿಟ್‌ ಬಟನ್‌ ಒತ್ತುವ ಮೊದಲು ನೀವು ನಮೂದಿಸಿದ ಎಲ್ಲಾ ವಿವರಗಳನ್ನು ಕ್ರಾಸ್-ಚೆಕ್ ಮಾಡಿ, ನಂತರ ಸಬ್‌ಮಿಟ್‌ ಬಟ್‌ ಕ್ಲಿಕ್‌ ಮಾಡಿ

    ಹುದ್ದೆಯ ಕುರಿತು ಡಿಟೇಲ್ಡ್‌ ನೋಟಿಫಿಕೇಷನ್‌ ಇಲ್ಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ನೇರ ಲಿಂಕ್‌ ಇಲ್ಲಿದೆ.

  • Vijayanagar Zilla Panchayat Recruitment 2024: ಜಿಲ್ಲಾ ಪಂಚಾಯತಿಯಲ್ಲಿ ಡಿಇಒ, ತಾಂತ್ರಿಕ ಸಹಾಯಕ ಹುದ್ದೆಗಳು ಖಾಲಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

    Vijayanagar Zilla Panchayat Recruitment 2024: ಜಿಲ್ಲಾ ಪಂಚಾಯತಿಯಲ್ಲಿ ಡಿಇಒ, ತಾಂತ್ರಿಕ ಸಹಾಯಕ ಹುದ್ದೆಗಳು ಖಾಲಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

    Vijayanagar Zilla Panchayat Recruitment 2024: ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. DEO ಖಾಲಿ ಹುದ್ದೆಗಳದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿಜಯನಗರ – ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುವವರಿಗೆ ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-Mar-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 01-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-03-2024

    ಹುದ್ದೆಯ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
    ಹುದ್ದೆಯ ಹೆಸರು: ತಾಂತ್ರಿಕ ಸಹಾಯಕ, DEO ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000-28000/- ವೇತನವಿರತ್ತದೆ.

    ಹುದ್ದೆ ಹೆಸರು ಮತ್ತು ಖಾಲಿ ಇರೋ ಹುದ್ದೆಗಳ ಸಂಖ್ಯೆ;
    ತಾಂತ್ರಿಕ ಸಹಾಯಕ (ಕೃಷಿ) 3, ತಾಂತ್ರಿಕ ಸಹಾಯಕ (ತೋಟಗಾರಿಕೆ) 4, ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) 2, ತಾಂತ್ರಿಕ ಸಹಾಯಕ (ಅರಣ್ಯ) 3, ಡೇಟಾ ಎಂಟ್ರಿ ಆಪರೇಟರ್ (DEO) 1. ಒಟ್ಟು 13 ಹುದ್ದೆಗಳು ಖಾಲಿ ಇದೆ.

    ವಿದ್ಯಾರ್ಹತೆ:
    ಟೆಕ್ನಿಕಲ್ ಅಸಿಸ್ಟೆಂಟ್ (ಕೃಷಿ) ಹುದ್ದೆಗೆ ಕೃಷಿಯಲ್ಲಿ ಪದವಿ ಪಡೆದಿರಬೇಕು. ತೋಟಗಾರಿಕೆಯಲ್ಲಿ ತಾಂತ್ರಿಕ ಸಹಾಯಕ (ತೋಟಗಾರಿಕೆ) ಹುದ್ದೆಗೆ ಪದವಿ ಪಾಸಾಗಿರಬೇಕು. ರೇಷ್ಮೆ ಕೃಷಿಯಲ್ಲಿ ತಾಂತ್ರಿಕ ಸಹಾಯಕ (ಸೆರಿಕಲ್ಚರ್) ಹುದ್ದೆಗೆ ಪದವಿ ಪಡೆದಿರಬೇಕು. ಅರಣ್ಯದಲ್ಲಿ ತಾಂತ್ರಿಕ ಸಹಾಯಕ (ಅರಣ್ಯಶಾಸ್ತ್ರ) ಹುದ್ದೆಗೆ ಪದವಿ ಹೊಂದಿರಬೇಕು. ಡೇಟಾ ಎಂಟ್ರಿ ಆಪರೇಟರ್ (DEO) ಹುದ್ದೆಗೆ ಯಾವುದೇ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 02 ರಿಂದ 03 ವರ್ಷಗಳ ಅನುಭವವನ್ನು ಹೊಂದಿರಬೇಕು

    ವಯೋಮಿತಿ: ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಟ ವಯಸ್ಸು 21 ವರ್ಷ, ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

    ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ವೇತನ: ತಾಂತ್ರಿಕ ಸಹಾಯಕ (ಕೃಷಿ), ತಾಂತ್ರಿಕ ಸಹಾಯಕ (ತೋಟಗಾರಿಕೆ), ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ), ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗಳಿಗೆ ರೂ.28,000 ವೇತನವಿದೆ. ಡೇಟಾ ಎಂಟ್ರಿ ಆಪರೇಟರ್ (DEO) ರೂ.18000/- ವೇತನವಿರಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Grama Panchayath Jobs: ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

    Grama Panchayath Jobs: ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

    Koppal Grama Panchayath Recruitment 2024: ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅರ್ಜಿ ಸಲ್ಲಿಸಬಹುದು. ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 04-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024

    ವಿದ್ಯಾರ್ಹತೆ: ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಸರ್ಟಿಫೀಕೋಟ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್‌ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 03-04-2024 ಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂತೆ ಇರಬೇಕು.
    ಸಾಮಾನ್ಯ ವರ್ಗ- 18 ರಿಂದ 35 ವರ್ಷ
    2ಎ,2ಬಿ,3ಎ,3ಬಿ ಅಭ್ಯರ್ಥಿಗಳು 18 ರಿಂದ 38 ವರ್ಷ
    ಪ.ಜಾತಿ/ಪ.ಪಂ/ಪ್ರವರ್ಗ-1 -18 ರಿಂದ 40 ವರ್ಷ

    ಅರ್ಜಿ ಶುಲ್ಕ: ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾರಿ ಮಾಡಿಕೊಳ್ಳುತ್ತಿರುವುದರಿಂದ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್‌ ಮತ್ತು ರೋಸ್ಟರ್‌ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವ ವಿಧಾನ;
    ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳದಲ್ಲಿ ದ್ವಿ ಪ್ರತಿಯಲ್ಲಿ ಸಲ್ಲಿಸಲು ತಿಳಿಸಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪ ಅಕ್ಷರದಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆದಿರಬೇಕು.

    ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಪುನಃ ಆಹ್ವಾನಿಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲೆಯ ವೆಬ್‌ಸೈಟ್‌ನಲ್ಲಿ www.koppal.nic.in ರಲ್ಲಿ ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ ಕೊಪ್ಪಳ ಇಲ್ಲಿಗೆ ರಜೆ ದಿನಗಳನ್ನು ಹೊರತು ಪಡಿಸಿ ಅರ್ಜಿ ಸಲ್ಲಿಸುವ ಕೊನೆ ದಿನಾಂಕ 3-04-2024 ಸಾಯಂಕಾರ 5.30 ರೊಳಗೆ ಸಲ್ಲಿಸತಕ್ಕದ್ದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • RDPR Jobs 2024: ಆರ್‌ಡಿಪಿಆರ್‌ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್‌ಪರ್ಸನ್‌ಗಳ ನೇಮಕಾತಿ, ಇಂದೇ ಅರ್ಜಿ ಹಾಕಿ

    RDPR Jobs 2024: ಆರ್‌ಡಿಪಿಆರ್‌ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್‌ಪರ್ಸನ್‌ಗಳ ನೇಮಕಾತಿ, ಇಂದೇ ಅರ್ಜಿ ಹಾಕಿ

    RDPR Ombuds Persons Recruitment 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಓಂಬುಡ್ಸ್‌ ಪರ್ಸನ್ಸ್‌ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; ಮಾರ್ಚ್‌ 06,2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್‌ 06,2024

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ.

    ಹುದ್ದೆ; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಓಬುಡ್ಸ್‌ಪರ್ಸನ್ಸ್‌ರವರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

    ಓಬುಡ್ಸ್‌ಪರ್ಸನ್‌ ಹುದ್ದೆ ಖಾಲಿಯಿರುವ/ಖಾಲಿಯಾಗಲಿರುವ ಜಿಲ್ಲೆಗಳು: ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು ಮತ್ತು ವಿಜಯಪುರ

    ಅರ್ಹತೆ: ಸಾರ್ವಜನಿಕ ಆಡಳಿತ/ಕಾನೂನು/ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ,ಮ್ಯಾನೇಜ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ, ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಕಡ್ಡಾಯವಾಗಿ ಹೊಂದಿರಬೇಕು.

    ವಯೋಮಿತಿ: ಓಂಬುಡ್ಸ್‌ಪರ್ಸನ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿಯು 66 ವರ್ಷ ಮೀರಿರಬಾರದು.

    ವೇತನ: ಮಾಸಿಕ ರೂ.10000 ಗೌರವಧನ ಹಾಗೂ ಪ್ರತಿ ಸಿಟ್ಟಿಗ್‌ಗೆ ರೂ.2250 ರಂತೆ ಗರಿಷ್ಠ ರೂ.45000 ಮಿರಿಗೊಳಪಟ್ಟ ಸಿಟ್ಟಿಂಗ್‌ ಫೀಜು ನಿಗದಿಪಡಿಸಲಾಗಿದೆ.

    ಜಿಲ್ಲಾ ಮಟ್ಟದಲ್ಲಿ ಓಂಬುಡ್ಸ್‌ಪರ್ಸನ್‌ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ www.rdpr.karnataka.gov.in ನಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಡೌನ್‌ಲೋಡ್‌ ಮಾಡಿ, ತಮ್ಮ ಕಾರ್ಯನಿರ್ವಹಣೆ ಸೇವಾನುಭವದ ವಿವರಗಳನ್ನೊಳಗೊಂಡ ದಾಖಲೆ ಹಾಗೂ ಇತರೆ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 06.04.2024 ರೊಳಗೆ ತಲುಪುವಂತೆ ಖುದ್ದಾಗಿ/ಅಂಚೆ ಮೂಲಕ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
    ವಿಳಾಸ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, 5ನೇ ಮಹಡಿ, ಪ್ಲಾಟ್‌ ನಂ.1243, ಕೆ.ಎಸ್‌.ಐ.ಐ.ಡಿ.ಸಿ ಕಟ್ಟಡ, ಐ.ಟಿ.ಪಾರ್ಕ್‌, ಸೌತ್‌ ಬ್ಲಾಕ್‌, ರಾಜಾಜಿ ನಗರ ಇಂಡಸ್ಟ್ರಿಯಲ್‌ ಎಸ್ಟೇಟ್‌, ಬೆಂಗಳೂರು-560010 ಇವರಿಗೆ ಸಲ್ಲಿಸುವುದು.
    ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22342163 ಅನ್ನು ಸಂಪರ್ಕಿಸುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • ESIC Recruitment 2024: ನೌಕರರ ರಾಜ್ಯ ವಿಮಾ ನಿಗಮದಲ್ಲಿ 1930 ಹುದ್ದೆಗಳು ಖಾಲಿ; ಮಾಸಿಕ ರೂ.63ಸಾವಿರ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    ESIC Recruitment 2024: ನೌಕರರ ರಾಜ್ಯ ವಿಮಾ ನಿಗಮದಲ್ಲಿ 1930 ಹುದ್ದೆಗಳು ಖಾಲಿ; ಮಾಸಿಕ ರೂ.63ಸಾವಿರ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    ESIC Recruitment 2024: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಲೋಕ ಸೇವಾ ಆಯೋಗವು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 1930 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನರ್ಸಿಂಗ್‌ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ದಿನಾಂಕ ಮಾರ್ಚ್‌ 27,2024 ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 07-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024

    ಹುದ್ದೆಗಳ ವಿವರ ಇಲ್ಲಿದೆ: ನರ್ಸಿಂಗ್‌ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು 1930 ಹುದ್ದೆಗಳು ಖಾಲಿ ಇದೆ. ವರ್ಗಾವಾರು ಹುದ್ದೆಗಳ ಲಿಸ್ಟ್‌ ಇಲ್ಲಿ ನೀಡಲಾಗಿದೆ. ಸಾಮಾನ್ಯ ವರ್ಗ-892, EWS-193, OBC-446, SC-235, ST-164 ಹುದ್ದೆ ನೀಡಲಾಗಿದೆ.

    ವಿದ್ಯಾರ್ಹತೆ: ಬಿ.ಎಸ್‌ಸಿ (Hons) ನರ್ಸಿಂಗ್/ಬಿ.ಎಸ್‌.ಸಿ.ನರ್ಸಿಂಗ್‌/ಪೋಸ್ಟ್‌ ಬೇಸಿಕ್‌ ಬಿ.ಎಸ್‌.ಸಿ.ನರ್ಸಿಂಗ್‌ ತೇರ್ಗಡೆ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ನರ್ಸಿಂಗ್‌ ಕೌನ್ಸಿಲ್‌ನಲ್ಲಿ ನರ್ಸ್‌ ಅಥವಾ ನರ್ಸ್‌ ಸೂಲಗಿತ್ತಿಯಾಗಿ ನೋಂದಾಯಿಸಿಕೊಂಡಿರಬೇಕು ಅಥವಾ ಜನರಲ್‌ ನರ್ಸಿಂಗ್‌ ಮಿಡ್‌ ವೈಫರಿಯಲ್ಲಿ ಡಿಪ್ಲೋಮಾ ಕೋರ್ಸ್‌ ಮಾಡಿರುವವರಿಗೆ ಆದ್ಯತೆ ನೀಡಲಾಗುವುದು.

    ಅನುಭವ: ಒಂದು ವರ್ಷ 50ಹಾಸಿಗೆಗಳ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

    ವಯೋಮಿತಿ: ನೌಕರರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವವರ ಕನಿಷ್ಠ ವಯೋಮಿತಿಯು 18 ವರ್ಷ, ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷ ಚೇತನ ವ್ಯಕ್ತಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ವರ್ಗದ ಅಭ್ಯರ್ಥಿಗಳಿಗೆ ರೂ.25ನ್ನು ಅರ್ಜಿ ಶುಲ್ಕವಾಗಿ ಪಾವತಿ ಮಾಡಬೇಕು. ಮಹಿಳೆಯರು/ಎಸ್‌ಸಿ/ಎಸ್‌ಟಿ/ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಎರಡು ವರ್ಷ ಪ್ರೊಬೆಷನರಿ ಅವಧಿ ಇರಲಿದ್ದು, ನಂತರ ಹುದ್ದೆಯನ್ನು ಖಾಯಂ ಮಾಡಲಾಗುವುದು.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.42,300-ರೂ.63,300 ವೇತನವಿರಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ವೆಬ್‌ಸೈಟ್ https://www.upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದ ಮೂಲಕ ಸ್ವೀಕರಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ಭಾವಚಿತ್ರ, ಸಹಿ ಮತ್ತು ಗುರುತಿನ ಪುರಾವೆಗಳನ್ನು ಹೊರತುಪಡಿಸಿ ಯಾವುದೇ ದಾಖಲೆಯನ್ನು ಅಪ್‌ಲೋಡ್ ಮಾಡಬೇಕಾಗಿಲ್ಲ.
    ಅಭ್ಯರ್ಥಿಗಳು ತಮ್ಮ ಸರಿಯಾದ ಮತ್ತು ಸಕ್ರಿಯ ಇ-ಮೇಲ್ ವಿಳಾಸಗಳನ್ನು ಆನ್‌ಲೈನ್ ಅಪ್ಲಿಕೇಶನ್‌ನಲ್ಲಿ ಭರ್ತಿ ಮಾಡಬೇಕು. ಏಕೆಂದರೆ ಎಲ್ಲಾ ಪತ್ರವ್ಯವಹಾರಗಳನ್ನು ಇ-ಮೇಲ್ ಮೂಲಕ ಆಯೋಗದ ಮೂಲಕ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ನಂತರ, ಅಭ್ಯರ್ಥಿಗಳು ಅಂತಿಮವಾಗಿ ಸಲ್ಲಿಸಿದ ಆನ್‌ಲೈನ್ ನೇಮಕಾತಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • HAL Recruitment 2024: ಹೆಚ್‌ಎಎಲ್‌ನಲ್ಲಿ 160 ಡಿಪ್ಲೋಮಾ, ಏರ್‌ಕ್ರಾಫ್ಟ್ ತಂತ್ರಜ್ಞರ ಹುದ್ದೆಗೆ ನೇಮಕಾತಿ; ಮಾಸಿಕ ರೂ.57,000 ವೇತನ

    HAL Recruitment 2024: ಹೆಚ್‌ಎಎಲ್‌ನಲ್ಲಿ 160 ಡಿಪ್ಲೋಮಾ, ಏರ್‌ಕ್ರಾಫ್ಟ್ ತಂತ್ರಜ್ಞರ ಹುದ್ದೆಗೆ ನೇಮಕಾತಿ; ಮಾಸಿಕ ರೂ.57,000 ವೇತನ

    HAL India Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 160 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಮತ್ತು ಏರ್‌ಕ್ರಾಫ್ಟ್ ತಂತ್ರಜ್ಞರ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ಹುಡುಕಲು ಇಚ್ಛಿಸುವವರು ಅರ್ಜಿ ಸಲ್ಲಿಸಲು ಉತ್ತಮ ಅವಕಾಶ. ಆಸಕ್ತ ಅಭ್ಯರ್ಥಿಗಳು 16-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-03-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಮಾರ್ಚ್-2024
    ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 24-ಮಾರ್ಚ್-2024

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆ ಹೆಸರು: ಡಿಪ್ಲೊಮಾ ಮತ್ತು ವಿಮಾನ ತಂತ್ರಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ: ಡಿಪ್ಲೊಮಾ ಟೆಕ್ನಿಷಿಯನ್‌ ಗೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 137 ಹುದ್ದೆಗಳು ಖಾಲಿ ಇದೆ. ಮತ್ತು ವಿಮಾನ ತಂತ್ರಜ್ಞರು ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 23 ಹುದ್ದೆಗಳು ಖಾಲಿ ಇದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23000-57000/- ವೇತನ ದೊರಕಲಿದೆ.

    ವಿದ್ಯಾರ್ಹತೆ: ಡಿಪ್ಲೊಮಾ ತಂತ್ರಜ್ಞರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಸಿಇ/ಇಇಇ/ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮಾ ತೇರ್ಗಡೆ ಹೊಂದಿರಬೇಕು. ಏರ್‌ಕ್ರಾಫ್ಟ್ ಟೆಕ್ನಿಷಿಯನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ ವಯಸ್ಸು 31-ಡಿಸೆಂಬರ್-2023 ರಂತೆ 28 ವರ್ಷಗಳನ್ನು ಮೀರಿರಬಾರದು. OBC-NCL- 03 ವರ್ಷ, SC/ST 05 ವರ್ಷ, PwBD (ಸಾಮಾನ್ಯ) 10 ವರ್ಷ, PwBD (OBC) 13 ವರ್ಷ, PwBD (SC/ST) 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್‌ ಕ್ಲಿಕ್‌ ಮಾಡಿ;