Tag: ಉದ್ಯೋಗ

  • Navodaya Vidyalaya Vacancy 2024: ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

    Navodaya Vidyalaya Vacancy 2024: ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

    NVS Recruitment 2024: 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ನವೋದಯ ವಿದ್ಯಾಲಯ ಸಮಿತಿಯು (NVS) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 1377 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳಲ್ಲಿ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ವೃತ್ತಿಯನ್ನು ತಮ್ಮದಾಗಿಸಿಕೊಳ್ಳಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; ಅತಿ ಶೀಘ್ರದಲ್ಲಿ ಅಪ್ಡೇಟ್‌ ಮಾಡಲಾಗುತ್ತದೆ
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

    ಹುದ್ದೆಯ ವಿವರ ಇಲ್ಲಿದೆ
    ಹುದ್ದೆಯ ಹೆಸರು: ನವೋದಯ ವಿದ್ಯಾಲಯ ಸಮಿತಿ (NVS) ಯಲ್ಲಿ 1377 ಹುದ್ದೆಗಳು ಖಾಲಿ ಇದ್ದು, ಬೋಧಕೇತನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು ಮತ್ತು ಸಂಖ್ಯೆ:
    ಮಹಿಳಾ ಸಿಬ್ಬಂದಿ ನರ್ಸ್ 121, ಸಹಾಯಕ ವಿಭಾಗ ಅಧಿಕಾರಿ (ASO) 5, ಆಡಿಟ್ ಸಹಾಯಕ 12, ಜೂನಿಯರ್ ಅನುವಾದ ಅಧಿಕಾರಿ 4, ಕಾನೂನು ಸಹಾಯಕ 1, ಸ್ಟೆನೋಗ್ರಾಫರ್ 23, ಕಂಪ್ಯೂಟರ್ ಆಪರೇಟರ್ 2, ಅಡುಗೆ ಮೇಲ್ವಿಚಾರಕ 78, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JSA) 381, ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ 128, ಲ್ಯಾಬ್ ಅಟೆಂಡೆಂಟ್ 161, ಮೆಸ್ ಸಹಾಯಕ 442, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) 19 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ:
    ಮಹಿಳಾ ಸ್ಟಾಫ್ ನರ್ಸ್ ಹುದ್ದೆಗೆ ಬಿ.ಎಸ್ಸಿ, ಸಹಾಯಕ ವಿಭಾಗ ಅಧಿಕಾರಿ (ASO) ಹುದ್ದೆಗೆ ಪದವಿ, ಲೆಕ್ಕ ಪರಿಶೋಧನಾ ಸಹಾಯಕ ಹುದ್ದೆಗೆ ಬಿ.ಕಾಂ, ಜೂನಿಯರ್ ಅನುವಾದ ಅಧಿಕಾರಿ ಸ್ನಾತಕೋತ್ತರ ಹುದ್ದೆಗೆ ಪದವಿ, ಕಾನೂನು ಸಹಾಯಕ ಹುದ್ದೆಗೆ LLB, ಸ್ಟೆನೋಗ್ರಾಫರ್ ಹುದ್ದೆಗೆ 12ನೇ ತರಗತಿ, ಕಂಪ್ಯೂಟರ್ ಆಪರೇಟರ್ ಹುದ್ದೆಗೆ BCA, B.Sc, B.E ಅಥವಾ B.Tech, ಅಡುಗೆ ಮೇಲ್ವಿಚಾರಕ ಹುದ್ದೆಗೆ ಪದವಿ, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JSA) ಹುದ್ದೆಗೆ 12th, ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗೆ 10ನೇ, ITI, ಲ್ಯಾಬ್ ಅಟೆಂಡೆಂಟ್‌ ಹುದ್ದೆಗೆ 10ನೇ, 12ನೇ, ಡಿಪ್ಲೊಮಾ, ಮೆಸ್ ಸಹಾಯಕ ಹುದ್ದೆಗೆ, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗೆ 10th ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ:
    ಮಹಿಳಾ ಸಿಬ್ಬಂದಿ ನರ್ಸ್ ಹುದ್ದೆಗೆ ಗರಿಷ್ಠ 35 ವರ್ಷ, ಸಹಾಯಕ ವಿಭಾಗ ಅಧಿಕಾರಿ (ASO) ಹುದ್ದೆಗೆ ಕನಿಷ್ಠ 23 ವರ್ಷ ಗರಿಷ್ಠ 33 ವರ್ಷ, ಆಡಿಟ್ ಸಹಾಯಕ ಹುದ್ದೆಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ, ಜೂನಿಯರ್ ಅನುವಾದ ಅಧಿಕಾರಿ ಹುದ್ದೆಗೆ ಗರಿಷ್ಠ 32 ವರ್ಷ, ಕಾನೂನು ಸಹಾಯಕ ಕನಿಷ್ಠ23 ವರ್ಷ ಗರಿಷ್ಠ 35 ವರ್ಷ, ಸ್ಟೆನೋಗ್ರಾಫರ್ ಹುದ್ದೆಗೆ ಕನಿಷ್ಠ 18 ವರ್ಷ 27 ವರ್ಷ, ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ, ಅಡುಗೆ ಮೇಲ್ವಿಚಾರಕರು ಹುದ್ದೆಗೆ 35 ವರ್ಷ, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JSA) ಹುದ್ದೆಗೆ ಕನಿಷ್ಠ 18 ವರ್ಷ 27 ವರ್ಷ, ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ, ಲ್ಯಾಬ್ ಅಟೆಂಡೆಂಟ್, ಮೆಸ್ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿಯು ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಆಗಿರಬೇಕು. OBC (NCL) ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, PwD [OBC (NCL)] ಅಭ್ಯರ್ಥಿಗಳಿಗೆ 13 ವರ್ಷ, PwD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ:
    SC/ST/PwBD ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿ ಮಾಡಬೇಕು.
    ಸಾಮಾನ್ಯ/EWS/OBC (NCL) ಅಭ್ಯರ್ಥಿಗಳು ಮಹಿಳಾ ಸಿಬ್ಬಂದಿ ನರ್ಸ್ ಹುದ್ದೆಗಳಿಗೆ ರೂ.1500/-, ಉಳಿದ ಹುದ್ದೆಗಳಿಗೆ ರೂ.1000/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಮಾತ್ರವೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  • RGUHS Recruitment 2024: ಕೆಇಎ ಇಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

    RGUHS Recruitment 2024: ಕೆಇಎ ಇಂದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

    RGUHS Recruitment 2024: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 44 ಹುದ್ದೆಗಳು ಖಾಲಿ ಇದ್ದು, ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದೆ. RGUHS ಅಧಿಕೃತ ಅಧಿಸೂಚನೆಯ ಮೂಲಕ ಮಾರ್ಚ್ 2024 ರ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು 25-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-03-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2024
    ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 26-04-2024

    ಹುದ್ದೆಗಳ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಮತ್ತು ಸಂಖ್ಯೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ದಲ್ಲಿ 44 ಹುದ್ದೆಗಳು ಖಾಲಿ ಇದ್ದು, ಕಿರಿಯ ಸಹಾಯಕ, ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಪೋಸ್ಟ್ ಹೆಸರು:
    ಜೂನಿಯರ್ ಪ್ರೋಗ್ರಾಮರ್ (ಗ್ರೂಪ್‌-ಬಿ) 5, ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌-ಬಿ) 1, ಸಹಾಯಕ ಗ್ರಂಥಪಾಲಕ (ಗ್ರೂಪ್‌-C) 1, ಸಹಾಯಕ (ಗ್ರೂಪ್‌-C) 12, ಕಿರಿಯ ಸಹಾಯಕ (ಗ್ರೂಪ್‌-C) 25 ಹುದ್ದೆಗಳು ಖಾಲಿ ಇದೆ.

    ವಿದ್ಯಾರ್ಹತೆ: ಜೂನಿಯರ್ ಪ್ರೋಗ್ರಾಮರ್ (ಗ್ರೂಪ್‌-ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿ, MCA ಮಾಡಿರಬೇಕು.
    ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌ -ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್‌ನಲ್ಲಿ ಎಂಜಿನಿಯರಿಂಗ್ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
    ಸಹಾಯಕ ಗ್ರಂಥಪಾಲಕ (ಗ್ರೂಪ್‌-C) ಹುದ್ದೆಗೆ ಅರ್ಜಿ ಸಲ್ಲಿಸುವವರು ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
    ಸಹಾಯಕ (ಗ್ರೂಪ್‌-ಸಿ) ಹುದ್ದೆಗೆ ಪದವಿ ಮಾಡಿರಬೇಕು.
    ಜೂನಿಯರ್ ಅಸಿಸ್ಟೆಂಟ್ (ಗ್ರೂಪ್-ಸಿ) ಹುದ್ದೆಗೆ ಪಿಯುಸಿ‌ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. SC/ST/Cat-I ಅಭ್ಯರ್ಥಿಗಳಿಗೆ 05 ವರ್ಷ, Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/PWD ಅಭ್ಯರ್ಥಿಗಳು ರೂ.500/-, ಸಾಮಾನ್ಯ/OBC ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಜೂನಿಯರ್ ಪ್ರೋಗ್ರಾಮರ್ (Grop-ಬಿ), ಸಹಾಯಕ ಇಂಜಿನಿಯರ್ (ಸಿವಿಲ್) (Group-ಬಿ) ಹುದ್ದೆಗೆ ರೂ.43100-83900/- ವೇತನ ನಿಗದಿಪಡಿಸಲಾಗಿದೆ. ಸಹಾಯಕ ಗ್ರಂಥಪಾಲಕ (Group-C) ಹುದ್ದೆಗೆ ರೂ.30350-58250/- ವೇತನ, ಸಹಾಯಕ (Group-C) ರೂ.37900-70850/- ವೇತನ, ಕಿರಿಯ ಸಹಾಯಕ (Group-C) ರೂ.21400-42000/- ವೇತನ ಸಿಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • HGML Recruiment 2024: ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ; ಮಾಸಿಕ ರೂ.48ಸಾವಿರ ಸಂಬಳ

    HGML Recruiment 2024: ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ; ಮಾಸಿಕ ರೂ.48ಸಾವಿರ ಸಂಬಳ

    HGML Recruiment 2024: ಹಟ್ಟಿ ಗೋಲ್ಡ್‌ ಮೈನ್ಸ್‌ ಕಂಪನಿ ಲಿ.,(Hutti Gold Mines Company Limited) ನಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 168 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ HGML ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸಹಾಯಕ ಫೋರ್‌ಮನ್, ITI ಫಿಟ್ಟರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ರಾಯಚೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 03-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-03-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-05-2024

    ಹುದ್ದೆಯ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (HGML) ನಲ್ಲಿ ಒಟ್ಟು 168 ಹುದ್ದೆಗಳು ಖಾಲಿ ಇದ್ದು, ಸಹಾಯಕ ಫೋರ್‌ಮನ್‌, ಐಟಿಐ ಫಿಟ್ಟರ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.20920-48020/- ವೇತನ ಸಿಗಲಿದೆ

    HGML ಹುದ್ದೆಯ ಕಂಪ್ಲೀಟ್‌ ವಿವರ ಇಲ್ಲಿದೆ.
    ಸಹಾಯಕ ಫೋರ್‌ಮನ್ (ಗಣಿ) 16 ಹುದ್ದೆಗಳು, ಸಹಾಯಕ ಫೋರ್‌ಮ್ಯಾನ್ (ಲೋಹಶಾಸ್ತ್ರ) 7 ಹುದ್ದೆಗಳು, ಲ್ಯಾಬ್ ಅಸಿಸ್ಟೆಂಟ್ 1 ಹುದ್ದೆ, ಸಹಾಯಕ ಫೋರ್‌ಮ್ಯಾನ್ (ಭೂವಿಜ್ಞಾನ) 3 ಹುದ್ದೆಗಳು, ಸಹಾಯಕ ಫೋರ್‌ಮನ್ (ಡೈಮಂಡ್ ಡ್ರಿಲ್ಲಿಂಗ್/ಅಂಡರ್‌ಗ್ರೌಂಡ್) 2 ಹುದ್ದೆಗಳು, ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) 19 ಹುದ್ದೆಗಳು, ITI ಫಿಟ್ಟರ್ (ಗಣಿಗಾರಿಕೆ) 56 ಹುದ್ದೆಗಳು, ITI ಫಿಟ್ಟರ್ (ಲೋಹ) 26 ಹುದ್ದೆಗಳು, ITI ಎಲೆಕ್ಟ್ರಿಕಲ್ 4 ಹುದ್ದೆಗಳು, ಸಹಾಯಕ ಫೋರ್‌ಮನ್ (ಸಿವಿಲ್) 1 ಹುದ್ದೆ, ಸಹಾಯಕ ಫೋರ್‌ಮ್ಯಾನ್ (ಎಲೆಕ್ಟ್ರಿಕಲ್) 1 ಹುದ್ದೆ, ಭದ್ರತಾ ನಿರೀಕ್ಷಕ 6 ಹುದ್ದೆಗಳು, ITI ಫಿಟ್ಟರ್ (ಸಮೀಕ್ಷೆ) 2 ಹುದ್ದೆಗಳು,
    ಭದ್ರತಾ ಸಿಬ್ಬಂದಿ 24 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಶೈಕ್ಷಣಿಕ ಅರ್ಹತೆ: ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿಯು 35 ವರ್ಷ ಮೀರಿರಬಾರದು. CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 03 ವರ್ಷ, SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: SC/ST/Cat-I/Ex-Servicemen/PWD ಅಭ್ಯರ್ಥಿಗಳಿಗೆ ರೂ.100/-, CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.300/-, ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ವಿಧಿಸಲಾಗಿದೆ. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಸಹಾಯಕ ಫೋರ್‌ಮನ್ (ಗಣಿ), ಸಹಾಯಕ ಫೋರ್‌ಮನ್ (ಲೋಹಶಾಸ್ತ್ರ), ಲ್ಯಾಬ್ ಸಹಾಯಕ, ಸಹಾಯಕ ಫೋರ್‌ಮ್ಯಾನ್ (ಭೂವಿಜ್ಞಾನ), ಸಹಾಯಕ ಫೋರ್‌ಮನ್ (ಡೈಮಂಡ್ ಡ್ರಿಲ್ಲಿಂಗ್/ಅಂಡರ್‌ಗ್ರೌಂಡ್), ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) ಹುದ್ದೆಗಳಿಗೆ ಮಾಸಿಕ ರೂ. 25000-48020/- ವೇತನ ಸಿಗಲಿದೆ.
    ITI ಫಿಟ್ಟರ್ (ಗಣಿಗಾರಿಕೆ), ITI ಫಿಟ್ಟರ್ (ಲೋಹ), ಐಟಿಐ ಎಲೆಕ್ಟ್ರಿಕಲ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ರೂ.20920-42660/- ವೇತನ ಸಿಗಲಿದೆ.
    ಸಹಾಯಕ ಫೋರ್‌ಮನ್ (ಸಿವಿಲ್), ಸಹಾಯಕ ಫೋರ್‌ಮ್ಯಾನ್ (ಎಲೆಕ್ಟ್ರಿಕಲ್), ಭದ್ರತಾ ನಿರೀಕ್ಷಕ ಹುದ್ದೆಗೆ ರೂ.25000-48020/- ಮಾಸಿಕ ವೇತನವಿರಲಿದೆ.
    ITI ಫಿಟ್ಟರ್ (ಸರ್ವೆ), ಭದ್ರತಾ ಸಿಬ್ಬಂದಿ ರೂ.20920-42660/- ಮಾಸಿಕ ವೇತನವಿರಲಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ. non local application ಈ ಲಿಂಕ್‌ ಕ್ಲಿಕ್‌ ಮಾಡಿ

  • SEBI Recruitment 2024: ಸೆಬಿ ಇಂದು ಉದ್ಯೋಗ ಅಧಿಸೂಚನೆ; ಹೆಚ್ಚಿನ ಮಾಹಿತಿ ಇಲ್ಲಿದೆ

    SEBI Recruitment 2024: ಸೆಬಿ ಇಂದು ಉದ್ಯೋಗ ಅಧಿಸೂಚನೆ; ಹೆಚ್ಚಿನ ಮಾಹಿತಿ ಇಲ್ಲಿದೆ

    SEBI Recruitment 2024: ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 97 ಹುದ್ದೆಗಳು ಖಾಲಿ ಇದ್ದು, ಆಫೀಸರ್ ಗ್ರೇಡ್ ಎ (ಸಹಾಯಕ ಮ್ಯಾನೇಜರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ

    ಪ್ರಮುಖ ದಿನಾಂಕಗಳು
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: coming soon

    ಹುದ್ದೆಯ ವಿವರ ಇಲ್ಲಿದೆ
    ಹುದ್ದೆ ಹೆಸರು ಮತ್ತು ಸಂಖ್ಯೆ: ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಒಟ್ಟು 97 ಹುದ್ದೆಗಳಿದ್ದು, ಆಫೀಸರ್‌ ಗ್ರೇಡ್‌ ಎ (ಸಹಾಯಕ ವ್ಯವಸ್ಥಾಪಕ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44500-89150/- ವೇತನವಿರಲಿದೆ.

    ಹುದ್ದೆಯ ವಿವರ:
    ಸಾಮಾನ್ಯ (General) 62 ಹುದ್ದೆಗಳು
    ಕಾನೂನು 5 ಹುದ್ದೆ
    ಮಾಹಿತಿ ತಂತ್ರಜ್ಞಾನ 24 ಹುದ್ದೆಗಳು
    ಇಂಜಿನಿಯರಿಂಗ್ (ಎಲೆಕ್ಟ್ರಿಕಲ್) 2 ಹುದ್ದೆಗಳು
    ಸಂಶೋಧನೆ 2 ಹುದ್ದೆಗಳು
    ಅಧಿಕೃತ ಭಾಷೆ 2 ಹುದ್ದೆಗಳು
    ಒಟ್ಟು 97 ಹುದ್ದೆಗಳು

    ವಿದ್ಯಾರ್ಹತೆ:
    ಸಾಮಾನ್ಯ (General) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು/ಎಂಜಿನಿಯರಿಂಗ್‌ನಲ್ಲಿ ಪದವಿ, LLB, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
    ಕಾನೂನು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿ, LLB ತೇರ್ಗಡೆ ಹೊಂದಿರಬೇಕು.
    ಮಾಹಿತಿ ತಂತ್ರಜ್ಞಾನ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರಬೇಕು.
    ಎಂಜಿನಿಯರಿಂಗ್ (ಎಲೆಕ್ಟ್ರಿಕಲ್) ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರಬೇಕು.
    ಸಂಶೋಧನೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭರ್ಥಿಗಳು ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.
    ಅಧಿಕೃತ ಭಾಷೆ (Official Langugage) ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

    ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.

    ಅರ್ಜಿ ಶುಲ್ಕ:
    SC/ST/PwBD ಅಭ್ಯರ್ಥಿಗಳಿಗೆ ರೂ.100/-, UR/OBC/EWS ಅಭ್ಯರ್ಥಿಗಳಿಗೆ ರೂ.1000/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • KUWSDB Jobs 2024: ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಹುದ್ದೆಗಳ ಅರ್ಜಿಗೆ ಅವಧಿ ವಿಸ್ತರಣೆ; ಎಇ, ಗ್ರೂಪ್‌ ಸಿ ಹುದ್ದೆಗಳ ನೇಮಕ

    KUWSDB Jobs 2024: ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಹುದ್ದೆಗಳ ಅರ್ಜಿಗೆ ಅವಧಿ ವಿಸ್ತರಣೆ; ಎಇ, ಗ್ರೂಪ್‌ ಸಿ ಹುದ್ದೆಗಳ ನೇಮಕ

    KUWSDB Recruitment 2024: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್‌) ಹಾಗೂ 14 ‘ಸಿʼ ಗ್ರೂಪ್‌ ವೃಂದದ ಹುದ್ದೆಗಳಿಗೆ ದಿನಾಂಕ 10-03-2024 ರವರೆಗೆ ಅರ್ಜಿಗೆ ಅವಕಾಶ ನೀಡಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕೋರಿದ್ದರಿಂದ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆಯ ದಿನಾಂಕ: 11-03-2024 ರಿಂದ 21-03-2024
    ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 22-03-2024

    ಹುದ್ದೆಗಳ ವಿವರ:
    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉದ್ಯೋಗ ಇಲಾಖೆಯಿಂದ
    ಸಹಾಯಕ ಇಂಜಿನಿಯರ್‌ (ಸಿವಿಲ್‌) : 50, ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ ಶ್ರೇಣಿ:
    ಸಹಾಯಕ ಇಂಜಿನಿಯರ್‌ (ಸಿವಿಲ್‌: ರೂ.43,100-ರೂ.83,900
    ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): ರೂ.27,650-ರೂ.52,650

    ಶೈಕ್ಷಣಿಕ ಅರ್ಹತೆ; ಸಹಾಯಕ ಇಂಜಿನಿಯರ್‌ (ಸಿವಿಲ್)‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್‌ ಇಂಜಿನಿಯರಿಂಗ್‌ ಪದವಿಯನ್ನು ಸಿವಿಲ್‌ ವಿಭಾಗದಲ್ಲಿ ಪಡೆದಿರಬೇಕು
    ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು, ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ -2ಎ/2ಬಿ/3ಎ/3ಬಿ) ರೂ.750
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

    ಅರ್ಜಿ ಸಲ್ಲಿಸುವ ವಿಧಾನ; ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್‌ ಮುಖಾಂತರ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯ ಮುಖಾಂತರ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • Legislative Assembly Recruitment: ವಿಧಾನಸಭೆ ಸಚಿವಾಲಯದಲ್ಲಿ ವರದಿಗಾರರ ಹುದ್ದೆಗಳು; ನೇರ ನೇಮಕಾತಿ

    Legislative Assembly Recruitment: ವಿಧಾನಸಭೆ ಸಚಿವಾಲಯದಲ್ಲಿ ವರದಿಗಾರರ ಹುದ್ದೆಗಳು; ನೇರ ನೇಮಕಾತಿ

    Legislative Assembly Recruitment: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಕನ್ನಡ ವರದಿಗಾರರು, ಆಂಗ್ಲ ವರದಿಗಾರರು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024

    ಹುದ್ದೆಯ ಹೆಸರು: ವರದಿಗಾರರು
    ಹುದ್ದೆಗಳ ಸಂಖ್ಯೆ:
    ಕನ್ನಡ ವರದಿಗಾರರು-02 ಹುದ್ದೆಗಳು
    ಆಂಗ್ಲ ವರದಿಗಾರರು- 01 ಹುದ್ದೆ

    ವೇತನ ಶ್ರೇಣಿ: ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37900-ರೂ.70850 ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಪ್ರಕಾರ ನೇರ ನೇಮಕಾತಿಗೆ ಅರ್ಹತೆಯನ್ನು ಪಡೆದಿರಬೇಕು. ಹಾಗೂ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
    ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
    ಕನ್ನಡ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
    ಆಂಗ್ಲ ವರದಿಗಾರರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಆಂಗ್ಲ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
    ಹಿಂದಿ ಪ್ರವೀಣ ದರ್ಜೆಯ ಶ್ರೀಘ್ರಲಿಪಿಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷ ಆಗಿರಬೇಕು. ಉಳಿದಂತೆ ಗರಿಷ್ಠ ವಯೋಮಿತಿಯನ್ನು ಈ ಕೆಳಗೆ ನೀಡಲಾಗಿದೆ.
    ಸಾಮಾನ್ಯ ವರ್ಗ-35 ವರ್ಷ, ಪ್ರವರ್ಗ IIಎ, IIಬಿ,IIIಎ ಮತ್ತು IIIಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕ ಪಾವತಿಸಬೇಕು. ಇಂಡಿಯನ್‌ ಪೋಸ್ಟಲ್‌ ಆರ್ಡರ್‌ ಅನ್ನು ಈ ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಿರುವಂತೆ ಖರೀದಿಸಿ.
    ನಂತರ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001 ಈ ವಿಳಾಸಕ್ಕೆ ಪಾವತಿ ಮಡಬೇಕು.

    ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವುಳ್ಳ ದಾಖಲೆಗಳನ್ನು ಲಗತ್ತಿಸಿ, ಕೊನೆಯ ದಿನಾಂಕ 30-04-2024 ರಂದು ಸಂಜೆ 4 ಗಂಟೆಯ ಒಳಗಾಗಿ ಖುದ್ದಾಗಿ ಅಥವಾ ಅಂಚೆಯ ಮೂಲಕ ತಲುಪಿಸತಕ್ಕದ್ದು.

    ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ-5074, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001