Tag: ಎಂಪ್ಲಾಯ್‌ಮೆಂಟ್‌ ನ್ಯೂಸ್‌

  • KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಫ್‌ಡಿಎ, ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಫ್‌ಡಿಎ, ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    KUWSDB: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇದೀಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್‌) ಹಾಗೂ 14 ‘ಸಿʼ ಗ್ರೂಪ್‌ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಕುರಿತು ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2024
    ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 14-03-2024

    ಹುದ್ದೆಗಳ ವಿವರ:
    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉದ್ಯೋಗ ಇಲಾಖೆಯಿಂದ
    ಸಹಾಯಕ ಇಂಜಿನಿಯರ್‌ (ಸಿವಿಲ್‌) : 50, ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ ಶ್ರೇಣಿ:
    ಸಹಾಯಕ ಇಂಜಿನಿಯರ್‌ (ಸಿವಿಲ್‌: ರೂ.43,100-ರೂ.83,900
    ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): ರೂ.27,650-ರೂ.52,650

    ಶೈಕ್ಷಣಿಕ ಅರ್ಹತೆ; ಸಹಾಯಕ ಇಂಜಿನಿಯರ್‌ (ಸಿವಿಲ್)‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್‌ ಇಂಜಿನಿಯರಿಂಗ್‌ ಪದವಿಯನ್ನು ಸಿವಿಲ್‌ ವಿಭಾಗದಲ್ಲಿ ಪಡೆದಿರಬೇಕು
    ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು, ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ -2ಎ/2ಬಿ/3ಎ/3ಬಿ) ರೂ.750
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

    ಅರ್ಜಿ ಸಲ್ಲಿಸುವ ವಿಧಾನ; ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್‌ ಮುಖಾಂತರ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯ ಮುಖಾಂತರ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • RRB ALP Recruitment 2024: ಭಾರತೀಯ ರೈಲ್ವೆಯಲ್ಲಿ ಉದ್ಯೋಗ, 5696 ಅಸಿಸ್ಟೆಂಟ್‌ ಲೊಕೊ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

    RRB ALP Recruitment 2024: ಭಾರತೀಯ ರೈಲ್ವೆಯಲ್ಲಿ ಉದ್ಯೋಗ, 5696 ಅಸಿಸ್ಟೆಂಟ್‌ ಲೊಕೊ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

    RRB ALP Recruitment 2024: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು 5696 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಅಸಿಸ್ಟೆಂಟ್‌ ಲೊಕೊ ಪೈಲೆಟ್‌ (Recruitment of Assistant Loco Pilot (ALP) ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಜನವರಿ 20, 2023 ರಿಂದ ಫೆಬ್ರವರಿ 20ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತರು indianrailways.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಭಾರತೀಯ ರೈಲ್ವೆಯಲ್ಲಿರುವ ಸುಮಾರು 5,696 ಅಸಿಸ್ಟೆಂಟ್‌ ಲೊಕೊ ಪೈಲೆಟ್‌ ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿಸಲ್ಲಿಸಲು ಅವಕಾಶವಿದೆ. ಆರ್‌ಆರ್‌ಬಿ ವೆಬ್‌ಸೈಟ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಸೇರಿದಂತೆ ವಿವಿಧ ಆರ್‌ಆರ್‌ಬಿ ವೆಬ್‌ಸೈಟ್‌ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಜನವರಿ 20, 2023
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 20, 2023

    ಆರ್‌ಆರ್‌ಬಿ ಎಎಲ್‌ಪಿ ನೇಮಕ: ವಿದ್ಯಾರ್ಹತೆ ಏನಿರಬೇಕು?

    ಅಸಿಸ್ಟೆಂಟ್‌ ಲೊಕೊ ಪೈಲೆಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ/10ನೇ ತರಗತಿ ಉತ್ತೀರ್ಣರಾಗಿರಬೇಕು. ಅಂಗೀಕೃತ ಸಂಸ್ಥೆಗಳಲ್ಲಿ ಐಟಿಐ ಓದಿರಬೇಕು. (Fitter, Electrician, Instrument Mechanic, Millwright/Maintenance Mechanic, Mechanic (Radio/TV), Electronics Mechanic, Mechanic (Motor Vehicle), Wireman, Tractor Mechanic, Armature and coil winder, Mechnical (Diesal), Heat Engine, Turner, Machinist, Refrigeration and Air Conditioning Mechanic ವಿಷಯಗಳಲ್ಲಿ ಐಟಿಐ ಓದಿರುವವರು ಅರ್ಜಿ ಸಲ್ಲಿಸಬಹುದು)

    ಅಥವಾ
    10ನೇ ತರಗತಿ ಉತ್ತೀರ್ಣರಾಗಿರಬೇಕು. ಮೂರು ವರ್ಷದ ಡಿಪ್ಲೊಮಾವನ್ನು ಮೆಕ್ಯಾನಿಕಲ್‌/ ಎಲೆಕ್ಟ್ರಿಕಲ್‌/ ಎಲೆಕ್ಟ್ರಾನಿಕ್ಸ್‌/ ಆಟೋಮೊಬೈಲ್‌ ಎಂಜಿನಿಯರಿಂಗ್‌ನಲ್ಲಿ ಓದಿರುವವರು ಅರ್ಜಿ ಸಲ್ಲಿಸಬಹುದು.

    ಇದನ್ನು ಓದಿ: DCC Bank Recruitment 2024: ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಜಾಬ್ಸ್‌, ಕಿರಿಯ ಸಹಾಯಕ, ವಾಹನ ಚಾಲಕ, ಅಟೆಂಡರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    RRB ALP Recruitment 2024: ವಯೋಮಿತಿ ಏನು?

    ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

    RRB ALP Recruitment 2024: ಆರ್‌ಆರ್‌ಬಿ ಎಎಲ್‌ಪಿ ಹುದ್ದೆಗಳಿಗೆ ವೇತನ ಎಷ್ಟು?

    ಏಳನೇ ವೇತನ ಆಯೋಗದ ಲೆವೆಲ್‌ 2 ಶಿಫಾರಸ್ಸಿನ ಅನ್ವಯ ವೇತನ ಇರುತ್ತದೆ. ಬೇಸಿಕ್‌ ವೇತನ 19900 ರೂಪಾಯಿ ಇರುತ್ತದೆ. ಡಿಎ, ಎಚ್‌ಆರ್‌ಎ, ನೈಟ್‌ ಶಿಫ್ಟ್‌ ಅಲೊವೆನ್ಸ್‌ ಸೇರಿದಂತೆ ಹಲವು ಸೌಕರ್ಯ ಇರುತ್ತದೆ. ಒಟ್ಟಾರೆ ವೇತನ 25-35 ಸಾವಿರ ರೂ.ವರೆಗೆ ಇರುತ್ತದೆ. ವೇತನ ಶ್ರೇಣಿ: 19900- 63200 ರೂಪಾಯಿ.

    RRB ALP Recruitment 2024: ಅರ್ಜಿ ಶುಲ್ಕ ಎಷ್ಟು?

    ಎಸ್ಸಿ, ಎಸ್ಟಿ, ಎಕ್ಸ್‌ ಸರ್ವೀಸ್‌ ಮ್ಯಾನ್‌, ಮಹಿಳಾ, ಟ್ರಾನ್ಸೆಂಜರ್‌, ಮೈನಾರಿಟಿ, ಇಬಿಸಿ ಅಭ್ಯರ್ಥಿಗಳು 250 ರೂ. ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಮಾತ್ರ ಪಾವತಿಸಲು ಅವಕಾಶವಿದೆ.

    RRB ALP Recruitment 2024: ಕರ್ನಾಟಕದಲ್ಲಿ ಎಷ್ಟು ಹುದ್ದೆಗಳಿವೆ?

    ಅಹಮದಾಬಾದ್‌, ಅಜ್ಮೆರ್‌, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸಪುರ, ಚೆನ್ನೈ, ಗೋರಕ್‌ಪುರ, ಗುವಾಹಟಿ, ಜಮ್ಮು, ಕೊಲ್ಕಾತ್ತಾ ಸೇರಿದಂತೆ ವಿವಿಧ ಆರ್‌ಆರ್‌ಬಿಗಳಿಗೆ ಹುದ್ದೆ ಹಂಚಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ 219+65 ಹುದ್ದೆಗಳಿವೆ.

    ಆರ್‌ಆರ್‌ಬಿ ವಿವರವಾದ ಅಧಿಸೂಚನೆ ಸದ್ಯದಲ್ಲಿಯೇ ಪ್ರಕಟಗೊಳ್ಳಲಿದೆ.

    ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿ ಪಡೆಯಲು indianrailways.gov.in ವೆಬ್‌ಸೈಟ್‌ಗೆ ಭೇಟಿ ನೀಡಿ. ಆರ್‌ಆರ್‌ಬಿ ಮತ್ತು ಇತರೆ ನೇಮಕಾತಿಗಳ ವಿವರ ಪಡೆಯಲು, ಆರ್‌ಆರ್‌ಬಿ ಎಎಲ್‌ಪಿ ನೇಮಕಾತಿ ವಿಧಾನ, ಸಿಲೇಬಸ್‌ ಸೇರಿದಂತೆ ಹೆಚ್ಚಿನ ವಿವರಗಳು ಸದ್ಯದಲ್ಲಿಯೇ sarakarijobs.com ನಲ್ಲಿ ಪ್ರಕಟಗೊಳ್ಳಲಿದೆ.