ತುಮಕೂರು ಜಿಲ್ಲೆಯಲ್ಲಿ 358 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ
ತುಮಕೂರು ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆ ( ಮಿನಿ ಅಂಗನವಾಡಿ ಕಾರ್ಯಕರ್ತೆ ಸೇರಿದಂತೆ) ಹಾಗೂ 285 ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 358 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಆನ್ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸಿದ ದಾಖಲಾತಿಗಳನ್ನು…