Tag: ಕೇಂದ್ರ ಸರಕಾರಿ ಉದ್ಯೋಗ

  • AIIMS Delhi Jobs: ಏಮ್ಸ್‌ ದೆಹಲಿಯಲ್ಲಿ 220 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಕರ್ಷಕ ವೇತನ

    AIIMS Delhi Jobs: ಏಮ್ಸ್‌ ದೆಹಲಿಯಲ್ಲಿ 220 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಕರ್ಷಕ ವೇತನ

    AIIMS Recruitment 2024: ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌, ದೆಹಲಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 220 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನಿಯರ್‌ ರೆಸಿಡೆಂಟ್ಸ್‌ ಹುದ್ದೆಗಳು ಖಾಲಿ ಇದ್ದು, ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಈ ಹುದ್ದೆಗಳಿಗೆ ದಿ.15-06-2024 ಕೊನೆಯ ದಿನಾಂಕವಾಗಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-06-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-06-2024

    ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ,
    ನೇಮಕಾತಿ ಸಂಸ್ಥೆ: ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌, ದೆಹಲಿ ಇಲ್ಲಿ ಖಾಲಿ ಇರುವ ಜೂನಿಯರ್‌ ರೆಸಿಡೆಂಟ್ಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರುಗಳ ವಿವರ ಇಲ್ಲಿ ನೀಡಲಾಗಿದೆ;
    ಬ್ಲಡ್‌ ಬ್ಯಾಂಕ್, ಬರ್ನ್ಸ್‌ ಅಂಡ್‌ ಪ್ಲಾಸ್ಟಿಕ್ ಸರ್ಜರಿ, ಬ್ಲಡ್‌ ಬ್ಯಾಂಕ್‌ ಎನ್‌ಸಿಐ, ಕಾರ್ಡಿಯಾಕ್ ರೇಡಿಯೋಲಜಿ, ಕಾರ್ಡಿಯೋಲಜಿ, ಕಂಮ್ಯುನಿಟಿ ಮೆಡಿಷನ್, ಸೈಡರ್, ಸಿಟಿವಿಎಸ್‌, ಡರ್ಮಟೊಲಜಿ ಅಂಡ್ ವೆನೆರಿಯೋಲಜಿ, ಇಹೆಚ್‌ಎಸ್‌, ಎಮರ್ಜೆನ್ಸಿ ಮೆಡಿಷನ್, ಲ್ಯಾಬ್ ಮೆಡಿಷನ್, ನೆಪ್ರೊಲಜಿ, ಇತರೆ ವಿಭಾಗಗಳು.

    ವಿದ್ಯಾರ್ಹತೆ: ಹುದ್ದೆಗಳಿನುಸಾರವಾಗಿ ಅಭ್ಯರ್ಥಿಗಳು ಪದವಿ, ಎಂಬಿಬಿಎಸ್‌, ಬಿಡಿಎಸ್‌ ಮಾಡಿರಬೇಕು. ಹುದ್ದೆಗೆ ತಕ್ಕಂತೆ ನಿಖರವಾದ ವಿದ್ಯಾರ್ಹತೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದ್ದು, ಅಲ್ಲಿ ವಿವರವಾಗಿ ಅಭ್ಯರ್ಥಿಗಳು ಓದಬಹುದು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಪರೀಕ್ಷೆ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಶಾರ್ಟ್‌ಲಿಸ್ಟ್‌ ಆಗಿ ನಂತರ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ಉತ್ತಮ ವೇತನ ದೊರಕಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಮೊದಲಿಗೆ ಇಲ್ಲಿ ನೀಡಲಾದ ವೆಬ್‌ಸೈಟ್‌ ಲಿಂಕ್‌ ಕ್ಲಿಕ್‌ ಮಾಡಿ
    ನಂತರ ನ್ಯೂ ರಿಜಿಸ್ಟ್ರೇಷನ್-ಪ್ರೊಸೀಡ್‌ ಮೇಲೆ ಕ್ಲಿಕ್‌ ಮಾಡಿ
    ಅಲ್ಲಿ ನಿಮ್ಮ ಇಮೇಲ್‌ ವಿಳಾಸ, ಮೊಬೈಲ್‌ ನಂಬರ್‌, ಹೆಸರು ಇತರೆ ವಿಷಯಗಳನ್ನು ಭರ್ತಿ ರಿಜಿಸ್ಟ್ರೇಷನ್‌ ಪಡೆಯಿರಿ
    ನಂತರ ಲಾಗಿನ್‌ ಆಗಿ ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ

  • NCB Recruitment 2024: ಕೇಂದ್ರ ಸರಕಾರಿ ಉದ್ಯೋಗಾವಕಾಶ; ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ ಹುದ್ದೆ; ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ಕೇಂದ್ರ ಸರಕಾರಿ ಉದ್ಯೋಗಾವಕಾಶ; ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ ಹುದ್ದೆ; ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಅರ್ಜಿಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 05 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಕ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದವರಿಗೆ ಭಾರತದಾದ್ಯಂತ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ದಿ.27-Jul-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-07-2024

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;
    ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸೆಕ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.44900-142400/- ವೇತನ ದೊರಕಲಿದೆ.

    ವಿದ್ಯಾರ್ಹತೆ: NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಉಳಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  • RLDA Jobs: ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತೆ, ಸಂಬಳ ವಿವರ ಇಲ್ಲಿದೆ

    RLDA Jobs: ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತೆ, ಸಂಬಳ ವಿವರ ಇಲ್ಲಿದೆ

    RLDA Recruitment 2024: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 04 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಅಲಹಾಬಾದ್ – ಚೆನ್ನೈ – ಪಾಟ್ನಾ – ಬೆಂಗಳೂರು ಇಲ್ಲಿ ಪೋಸ್ಟಿಂಗ್‌ ಆಗಲಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 21-Jun-2024 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 28-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-06-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ (RLDA) ಇಲ್ಲಿ ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್, ಜಂಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಆರ್‌ಎಲ್‌ಡಿಎ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

    ಹುದ್ದೆ ಹೆಸರು ಮತ್ತು ಸಂಖ್ಯೆ:
    ಮುಖ್ಯ ಪ್ರಾಜೆಕ್ಟ್ ಮ್ಯಾನೇಜರ್ 3 ಹುದ್ದೆಗಳು
    ಜಂಟಿ/ಉಪ ಜನರಲ್ ಮ್ಯಾನೇಜರ್ 1 ಹುದ್ದೆಗಳು

    ಶೈಕ್ಷಣಿಕ ಅರ್ಹತೆ: ಜಂಟಿ/ಉಪ ಜನರಲ್ ಮ್ಯಾನೇಜರ್ ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮಾಡಿರುವವರು ಅರ್ಜಿ ಸಲ್ಲಿಸಬಹುದು.
    ಮುಖ್ಯ ಪ್ರಾಜೆಕ್ಟ್‌ ಮ್ಯಾನೇಜರ್‌ ಹುದ್ದೆಗೆ ಆರ್‌ಎಲ್‌ಡಿಎ ನಿಯಮಗಳ ಪ್ರಕಾರ

    ವಯೋಮಿತಿ: ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಾಗೆ ಅಭ್ಯರ್ಥಿಗಳು ಆರ್‌ಎಲ್‌ಡಿಎ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
    ರೈಲು ಭೂಮಿ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅರ್ಜಿದಾರರು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dy ಗೆ ಕಳುಹಿಸಬೇಕಾಗುತ್ತದೆ. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
    ವಿಳಾಸ: Dy. General Manager (HR), Rail Land Development Authority, Unit No.-702-B, 7th Floor, Konnectus Tower-II, DMRC Building, Ajmeri Gate, Delhi-110002 ಇಲ್ಲಿಗೆ ಅರ್ಜಿಗಳ ಸಾಫ್ಟ್ ಕಾಪಿಯನ್ನು ಇಮೇಲ್ ಐಡಿಯಲ್ಲಿ ಫಾರ್ವರ್ಡ್ ಮಾಡಬಹುದು: [email protected]

  • CRPF Jobs: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ ಉದ್ಯೋಗ; ನೇರ ಸಂದರ್ಶನ

    CRPF Jobs: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ ಉದ್ಯೋಗ; ನೇರ ಸಂದರ್ಶನ

    CRPF Recruitment 2024: ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಪೋರ್ಸ್‌ ನೇಮಕಾತಿ ಮಾಡಲಿದ್ದು, ಇಲ್ಲಿ 03 ಖಾಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫಿಸಿಯೋಥೆರಪಿಸ್ಟ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ನೇರ ಸಂದರ್ಶನವು ದಿ.17-06-2024 ರಂದು ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು.

    ಹುದ್ದೆಯ ವಿವರ ಇಲ್ಲಿದೆ:
    ಹುದ್ದೆ ಸಂಖ್ಯೆ ಹೆಚ್ಚಿನ ವಿವರ: ಕೇಂದ್ರೀಯ ಮೀಸಲು ಪಡೆಯಲ್ಲಿ 03 ಹುದ್ದೆಗಳು ಖಾಲಿ ಇದ್ದು, ಫಿಸಿಯೋಥೆರಪಿಸ್ಟ್‌ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.55000 ವೇತನವಿರಲಿದೆ.

    ವಿದ್ಯಾರ್ಹತೆ: ಮಾನ್ಯತೆ ಪಡೆದ ಭಾರತೀಯ ಅಥವಾ ವಿದೇಶಿ ವಿಶ್ವವಿದ್ಯಾಲಯದಿಂದ ಭೌತಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

    ವಯೋಮಿತಿ: ಫಿಸಿಯೋಥೆರಪಿಸ್ಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 40 ವರ್ಷ ಮೀರಿರಬಾರದು.

    ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ರೂ.55,000 ಇರುತ್ತದೆ.

    ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ಒಂದು ವರ್ಷದ ಪ್ರೊಬೆಷನರಿ ಪಿರಿಯೇಡ್‌ ಇರುತ್ತದೆ. ಇದನ್ನು ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಎರಡು ವರ್ಷಕ್ಕೆ ವಿಸ್ತರಣೆ ಮಾಡಲಾಗುವುದು.

    ನೇಮಕ ಸ್ಥಳ: ಎಸ್‌ಎಂಸಿ, ಜಿಸಿ ನವದೆಹಲ್ಲಿ ಈ ಹುದ್ದೆಗೆ ಆಯ್ಕೆಯಾದವರನ್ನು ಪೋಸ್ಟಿಂಗ್‌ ಮಾಡಲಾಗುವುದು. ಹಾಗೆನೇ ಜಿಸಿ, ಸೋನೆಪತ್‌, ಜಿಸಿ ಜಲಂಧರ್‌, ಜಿಸಿ ಕತ್ಗೊಡಮ್‌, ಜಿಸಿ ಜಮ್ಶೆಡ್‌ಪುರ, ಜಿಸಿ-1&2 ಅಜ್ಮೀರ್‌, ಜಿಸಿ ಕೇಂದ್ರೀತ ಕೇಂದ್ರ ಕ್ರೀಡಾ ತಂಡ ಹೆಚ್ಚಾಗಿ ಇರುವ ರಂಗಾರೆಡ್ಡಿ ಜಿಲ್ಲೆ, ಚಂಡೀಗಢ, ಹಾಗೂ ಇತರ ಸ್ಥಳಗಳಲ್ಲಿ ಕೆಲಸವಿರುತ್ತದೆ.

    ಅರ್ಜಿ ಸಲ್ಲಿಸಬೇಕಾದ ವಿಳಾಸ; ಅಭ್ಯರ್ಥಿಗಳು ಭರ್ತಿ ಮಾಡಿದ ದಾಖಲೆಗಳ ಜೊತೆ ಈ ಕೆಳಗೆ ನೀಡಿದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಿರಬೇಕು.
    ವಿಳಾಸ ಇಲ್ಲಿದೆ;
    Training Directorate,
    East Block No 10,
    Level 7, R K Puram,
    New Delhi, 110066
    ಸಂಪರ್ಕ ಸಂಖ್ಯೆ -011-20867225 ಇಲ್ಲಿ ದಿ.17-06-2024 ರಂದು ನೇರ ಸಂದರ್ಶನವಿರಲಿದೆ.
    ಅಭ್ಯರ್ಥಿಗಳು ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾದ ಲಿಂಕ್‌ ಕ್ಲಿಕ್‌ ಮೂಲಕ ಪಡೆದುಕೊಳ್ಳಬಹುದು.

  • DRDO Careers: ಡಿಆರ್‌ಡಿಒ ದಲ್ಲಿ ಉದ್ಯೋಗ; ಪರೀಕ್ಷೆ ಇಲ್ಲ, ಐಟಿಐ ಪಾಸಾದವರಿಗೆ ಆದ್ಯತೆ

    DRDO Careers: ಡಿಆರ್‌ಡಿಒ ದಲ್ಲಿ ಉದ್ಯೋಗ; ಪರೀಕ್ಷೆ ಇಲ್ಲ, ಐಟಿಐ ಪಾಸಾದವರಿಗೆ ಆದ್ಯತೆ

    DRDO Apprentice Recruitment 2024: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 127 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಂಪ್ಯೂಟರ್‌ ಅಪರೇಟಿಂಗ್‌, ಪ್ರೋಗ್ರಾಮಿಂಗ್‌ ಅಸಿಸ್ಟಂಟ್‌, ಇಲೆಕ್ಟ್ರಿಕಲ್‌, ಫಿಟ್ಟರ್‌, ಪೇಂಟರ್‌, ಇತರೆ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೈದರಾಬಾದ್‌ನಲ್ಲಿ ಪೋಸ್ಟಿಂಗ್‌ ನಡೆಯಲಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ.31, 2024 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2024

    ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ;
    ಉದ್ಯೋಗದ ಸ್ಥಳ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೈದರಾಬಾದ್‌ ನಲ್ಲಿ ಪೋಸ್ಟಿಂಗ್‌ ಇರಲಿದೆ.

    ಉದ್ಯೋಗದ ಅವಧಿ ಮತ್ತು ಸಂಭಾವನೆ: ಒಂದು ವರ್ಷ ತರಬೇತಿ ಇರಲಿದ್ದು, ಅಭ್ಯರ್ಥಿಗಳಿಗೆ ರೂ.8000-9000 ಪ್ರತಿ ತಿಂಗಳು ದೊರೆಯಲಿದೆ.

    ಹುದ್ದೆ ಹೆಸರು ಮತ್ತು ಹುದ್ದೆ ಸಂಖ್ಯೆ;
    ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್: 60 ಹುದ್ದೆಗಳು
    ಫಿಟ್ಟರ್ : 20 ಹುದ್ದೆಗಳು
    ಟರ್ನರ್ : 08 ಹುದ್ದೆಗಳು
    ಮಷಿನಿಸ್ಟ್‌ : 16 ಹುದ್ದೆಗಳು
    ವೆಲ್ಡರ್ : 04 ಹುದ್ದೆಗಳು
    ಇಲೆಕ್ಟ್ರೀಷಿಯನ್ : 12 ಹುದ್ದೆಗಳು
    ಇಲೆಕ್ಟ್ರಾನಿಕ್ಸ್‌ : 04 ಹುದ್ದೆಗಳು
    ಕಾರ್ಪೆಂಟರ್ : 02 ಹುದ್ದೆಗಳು
    ಬುಕ್‌ ಬೈಂಡರ್ : 01 ಹುದ್ದೆ

    ವಿದ್ಯಾರ್ಹತೆ: ಐಟಿಐ ಶಿಕ್ಷಣವನ್ನು ಹುದ್ದೆಯ ವಿಭಾಗಗಳಿಗೆ ಸಂಬಂಧಿಸಿದ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು. ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರವನ್ನು ಪಡೆದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

    AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

    AIATSL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವಿಸಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 145 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜೂನಿಯರ್‌ ಆಫಿಸರ್‌ ಟೆಕ್ನಿಕಲ್‌, ಕಸ್ಟಮರ್‌ ಸರ್ವೀಸ್‌ ಎಕ್ಸಿಕ್ಯೂಟಿವ್‌ ಹೀಗೆ ಹಲವು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ:
    ನೇರ ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ:

    ಹುದ್ದೆಗಳ ವಿವರ ಇಲ್ಲಿದೆ;
    ಜೂನಿಯರ್ ಆಫೀಸರ್ – ಟೆಕ್ನಿಕಲ್ : 02
    ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
    ಜೂನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
    ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 18
    ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 17
    ಹ್ಯಾಂಡಿಮನ್ : 66

    ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಬಿಇ/ಪದವಿ/ಐಟಿಐ (ಎನ್‌ಸಿವಿಟಿ/ಎಸ್‌ಸಿವಿಟಿ)/ಎಸ್‌ಎಸ್‌ಸಿ/ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500, ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
    ಅಭ್ಯರ್ಥಿಗಳು ಡಿಡಿ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ವಿಧಾನ: ಅಭ್ಯರ್ಥಿಗಳು ದಿನಾಂಕ 08-05-2024 ರಿಂದ 10-05-2024 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;
    ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ
    ಜಾತಿ ಮತ್ತು ಆದಾಯ ಪ್ರಮಾಣ ಪತ್ರ
    ಕಾರ್ಯಾನುಭವ ಇರುವ ದಾಖಲೆ, ಹಾಗೂ ಇತರೆ ದಾಖಲು ಅತ್ಯಗತ್ಯ

    ಮೇಲ್ಕಂಡ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗುವ ಸಮಯದಲ್ಲಿ ಅಭ್ಯರ್ಥಿಗಳು ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ತಮ್ಮಲ್ಲಿ ಇಟ್ಟುಕೊಂಡು ಹೋಗಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.