Tag: Bmrcl recruitment

  • BMRCL : 37 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021

    ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.

    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾದ ಮಾಹಿತಿ ಇಲ್ಲಿದೆ :

    ಹುದ್ದೆಯ ಹೆಸರು : ಸಹಾಯಕ ಭದ್ರತಾ ಅಧಿಕಾರಿ

    ಒಟ್ಟು ಹುದ್ದೆಗಳು : 37

    ಸ್ಥಳ : ಬೆಂಗಳೂರು

    ವಯೋಮಿತಿ : 62 ವರ್ಷ

    ಸಂಬಳ : ಮಾಸಿಕ ರೂ.30,000

    ಆಯ್ಕೆ ಪ್ರಕ್ರಿಯೆ : ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಹತೆ : ಮೆಟ್ರೋ ನಿಲ್ದಾಣಗಳು, ಡಿಪೋಗಳಲ್ಲಿ ಭದ್ರತೆ ಮತ್ತು ಇತರೆ ಸಂಬಂಧಿತ ಕೆಲಸಗಳನ್ನು ನೋಡಿಕೊಳ್ಳಲು ಬಿಎಂಆರ್ ಸಿಎಲ್ ನ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ ಭದ್ರತಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಬೇಕು.

    ಸೆಕ್ಯುರಿಟಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಿವೃತ್ತ ಸಿಬ್ಬಂದಿಯಾಗಿರಬೇಕು.

    ಕರ್ನಾಟಕ ಸರಕಾರದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರಬೇಕು.

    ಸೈನ್ಯ, ವಾಯುಪಡೆ ಮತ್ತು ಸೆಂಟ್ರಲ್ ‌ಪೊಲೀಸ್ ಸಶಸ್ತ್ರ ಪಡೆಗಳಲ್ಲಿ ನಿವೃತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುಬೇದಾರ್ ಆಗಿರಬೇಕು.

    ಬಿಎಂ ಆರ್ ಸಿ ಎಲ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆಫ್ ಲೈನ್/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಲಕೋಟೆಯಲ್ಲಿ ” ಸಹಾಯಕ ಭದ್ರತಾ ಅಧಿಕಾರಿಯ ಹುದ್ದೆಗೆ ಅರ್ಜಿ” ಎಂದು ನಮೂದಿಸಿ ಕಳುಹಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 17/11/2021 ಸಂಜೆ 4 ಗಂಟೆ.

    ವಿಳಾಸ : General Manager ( HR )
    Bangalore Metro Rail Corporation Limited
    ||| rd Floor, BMTC Complex, K.H.Road, Shantinagar, Bangalore – 560027

    ನೋಟಿಫಿಕೇಶನ್

  • BMRCL ನಲ್ಲಿ ವಿವಿಧ ಹುದ್ದೆ

    ಬೆಂಗಳೂರು ಮೆಟ್ರೋ ರೈಲು ನಿಗಮಿತ ( ಬಿಎಂಆರ್ ಸಿಎಲ್) ಗುತ್ತಿಗೆ ಆಧಾರದ ಅಥವಾ ನಿಯೋಜನೆ‌ ಮೇರೆಗೆ‌ ಕೆಳಕಂಡ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ಹುದ್ದೆ : ಉಪ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 02 ಹುದ್ದೆಗಳು
    ಸಹಾಯಕ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 01 ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-10-2021 ಸಂಜೆ 04.00 ಗಂಟೆಯವರೆಗೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಬಹುದು.

    ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ.

  • ನಮ್ಮ ಮೆಟ್ರೋದಲ್ಲಿ ವಿವಿಧ ಉದ್ಯೋಗವಕಾಶಗಳು

    ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ( ಬಿಎಂಆರ್ ಸಿಎಲ್) ನಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

    ಹುದ್ದೆ : ಮ್ಯಾನೇಜರ್ ( ವ್ಯವಸ್ಥಾಪಕರು) ( F &A) -01 ಹುದ್ದೆ
    ಅಸಿಸ್ಟೆಂಟ್ ಮ್ಯಾನೇಜರ್ ( ಸಹಾಯಕ ವ್ಯವಸ್ಥಾಪಕರು) ( ಸ್ಟೋರ್ಸ್) -01 ಹುದ್ದೆ
    ಅಸಿಸ್ಟೆಂಟ್ ಮ್ಯಾನೇಜರ್ ( ಸಹಾಯಕ ವ್ಯವಸ್ಥಾಪಕರು) ( ಹೆಚ್ ಆರ್) – 01 ಹುದ್ದೆ

    ವಯೋಮಿತಿ : ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳಿಗೆ ಕನಿಷ್ಠ 45 ವರ್ಷ, ಅಸಿಸ್ಟೆಂಟ್ ಮ್ಯಾನೇಜರ್ ( ಸ್ಟೋರ್ಸ್ ) 40 ವರ್ಷ, ಅಸಿಸ್ಟೆಂಟ್ ಮ್ಯಾನೇಜರ್ ( ಹೆಚ್ ಆರ್ ) 40 ವರ್ಷ ಮೀರಿರಬಾರದು.

    ವೇತನ : ಮ್ಯಾನೇಜರ್ ( ಎಫ್ ಎ) ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 75,000/- ವೇತನವಿರುತ್ತದೆ. ಅಸಿಸ್ಟೆಂಟ್ ಮ್ಯಾನೇಜರ್ ( ಸ್ಟೋರ್ಸ್ ) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ( ಹೆಚ್ ಆರ್ ) ಹುದ್ದೆಗೆ ರೂ.50,000/- ವೇತನವಿರುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-08-2021 ( ಸಂಜೆ 4 ಗಂಟೆಗೆ)

    ಅರ್ಜಿ ಸಲ್ಲಿಕೆ ಹೇಗೆ ? ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿಯ ಲಕೋಟೆ ಮೇಲೆ Application for the post of( post name) ಎಂದು ಬರೆದಿರಬೇಕು. ಅರ್ಜಿಯನ್ನು ವಿಳಾಸ General Manager ( HR), Bangalore Metro Rail Corporation Limited, 3rd Floor, BMTC Complex, K.H.Road, Shantinagar, Bangalore – 560027 ಕ್ಕೆ ಕಳುಹಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

  • ನಮ್ಮ ಮೆಟ್ರೊದಲ್ಲಿ ಉದ್ಯೋಗವಕಾಶ : ಇಲ್ಲಿದೆ ಹೆಚ್ಚಿನ ವಿವರ

    ನಮ್ಮ ಮೆಟ್ರೊದಲ್ಲಿ ಉದ್ಯೋಗವಕಾಶ : ಇಲ್ಲಿದೆ ಹೆಚ್ಚಿನ ವಿವರ

    ಬಿಎಂಆರ್ ಸಿ ಎಲ್ ( ಬ್ಯಾಂಗಲೋರ್ ಮೆಟ್ರೋ ರೈಲ್ ಕೋರ್ಪರೇಷನ್ ಲಿಮಿಟೆಡ್ ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, 22, ಮಾರ್ಚ್ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ? ಆಫ್ ಲೈನ್ ಮೂಲಕ

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2021

    ಅರ್ಜಿ ಸಲ್ಲಿಕೆ :  ನಮ್ಮ ಮೆಟ್ರೋ
    ನಲ್ಲಿರುವ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

    ನಮ್ಮ ಮೆಟ್ರೋ ದಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇದ್ದು ಚೀಫ್ ಇಂಜಿನಿಯರ್, ಮ್ಯಾನೇಜರ್, ಡಿಜಿಎಂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

    ಹುದ್ದೆಗಳ ವಿವರ : ಚೀಫ್ ಇಂಜಿನಿಯರ್ (ಎಸ್ & ಟಿ)-01 ( ಮುಖ್ಯ ಇಂಜಿನಿಯರ್), ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್(ಇ&ಎಂ)-01( ಮುಖ್ಯ ಎಲೆಕ್ಟ್ರಿಕಲ್ ಇಂಂಜಿನಿಯರ್), ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್ ಮೈನ್ಟೆನೆಸ್)-01, ಡೆಪ್ಯುಟಿ ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್ ಮೈನ್ಟೆನೆಸ್)-01, ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಸ್ & ಟಿ) -01, ಡೆಪ್ಯುಟಿ ಜನರಲ್ ಮ್ಯಾನೇಜರ್ (ಸ್ಟೋರ್)-01

    ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಅಂಗೀಕೃತ ಸಂಸ್ಥೆ/ ಬೋರ್ಡ್ ನಿಂದ ಡಿಗ್ರಿ ಇನ್ ಇಂಜಿನಿಯರಿಂಗ್ ನ್ನು ಹೊಂದಿರಬೇಕು.

    ವಯೋಮಿತಿ : ಚೀಫ್ ಇಂಜಿನಿಯರ್ (ಎಸ್ & ಟಿ) ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್(ಇ&ಎಂ) ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್ ಮೈನ್ಟೆನೆಸ್) ಹುದ್ದೆಗೆ ಅರ್ಜಿ‌ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವಯೋಮಿತಿ ಹೊಂದಿರಬೇಕು.
    ಡೆಪ್ಯುಟಿ ಜನರಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್ ಮೈನ್ಟೆನೆಸ್) , ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಸ್ & ಟಿ) , ಡೆಪ್ಯುಟಿ ಜನರಲ್ ಮ್ಯಾನೇಜರ್ (ಸ್ಟೋರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವಯೋಮಿತಿ ಹೊಂದಿರಬೇಕು.
    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ ಗೆ ಭೇಟಿ ನೀಡಿ‌ ಅರ್ಜಿಯನ್ನು ಡೌನ್‌ಲೋಡ್ ಮಾಡಿ , ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 15-03-2021 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಅಥವಾ ಬೇರೆ ರೀತಿಯಲ್ಲಿ ಸಲ್ಲಿಸಬೇಕು.
    ವಿಳಾಸ : General Manager (HR& taxation), Bangalore Metro Rail Corporation Limited, 3rd Floor, BMTC Complex, KH Road Shantinagara,Bengaluru- 560027

    ಹೆಚ್ವಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆ: ನೇರ ಸಂದರ್ಶನದ ಮೂಲಕ ಆಯ್ಕೆ

    ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆ: ನೇರ ಸಂದರ್ಶನದ ಮೂಲಕ ಆಯ್ಕೆ

    ಬಿಎಂಆರ್ ಸಿ ಎಲ್ (ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್) ನಲ್ಲಿ ಸೆಕ್ಷನ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ವಿವರಗಳು ಈ ಕೆಳಗಿನಂತಿವೆ;

    ಹುದ್ದೆ
    ಅಸಿಸ್ಟೆಂಟ್ ಮ್ಯಾನೇಜರ್-03
    ಅಸಿಸ್ಟೆಂಟ್ ಇಂಜಿನಿಯರ್
    ಸೆಕ್ಷನ್ ಇಂಜಿನಿಯರ್

    ನೇರ ಸಂದರ್ಶನದ ದಿನಾಂಕ : 18 ಫೆಬ್ರವರಿ, 2021

    ವಯೋಮಿತಿ
    ಸೆಕ್ಷನ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ಆಗಿರಬೇಕು.
    ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 40 ವರ್ಷ ವಯೋಮಿತಿ ಆಗಿರಬೇಕು.

    ವಿದ್ಯಾರ್ಹತೆ
    ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಎಂ.ಎಸ್ಸಿ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    ವೇತನ
    ಸೆಕ್ಷನ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 36,000/- ವೇತನವಿರುತ್ತದೆ.
    ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳಿಗೆ 50,000/- ವೇತನ ನಿಗದಿಯಾಗಿದೆ.

    ಅರ್ಜಿ ಶುಲ್ಕ
    ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.

    ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 18, ಫೆಬ್ರವರಿ 2021 ರ ಬೆಳಗ್ಗೆ 10 ಗಂಟೆಗೆ ಬಿಎಂಆರ್ ಸಿ ಎಲ್ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

    ವಿಳಾಸ ಈ ಕೆಳಗಿನಂತಿದೆ:
    BMRCL Head Office, 3rd Floor, BMTC Complex,K.H.Road, Shantinagar,Bengaluru-560027

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ