Tag: ಉದ್ಯೋಗ

  • UIDAI Recruitment 2024: ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಉದ್ಯೋಗಾವಕಾಶ-ಮಾಸಿಕ ಲಕ್ಷಕ್ಕಿಂತ ಹೆಚ್ಚು ಸಂಬಳ

    UIDAI Recruitment 2024: ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಉದ್ಯೋಗಾವಕಾಶ-ಮಾಸಿಕ ಲಕ್ಷಕ್ಕಿಂತ ಹೆಚ್ಚು ಸಂಬಳ

    UIDAI Recruitment 2024: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಆಹ್ವಾನಿಸಿದೆ. ಸಹಾಯಕ ಖಾತೆ ಅಧಿಕಾರಿ, ಖಾಸಗಿ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-ಮೇ-2024 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2024

    ಹುದ್ದೆಯ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಬೆಂಗಳೂರು – ಕರ್ನಾಟಕದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ. ಸಹಾಯಕ ಖಾತೆ ಅಧಿಕಾರಿ, ಖಾಸಗಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ ರೂ.47600-151100/- ವೇತನ ಸಿಗಲಿದೆ.

    ಹುದ್ದೆಯ ಹೆಸರು, ಸಂಖ್ಯೆ:
    ಸಹಾಯಕ ಲೆಕ್ಕಾಧಿಕಾರಿ 1 ಹುದ್ದೆ
    ಖಾಸಗಿ ಕಾರ್ಯದರ್ಶಿ 1 ಹುದ್ದೆ
    ಸೆಕ್ಷನ್ ಆಫೀಸರ್ 1 ಹುದ್ದೆ

    ವಿದ್ಯಾರ್ಹತೆ: ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗು ಸಿಎ, ಕಾಸ್ಟ್ ಅಕೌಂಟೆಂಟ್, ಎಂಬಿಎ ಮಾಡಿರಬೇಕು.
    ಖಾಸಗಿ ಕಾರ್ಯದರ್ಶಿ, ಸೆಕ್ಷನ್ ಆಫೀಸರ್ ಹುದ್ದೆಗಳಿಗೆ UIDAI ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಮಾಡಿರಬೇಕು

    ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 15-ಮೇ-2024 ರಂತೆ 56 ವರ್ಷಗಳಿಗಿಂತ ಕಡಿಮೆಯಿರಬೇಕು. ಈ ಮೇಲ್ಕಂಡ ಹುದ್ದೆಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    UIDAI ನೇಮಕಾತಿ (ಸಹಾಯಕ ಖಾತೆ ಅಧಿಕಾರಿ, ಖಾಸಗಿ ಕಾರ್ಯದರ್ಶಿ) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಇವರಿಗೆ (HR), Unique Identification Authority of India, Aadhaar Complex, NTI Layout, Tata Nagar, Kodigehalli, Technology Centre, Bengaluru-560092 15-May-2024 ಮೊದಲು ಕಳುಹಿಸಬೇಕು.

  • KSRLPS recruitment 2024: ವಿವಿಧ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರಕಾರ

    KSRLPS recruitment 2024: ವಿವಿಧ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರಕಾರ

    KSRLPS Recruitment 2024: ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 34 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ-ಚಿಕ್ಕಮಗಳೂರು ಸರ್ಕಾರದಲ್ಲಿ ಈ ಮೇಲೆ ತಿಳಿಸಿದ ಹುದ್ದೆಗೆ ಅಭ್ಯರ್ಥಿಗಳ ಪೋಸ್ಟಿಂಗ್‌ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 14-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಹಾಗೂ ಸಂಖ್ಯೆ: ಜಿಲ್ಲಾ ವ್ಯವಸ್ಥಾಪಕರು 2 ಹುದ್ದೆಗಳು, ಕಛೇರಿ ಸಹಾಯಕ 1 ಹುದ್ದೆಗಳು, ಬ್ಲಾಕ್ ಮ್ಯಾನೇಜರ್ 20 ಹುದ್ದೆಗಳು, ಕ್ಲಸ್ಟರ್ ಮೇಲ್ವಿಚಾರಕರು 8 ಹುದ್ದೆಗಳು, DEO/MIS ಸಂಯೋಜಕರು 3 ಹುದ್ದೆಗಳು. ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆಯ ವಿವರಗಳು: ಜಿಲ್ಲಾ ವ್ಯವಸ್ಥಾಪಕ ಬಿ.ಎಸ್ಸಿ, ಎಂಎಸ್ಸಿ ಮಾಡಿರಬೇಕು. ಕಚೇರಿ ಸಹಾಯಕ ಪದವಿ ಮಾಡಿರಬೇಕು. ಬ್ಲಾಕ್ ಮ್ಯಾನೇಜರ್ B.Sc, M.Sc, ಮಾಸ್ಟರ್ಸ್‌ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು. ಕ್ಲಸ್ಟರ್ ಮೇಲ್ವಿಚಾರಕರು B.Sc, ಪದವಿ, M.Sc, ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು. DEO/MIS ಸಂಯೋಜಕ ಪದವಿ, ಸ್ನಾತಕೋತ್ತರ ಪದವಿಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳು KSRLPS ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ವಯೋಮಿತಿ ಸಡಿಲಿಕೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ksrlps.karnataka.gov.in ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು.

  • IB Jobs: ಗುಪ್ತಚರ ಇಲಾಖೆಯಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈ ಕೂಡಲೇ ಅಪ್ಲೈ ಮಾಡಿ

    IB Jobs: ಗುಪ್ತಚರ ಇಲಾಖೆಯಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈ ಕೂಡಲೇ ಅಪ್ಲೈ ಮಾಡಿ

    Intelleigence Bureau Recruitment 2024: ಇಂಟೆಲಿಜೆನ್ಸ್ ಬ್ಯೂರೋ ದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 660 ಹುದ್ದೆಗಳು ಖಾಲಿ ಇದೆ. ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-I, ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಹುದ್ದೆಯ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ 12-ಮೇ-2024 ರಂದು ಅಥವಾ ಮೊದಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2024

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;

    1. ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-I/ಕಾರ್ಯನಿರ್ವಾಹಕ- 80 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಗ್ರಿ ಪಾಸಾಗಿರಬೇಕು. ಮಾಸಿಕ ವೇತನ Rs.47600-151100 ಇರಲಿದೆ.
    2. ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಕಾರ್ಯನಿರ್ವಾಹಕ 136 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಾಸಾಗಿರಬೇಕು. ಮಾಸಿಕ ವೇತನ Rs.44900-142400/- ಇರಲಿದೆ.
    3. ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ಎಕ್ಸಿಕ್ಯೂಟಿವ್ 120 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಮಾಸಿಕ ವೇತನ Rs.29200-92300/- ಇರಲಿದೆ.
    4. ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಎಕ್ಸಿಕ್ಯೂಟಿವ್ 170 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಮಾಸಿಕ ವೇತನ Rs.25500-81100/- ಸಿಗಲಿದೆ
    5. ಭದ್ರತಾ ಸಹಾಯಕ/ಕಾರ್ಯನಿರ್ವಾಹಕ 100 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಮಾಸಿಕ ವೇತನ Rs.21700-69100/- ಇರಲಿದೆ.
    6. ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಟೆಕ್ 8 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಡಿಪ್ಲೋಮಾ ಮಾಡಿರಬೇಕು. Rs.25500-81100/- ಮಾಸಿಕ ವೇತನ ಸಿಗಲಿದೆ.
    7. ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಸಿವಿಲ್ ವರ್ಕ್ಸ್ 3 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್‌ ಪಾಸಾಗಿರಬೇಕು. Rs.44900-142400/- ಮಾಸಿಕ ವೇತನ ಲಭಿಸಲಿದೆ.
    8. ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I (ಮೋಟಾರ್ ಟ್ರಾನ್ಸ್‌ಪೋರ್ಟ್) 22 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್‌ ಲೈಸೆನ್ಸ್‌ ಹೊಂದಿರಬೇಕು. Rs.29200-92300/- ಮಾಸಿಕ ವೇತನ ಸಿಗಲಿದೆ.
    9. ಹಲ್ವಾಯಿ ಮತ್ತು ಅಡುಗೆ 10 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ 10th, ಡಿಪ್ಲೋಮಾ ಮಾಡಿದವರು ಅರ್ಜಿ ಸಲ್ಲಿಸಬಹುದು. Rs.21700-69100/- ಮಾಸಿಕ ವೇತನ ಲಭ್ಯ.
    10. ಉಸ್ತುವಾರಿ 5 ಹುದ್ದೆಗಳು ಖಾಲಿ ಇದೆ. ಸಂಸ್ಥೆಯ ನಿಯಮ ಪ್ರಕಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. Rs.29200-92300/- ಮಾಸಿಕ ವೇತನ ಸಿಗಲಿದೆ.
    11. ವೈಯಕ್ತಿಕ ಸಹಾಯಕ 5 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ದ್ವಿತೀಯ ಪಿಯುಸಿ ಪಾಸ್‌ ಮಾಡಿರಬೇಕು. Rs.44900-142400/- ಮಾಸಿಕ ವೇತನ ಲಭ್ಯ.
    12. ಪ್ರಿಂಟಿಂಗ್ ಪ್ರೆಸ್ ಆಪರೇಟರ್ 1 ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಸಂಸ್ಥೆಯ ನಿಯಮ ಪ್ರಕಾರ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಹೊಂದಿರಬೇಕು. Rs.19900-63200/- ಮಾಸಿಕ ವೇತನ ಸಿಗಲಿದೆ.
      ಒಟ್ಟು 660 ಹುದ್ದೆಗಳು ಖಾಲಿ ಇದೆ.

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Joint Deputy Director/G-3, Intelligence Bureau, Ministry of Home Affairs, 35 S P Marg, Bapu Dham, New Delhi-110021 ಗೆ 12-ಮೇ,2024 ರೊಳಗೆ ತಲುಪಿಸಬೇಕು.

  • UPSC EPFO ESIC Recruitment 2024: 2253 ಕೇಂದ್ರ ಸರಕಾರಿ ಹುದ್ದೆಗಳು ಖಾಲಿ ಇದೆ, ಈ ಕೂಡಲೇ ಅರ್ಜಿ ಸಲ್ಲಿಸಿ

    UPSC EPFO ESIC Recruitment 2024: 2253 ಕೇಂದ್ರ ಸರಕಾರಿ ಹುದ್ದೆಗಳು ಖಾಲಿ ಇದೆ, ಈ ಕೂಡಲೇ ಅರ್ಜಿ ಸಲ್ಲಿಸಿ

    UPSC Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 2253 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರ್ಸನಲ್ ಅಸಿಸ್ಟೆಂಟ್, ನರ್ಸಿಂಗ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 27-Mar-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 07-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024
    ಅರ್ಜಿ ನಮೂನೆಗಾಗಿ ಸಂಪಾದನೆ/ತಿದ್ದುಪಡಿ ಸೌಲಭ್ಯದ ದಿನಾಂಕ: 28ನೇ ಮಾರ್ಚ್ 2024 ರಿಂದ 03ನೇ ಏಪ್ರಿಲ್ 2024

    ಹುದ್ದೆಗಳ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಮತ್ತು ಸಂಖ್ಯೆ:
    ನರ್ಸಿಂಗ್ ಅಧಿಕಾರಿ ಹದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 1930 ಹುದ್ದೆಗಳು ಖಾಲಿ ಇದೆ.
    ವೈಯಕ್ತಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 323 ಹುದ್ದೆಗಳು ಖಾಲಿ ಇದೆ.

    ಶೈಕ್ಷಣಿಕ ಅರ್ಹತೆ: ನರ್ಸಿಂಗ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಎಸ್ಸಿ ಮಾಡಿರಬೇಕು. ವೈಯಕ್ತಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಮಾಡಿರಬೇಕು.

    ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು. OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD (UR) ಅಭ್ಯರ್ಥಿಗಳಿಗೆ 10 ವರ್ಷ, PwBD (OBC) ಅಭ್ಯರ್ಥಿಗಳಿಗೆ 10 ವರ್ಷ, PwBD (SC/ST) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ರೂ.25 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
    ನರ್ಸಿಂಗ್‌ ಆಫೀಸರ್‌ ನೋಟಿಫಿಕೇಶನ್‌ ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ
    ಪರ್ಸನಲ್‌ ಅಸಿಸ್ಟೆಂಟ್‌ ನೋಟಿಫಿಕೇಶನ್‌ ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ

  • SSC Phase XII 2024: ಎಸ್‌ಎಸ್‌ಸಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ, 2049 ಪೋಸ್ಟ್‌ಗಳಿಗೆ ಈ ದಿನದವರೆಗೆ ನೋಂದಾಯಿಸಿ

    SSC Phase XII 2024: ಎಸ್‌ಎಸ್‌ಸಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ, 2049 ಪೋಸ್ಟ್‌ಗಳಿಗೆ ಈ ದಿನದವರೆಗೆ ನೋಂದಾಯಿಸಿ

    SSC Recruitment 2024: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ಅಧಿಕೃತ ಅಧಿಸೂಚನೆಯ ಮೂಲಕ ಹಂತ-XII ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 2049 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 18-ಮಾರ್ಚ್-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು 26 ಮಾರ್ಚ್ 2024 ಅರ್ಜಿ ವರೆಗೆ ವಿಸ್ತರಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26ನೇ ಮಾರ್ಚ್ 2024 ರವರೆಗೆ ವಿಸ್ತರಿಸಲಾಗಿದೆ.
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 27, 2024 ರವರೆಗೆ ವಿಸ್ತರಿಸಲಾಗಿದೆ.
    ಆನ್‌ಲೈನ್ ಪಾವತಿ ಸೇರಿದಂತೆ ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ ದಿನಾಂಕಗಳು: 30 ಮಾರ್ಚ್ 2024 ರಿಂದ 01 ಏಪ್ರಿಲ್ 2024
    ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳು: 06 ರಿಂದ 08 ಮೇ 2024

    ಹುದ್ದೆಗಳ ವಿವರ
    ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?
    ಮಲ್ಟಿಟಾಸ್ಕಿಂಗ್‌ ಸ್ಟಾಫ್‌, ರಿಹ್ಯಾಬಿಲಿಟೇಶನ್‌ ಕೌನ್ಸೆಲರ್‌, ಕಂಸರ್‌ವೇಶನ್‌ ಅಸಿಸ್ಟಂಟ್‌, ಟೆಕ್ನಿಕಲ್‌ ಅಸಿಸ್ಟಂಟ್‌, ಟೆಕ್ನಿಕಲ್‌ ಸೂಪರಿಂಟೆಂಡೆಂಟ್‌, ಜೂನಿಯರ್‌ ಸೀಡ್‌ ಅನಾಲಿಸ್ಟ್‌, ಅಕೌಂಟೆಂಟ್‌, ಹೆಡ್‌ ಕ್ಲರ್ಕ್‌, ಸ್ಟಾಫ್‌ ಕಾರ್‌ ಡ್ರೈವರ್‌, ಗರ್ಲ್ಸ್‌ ಕೆಡೆಟ್‌ ಇನ್‌ಸ್ಟ್ರಕ್ಟರ್‌, ಮೆಕ್ಯಾನಿಕಲ್‌ ವಿಭಾಗ ಚಾರ್ಜ್‌ಮನ್‌, ಸೈಂಟಿಫಿಕ್‌ ಅಸಿಸ್ಟೆಂಟ್‌, ರಿಸರ್ಚ್‌ ಇನ್ವೆಸ್ಟಿಗೇಟರ್‌, ಜೂನಿಯರ್‌ ಕಂಪ್ಯೂಟರ್‌ ಅಪರೇಟರ್‌, ಸಬ್‌ ಎಡಿಟರ್‌ (ಹಿಂದಿ), ಸಬ್‌ ಎಡಿಟರ್‌ (ಇಂಗ್ಲೀಷ್‌), ಸೀನಿಯರ್‌ ಸೈಂಟಿಫಿಕ್‌ ಅಸಿಸ್ಟೆಂಟ್‌ (ಬಯೋಲಜಿ), ಇತರೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ಮೇಲೆ ನೀಡಲಾದ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.2000 ರಿಂದ ರೂ.40000 ವರೆಗೆ ವೇತನವಿರುತ್ತದೆ.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಮತ್ತು ಆಫ್‌ಲೈನ್‌ ಚಲನ್‌ ಮೂಲಕ ಪಾವತಿಸಬೇಕು. ಎಸ್‌ಸಿ.ಎಸ್ಟಿ,ಮಹಿಳಾ ಅಭ್ಯರ್ಥಿಗಳು,PwBD ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 42 ವರ್ಷ ವಯಸ್ಸಾಗಿರಬೇಕು.

    ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಡಿ (ಒಬಿಸಿ)ಅಭ್ಯರ್ಥಿಗಳಿಗೆ 13 ವರ್ಷ, ಪಿಡಬ್ಲೂಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌, ದಾಖಲೆಗಳ ಪರಿಶೀಲನೆ ಮೂಲಕ ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ಪರೀಕ್ಷೆಯ ಕೇಂದ್ರಗಳು ಎಲ್ಲೆಲ್ಲಿದೆ?
    ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಕವರಟ್ಟಿ, ಬೆಳಗಾವಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ಅರ್ಜಿ ಸಲ್ಲಿಸುವ ವಿಧಾನ;
    ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು https://ssc.gov.in ಗೆ ಭೇಟಿ ನೀಡಬೇಕು, ನಂತರದ ಪುಟದಲ್ಲಿ ಕಾಣುವ Login or Register ಎಂಬಲ್ಲಿ ಕ್ಲಿಕ್‌ ಮಾಡಬೇಕು. ಈ ಲಿಂಕ್‌ ಕ್ಲಿಕ್‌ ಮಾಡಿದಾಗ ಇನ್ನೊಂದು ಪೇಜ್‌ ಬರುತ್ತದೆ, ಅಲ್ಲಿ ನಿಮ್ಮ ವಿವರಗಳನ್ನು ನೀಡಿ ರಿಜಿಸ್ಟ್ರೇಷನ್‌ ಮಾಡ್ಕೊಳ್ಳಿ. ಆಮೇಲೆ ಇನ್ನೊಮ್ಮೆ ಲಾಗಿನ್‌ ಆಗಿ ಎಲ್ಲಾ ಮಾಹಿತಿ, ದಾಖಲೆ ಸಹಿತ ನೀಡಿ.

  • Jobs: ಜಿಲ್ಲಾ ಕೋರ್ಟ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಟೆನೋಗ್ರಾಫರ್‌, ಟೈಪಿಸ್ಟ್‌, ಗುಮಾಸ್ತ ಹುದ್ದೆ-10th, PU ಪಾಸಾಗಿದ್ರೆ 52ಸಾವಿರ ಸಂಬಳ

    Jobs: ಜಿಲ್ಲಾ ಕೋರ್ಟ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಟೆನೋಗ್ರಾಫರ್‌, ಟೈಪಿಸ್ಟ್‌, ಗುಮಾಸ್ತ ಹುದ್ದೆ-10th, PU ಪಾಸಾಗಿದ್ರೆ 52ಸಾವಿರ ಸಂಬಳ

    Tumkur District Court Recruitment 2024: ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 60 ಹುದ್ದೆಗಳು ಖಾಲಿ ಇದ್ದು, ಸ್ಟೆನೋಗ್ರಾಫರ್, ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ತುಮಕೂರು ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ತುಮಕೂರು – ಕರ್ನಾಟಕ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ-ಗ್ರೇಡ್‌ III, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 12-03-2024
    ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 10-04-2024

    ಹುದ್ದೆ ಹೆಸರು : ಶೀಘ್ರಲಿಪಿಗಾರ-ಗ್ರೇಡ್-‌III, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಹಾಗೂ ಸೇವಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.

    ಹುದ್ದೆಗಳ ವಿವರ:
    1. ಶೀಘ್ರ ಲಿಪಿಗಾರ ಗ್ರೇಡ್‌ III (Stenographer Grade III)
    – ಹುದ್ದೆಗಳ ಸಂಖ್ಯೆ-10 (ಹೊಸ ಹುದ್ದೆ 6, ಬ್ಯಾಕ್‌ಲಾಗ್‌ ಹುದ್ದೆ 4)
    ವೇತನ : ರೂ.27650 -ರೂ.52650 ಶ್ರೇಣಿಯಲ್ಲಿ ವೇತನ ಸಿಗಲಿದೆ.
    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್‌ ಕಮರ್ಷಿಯಲ್‌ ಪ್ರಾಕ್ಟೀಸ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
    ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    2. ಬೆರಳಚ್ಚುಗಾರ ಹುದ್ದೆ (Typist)
    ಹುದ್ದೆಗಳ ಸಂಖ್ಯೆ 05 (ಹೊಸ ಹುದ್ದೆ 4, ಬ್ಯಾಕ್‌ಲಾಗ್‌ ಹುದ್ದೆ 1)
    ವೇತನ: ರೂ.21400-ರೂ.42000 ವೇತನ ಶ್ರೇಣಿ ದೊರಕಲಿದೆ.
    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
    ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    3. ಬೆರಳಚ್ಚು-ನಕಲುಗಾರ ಹುದ್ದೆ (Typist-copyist)
    ಹುದ್ದೆಗಳ ಸಂಖ್ಯೆ -05 ಹುದ್ದೆ (ಹೊಸ ಹುದ್ದೆ 3, ಬ್ಯಾಕ್‌ಲಾಗ್‌ ಹುದ್ದೆಗಳು 2)
    ವೇತನ: ರೂ.21400-ರೂ.42000 ಶ್ರೇಣಿಯಲ್ಲಿ ವೇತನ ಸಿಗಲಿದೆ.
    ವಿದ್ಯಾರ್ಹತೆ:
    ಶೈಕ್ಷಣಿಕ ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
    ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    4. ಸೇವಕ ಹುದ್ದೆ (Peon)
    ಹುದ್ದೆಗಳ ಸಂಖ್ಯೆ-40
    ವೇತನ ಶ್ರೇಣಿ: ರೂ.17000-ರೂ.28950
    ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಬರೆಯಲು ಓದಲು ತಿಳಿದಿರಬೇಕು.
    ಆಯ್ಕೆಯ ವಿಧಾನ: ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 10 ಅಭ್ಯರ್ಥಿಗಳನ್ನು (1:10ರ ಅನುಪಾತದಲ್ಲಿ) ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 10ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ (Grade) ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು, ಪಡೆದ ಅಂಕಗಳು ಮತ್ತು ಶೇಕಡಾವಾರು ನಮೂದುಗಳನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ನಮೂದಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.

    ವಯೋಮಿತಿ: ಮೇಲಿನ ಎಲ್ಲಾ ಹುದ್ದೆಗಳಿಗೆ ಕನಿಷ್ಠ ವಯೋಮಿತಿ 18 ವರ್ಷ
    ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ
    ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ
    ಪ.ಜಾ,ಪ.ಪಂ ಮತ್ತ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
    ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

    ಅರ್ಜಿ ಶುಲ್ಕ:
    ಪ್ರವರ್ಗ-2ಎ,2ಬಿ,3ಎ,3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.200, ಪ.ಜಾ, ಪ.ಪಂ, ಪ್ರವರ್ಗ-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

    ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು https://tumakuru.dcourts.gov.in ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online payment through Net Banking/ Credit Card/ Debit Card/UPI ID/QR Code ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demond Draft, Postal Order, Money Order, Challan ಇತ್ಯಾದಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಅಭ್ಯರ್ಥಿಗಳು ಕೌಶಲ ಪರೀಕ್ಷೆ/ ಸಂದರ್ಶನ/ ದಾಖಲೆ ಪರಿಶೀಲನೆ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:
    ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ
    ಶುಲ್ಕವನ್ನು ಪಾವತಿಸಿದ ರಶೀದಿಯ ಪ್ರತಿ
    ಎಸ್.ಎಸ್.ಎಲ್.ಸಿ/ ತತ್ಸಮಾನ ಅಂಕಪಟ್ಟಿ
    ದ್ವಿತೀಯ ಪಿ.ಯು.ಸಿ/ ತತ್ಸಮಾನ ಅಂಕಪಟ್ಟಿ

    ಅರ್ಜಿ ಸಲ್ಲಿಸುವುದು ಹೇಗೆ?
    ಅರ್ಜಿಗಳನ್ನು ಅಭ್ಯರ್ಥಿಗಳು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‌ಸೈಟ್‌ https://tumakuru.dcourts.gov.in ನಲ್ಲೆ ನೀಡಲಾದ ಲಿಂಕ್‌ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 12/03/2024 ರಿಂದ 10/04/2024 ರ ರಾತ್ರಿ 11.59 ರೊಳಗೆ ಸಲ್ಲಿಸಬೇಕು.