Tag: central government jobs

  • AIIMS Delhi Jobs: ಏಮ್ಸ್‌ ದೆಹಲಿಯಲ್ಲಿ 220 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಕರ್ಷಕ ವೇತನ

    AIIMS Delhi Jobs: ಏಮ್ಸ್‌ ದೆಹಲಿಯಲ್ಲಿ 220 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಕರ್ಷಕ ವೇತನ

    AIIMS Recruitment 2024: ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌, ದೆಹಲಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಒಟ್ಟು 220 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನಿಯರ್‌ ರೆಸಿಡೆಂಟ್ಸ್‌ ಹುದ್ದೆಗಳು ಖಾಲಿ ಇದ್ದು, ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಈ ಹುದ್ದೆಗಳಿಗೆ ದಿ.15-06-2024 ಕೊನೆಯ ದಿನಾಂಕವಾಗಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-06-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-06-2024

    ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ,
    ನೇಮಕಾತಿ ಸಂಸ್ಥೆ: ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌, ದೆಹಲಿ ಇಲ್ಲಿ ಖಾಲಿ ಇರುವ ಜೂನಿಯರ್‌ ರೆಸಿಡೆಂಟ್ಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರುಗಳ ವಿವರ ಇಲ್ಲಿ ನೀಡಲಾಗಿದೆ;
    ಬ್ಲಡ್‌ ಬ್ಯಾಂಕ್, ಬರ್ನ್ಸ್‌ ಅಂಡ್‌ ಪ್ಲಾಸ್ಟಿಕ್ ಸರ್ಜರಿ, ಬ್ಲಡ್‌ ಬ್ಯಾಂಕ್‌ ಎನ್‌ಸಿಐ, ಕಾರ್ಡಿಯಾಕ್ ರೇಡಿಯೋಲಜಿ, ಕಾರ್ಡಿಯೋಲಜಿ, ಕಂಮ್ಯುನಿಟಿ ಮೆಡಿಷನ್, ಸೈಡರ್, ಸಿಟಿವಿಎಸ್‌, ಡರ್ಮಟೊಲಜಿ ಅಂಡ್ ವೆನೆರಿಯೋಲಜಿ, ಇಹೆಚ್‌ಎಸ್‌, ಎಮರ್ಜೆನ್ಸಿ ಮೆಡಿಷನ್, ಲ್ಯಾಬ್ ಮೆಡಿಷನ್, ನೆಪ್ರೊಲಜಿ, ಇತರೆ ವಿಭಾಗಗಳು.

    ವಿದ್ಯಾರ್ಹತೆ: ಹುದ್ದೆಗಳಿನುಸಾರವಾಗಿ ಅಭ್ಯರ್ಥಿಗಳು ಪದವಿ, ಎಂಬಿಬಿಎಸ್‌, ಬಿಡಿಎಸ್‌ ಮಾಡಿರಬೇಕು. ಹುದ್ದೆಗೆ ತಕ್ಕಂತೆ ನಿಖರವಾದ ವಿದ್ಯಾರ್ಹತೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದ್ದು, ಅಲ್ಲಿ ವಿವರವಾಗಿ ಅಭ್ಯರ್ಥಿಗಳು ಓದಬಹುದು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಪರೀಕ್ಷೆ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಶಾರ್ಟ್‌ಲಿಸ್ಟ್‌ ಆಗಿ ನಂತರ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ಉತ್ತಮ ವೇತನ ದೊರಕಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಮೊದಲಿಗೆ ಇಲ್ಲಿ ನೀಡಲಾದ ವೆಬ್‌ಸೈಟ್‌ ಲಿಂಕ್‌ ಕ್ಲಿಕ್‌ ಮಾಡಿ
    ನಂತರ ನ್ಯೂ ರಿಜಿಸ್ಟ್ರೇಷನ್-ಪ್ರೊಸೀಡ್‌ ಮೇಲೆ ಕ್ಲಿಕ್‌ ಮಾಡಿ
    ಅಲ್ಲಿ ನಿಮ್ಮ ಇಮೇಲ್‌ ವಿಳಾಸ, ಮೊಬೈಲ್‌ ನಂಬರ್‌, ಹೆಸರು ಇತರೆ ವಿಷಯಗಳನ್ನು ಭರ್ತಿ ರಿಜಿಸ್ಟ್ರೇಷನ್‌ ಪಡೆಯಿರಿ
    ನಂತರ ಲಾಗಿನ್‌ ಆಗಿ ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ

  • IGCAR Recruitment 2024: ಇಂದಿರಾಗಾಂಧಿ ಪರಮಾಣು ಸಂಶೋಧನಾ ಕೇಂದ್ರದಲ್ಲಿ 91  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    IGCAR Recruitment 2024: ಇಂದಿರಾಗಾಂಧಿ ಪರಮಾಣು ಸಂಶೋಧನಾ ಕೇಂದ್ರದಲ್ಲಿ 91 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    IGCAR Recruitment 2024: ಇಂದಿರಾ ಗಾಂಧಿ ಸೆಂಟರ್‌ ಫಾರ್‌ ಆಟೋಮಿಕ್‌ ರಿಸರ್ಚ್‌ (IGCAR) ಕಲ್ಪಕಂ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 91 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೈಂಟಿಫಿಕ್‌ ಆಫೀಸರ್‌, ಟೆಕ್ನಿಕಲ್‌ ಆಫೀಸರ್‌, ಸೈಂಟಿಫಿಕ್‌ ಅಸಿಸ್ಟಂಟ್‌, ನರ್ಸ್‌ ಮತ್ತು ಇತರೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿಲಾಗಿದೆ. ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ದಿ. 30-06-2024 (ರಾತ್ರಿ 11.59) ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-06-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2024

    ಹುದ್ದೆಯ ವಿವರ ಇಲ್ಲಿದೆ;
    ಹುದ್ದೆ ಹೆಸರು ಮತ್ತು ಸಂಖ್ಯೆ: ಸೈಂಟಿಫಿಕ್‌ ಆಫೀಸರ್‌ 34 ಹುದ್ದೆಗಳು
    ಟೆಕ್ನಿಕಲ್ ಆಫೀಸರ್ 01 ಹುದ್ದೆ
    ಸೈಂಟಿಫಿಕ್ ಅಸಿಸ್ಟಂಟ್ 12 ಹುದ್ದೆಗಳು
    ನರ್ಸ್ 27 ಹುದ್ದೆಗಳು
    ಫಾರ್ಮಾಸಿಸ್ಟ್‌ 14 ಹುದ್ದೆಗಳು
    ಟೆಕ್ನೀಷಿಯನ್ 03 ಹುದ್ದೆಗಳು
    ಒಟ್ಟು 91 ಹುದ್ದೆಗಳು

    ವಿದ್ಯಾರ್ಹತೆ:
    ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್ / ಪಿಜಿ ಡಿಪ್ಲೊಮ (ಸಂಬಂಧಿತ ವಿಷಯಗಳಲ್ಲಿ) ಮಾಡಿರಬೇಕು.
    ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಜಿ ಡಿಗ್ರಿ (ಫಿಸಿಯೋಥೆರಫಿ) ತೇರ್ಗಡೆ ಹೊಂದಿರಬೇಕು.
    ಸೈಂಟಿಫಿಕ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಎಂಎಲ್‌ಟಿ/ ಬಿಎಸ್ಸಿ / ಪಿಜಿ ಡಿಗ್ರಿ (ಮೆಡಿಕಲ್ ಸೋಷಿಯಲ್ ವರ್ಕ್‌) ಮಾಡಿರಬೇಕು.
    ನರ್ಸ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th ಪಾಸ್ / ಡಿಪ್ಲೊಮ (ಜಿಎನ್‌ಎಂ)/ ಬಿಎಸ್ಸಿ (ನರ್ಸಿಂಗ್) ಮಾಡಿರಬೇಕು.
    ಫಾರ್ಮಾಸಿಸ್ಟ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 / ಡಿಪ್ಲೊಮ (ಫಾರ್ಮಸಿ) ತೇರ್ಗಡೆ ಹೊಂದಿರಬೇಕು.
    ಟೆಕ್ನೀಷಿಯನ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್‌ಎಸ್‌ಸಿ (ಸೈನ್ಸ್ ) ಮಾಡಿರಬೇಕು.

    ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 50, 30, 30, 30, 25 ವರಷಗಳ ವಯೋಮಿತಿಯನ್ನು ಮೀರಿರಬಾರದು.

    ಅರ್ಜಿ ಶುಲ್ಕ: ಹುದ್ದೆಗೆ ತಕ್ಕ ಹಾಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
    ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಶುಲ್ಕ ರೂ.300, ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟಂಟ್, ನರ್ಸ್ ಹುದ್ದೆಗಳಿಗೆ ರೂ.200, ಫಾರ್ಮಾಸಿಸ್ಟ್‌ ಮತ್ತು ಟೆಕ್ನೀಷಿಯನ್ ಹುದ್ದೆಗಳಿಗೆ ರೂ.100 ಅರ್ಜಿ ಶುಲ್ಕ ವಿಧಿಸಲಾಗಿದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • NCB Recruitment 2024: ಕೇಂದ್ರ ಸರಕಾರಿ ಉದ್ಯೋಗಾವಕಾಶ; ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ ಹುದ್ದೆ; ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ಕೇಂದ್ರ ಸರಕಾರಿ ಉದ್ಯೋಗಾವಕಾಶ; ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ ಹುದ್ದೆ; ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಅರ್ಜಿಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 05 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಕ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದವರಿಗೆ ಭಾರತದಾದ್ಯಂತ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ದಿ.27-Jul-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-07-2024

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;
    ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸೆಕ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.44900-142400/- ವೇತನ ದೊರಕಲಿದೆ.

    ವಿದ್ಯಾರ್ಹತೆ: NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಉಳಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  • Indian Army Jobs: ಇಂಡಿಯನ್‌ ಆರ್ಮಿಯಲ್ಲಿ ವಿವಿಧ ಹುದ್ದೆಗಳ ಭರ್ತಿ

    Indian Army Jobs: ಇಂಡಿಯನ್‌ ಆರ್ಮಿಯಲ್ಲಿ ವಿವಿಧ ಹುದ್ದೆಗಳ ಭರ್ತಿ

    Indian Army Recruitment 2024: ಭಾರತೀಯ ಸೇನೆಯಲ್ಲಿ ಉದ್ಯೋಗ ಖಾಲಿ ಇದ್ದು, ಸೇನೆ ಸೇರಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭಾರತೀಯ ಸೇನೆಗೆ ಸೇರಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ 10+2 ತಾಂತ್ರಿಕ ಪ್ರವೇಶ -52 ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಇಚ್ಛೆ ಇರುವವರು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 13-ಜೂನ್-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಹೇಳಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-05-2024
    ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಭಾರತೀಯ ಸೇನೆಯಲ್ಲಿ 10+2 ಟೆಕ್ನಿಕಲ್ ಎಂಟ್ರಿ ಸ್ಕೀಮ್ – 52 ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಿಲ್ಲ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವೇತನವು ಭಾರತೀಯ ಸೇನೆಯ ನಿಯಮಗಳ ಪ್ರಕಾರ ದೊರಕಲಿದೆ.

    ವಿದ್ಯಾರ್ಹತೆ: ಭಾರತೀಯ ಸೇನೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಭಾರತೀಯ ಸೇನಾ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಭಾರತೀಯ ಸೇನೆಗೆ ಸೇರುವ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಭಾರತೀಯ ಸೇನಾ ಹುದ್ದೆಗೆ ಅರ್ಜಿಗಳ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ: ಭಾರತೀಯ ಸೇನಾ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

    AIATSL Jobs: ಏರ್‌ಇಂಡಿಯಾ ಏರ್‌ಟ್ರಾನ್ಸ್‌ಪೋರ್ಟ್‌ ಸರ್ವಿಸೆಸ್‌ನಿಂದ ಉದ್ಯೋಗಾವಕಾಶ, ನೇರಸಂದರ್ಶನಕ್ಕೆ ಅರ್ಜಿ ಆಹ್ವಾನ, ಉತ್ತಮ ವೇತನ

    AIATSL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವಿಸಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 145 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜೂನಿಯರ್‌ ಆಫಿಸರ್‌ ಟೆಕ್ನಿಕಲ್‌, ಕಸ್ಟಮರ್‌ ಸರ್ವೀಸ್‌ ಎಕ್ಸಿಕ್ಯೂಟಿವ್‌ ಹೀಗೆ ಹಲವು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ:
    ನೇರ ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ:

    ಹುದ್ದೆಗಳ ವಿವರ ಇಲ್ಲಿದೆ;
    ಜೂನಿಯರ್ ಆಫೀಸರ್ – ಟೆಕ್ನಿಕಲ್ : 02
    ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
    ಜೂನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 21
    ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 18
    ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 17
    ಹ್ಯಾಂಡಿಮನ್ : 66

    ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಬಿಇ/ಪದವಿ/ಐಟಿಐ (ಎನ್‌ಸಿವಿಟಿ/ಎಸ್‌ಸಿವಿಟಿ)/ಎಸ್‌ಎಸ್‌ಸಿ/ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
    ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500, ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
    ಅಭ್ಯರ್ಥಿಗಳು ಡಿಡಿ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ವಿಧಾನ: ಅಭ್ಯರ್ಥಿಗಳು ದಿನಾಂಕ 08-05-2024 ರಿಂದ 10-05-2024 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;
    ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ
    ಜಾತಿ ಮತ್ತು ಆದಾಯ ಪ್ರಮಾಣ ಪತ್ರ
    ಕಾರ್ಯಾನುಭವ ಇರುವ ದಾಖಲೆ, ಹಾಗೂ ಇತರೆ ದಾಖಲು ಅತ್ಯಗತ್ಯ

    ಮೇಲ್ಕಂಡ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗುವ ಸಮಯದಲ್ಲಿ ಅಭ್ಯರ್ಥಿಗಳು ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ತಮ್ಮಲ್ಲಿ ಇಟ್ಟುಕೊಂಡು ಹೋಗಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

  • AIASTL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್‌ ನಲ್ಲಿ 422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾದವರಿಗೆ ಆದ್ಯತೆ

    AIASTL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್‌ ನಲ್ಲಿ 422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾದವರಿಗೆ ಆದ್ಯತೆ

    AIASTL Recruitment 2024: ಏರ್‌ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್‌ ಲಿಮಿಟೆಡ್‌ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 422 ವಿವಿಧ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳಿಂದ ಹ್ಯಾಂಡಿಮ್ಯಾನ್‌, ಹ್ಯಾಂಡಿವುಮೆನ್‌, ಯುಟಿಲಿಟಿ ಏಜೆಂಟ್‌ ಕಮ್‌ ರ್ಯಾಂಪ್‌ ಡ್ರೈವರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 02 ರಿಂದ 04, ಮೇ 2024 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬೇಕು.

    ಪ್ರಮುಖ ದಿನಾಂಕಗಳು
    ನೇರ ಸಂದರ್ಶನದ ದಿನಾಂಕ: 02 ರಿಂದ 04, ಮೇ 2024

    ಹುದ್ದೆಗಳ ವಿವರ ಇಲ್ಲಿದೆ:
    ಹುದ್ದೆ ಹೆಸರು: ಯುಟಿಲಿಟಿ ಏಜೆಂಟ್‌ ಕಮ್‌ ರ್ಯಾಂಪ್‌ ಡ್ರೈವರ್-130 ಹುದ್ದೆಗಳು
    ಹ್ಯಾಂಡಿಮ್ಯಾನ್‌/ಹ್ಯಾಂಡಿವುಮೆನ್-‌292 ಹುದ್ದೆಗಳು

    ವೇತನ: ಯುಟಿಲಿಟಿ ಏಜೆಂಟ್‌ ಕಮ್‌ ರ್ಯಾಂಪ್‌ ಡ್ರೈವರ್ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.24,960 ವೇತನವಿರಲಿದೆ.
    ಹ್ಯಾಂಡಿಮ್ಯಾನ್‌/ಹ್ಯಾಂಡಿವುಮೆನ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾಸಿಕ ರೂ.22,530 ವೇತನ ಲಭ್ಯವಿದೆ.

    ವಿದ್ಯಾರ್ಹತೆ:
    ಯುಟಿಲಿಟಿ ಏಜೆಂಟ್‌ ಕಮ್‌ ರ್ಯಾಂಪ್‌ ಡ್ರೈವರ್ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಸಿ/ಎಸ್‌ಎಸ್‌ಎಲ್‌ಸಿ ಪಾಸ್‌ ಜೊತೆಗೆ ಹೆವಿ ಮೋಟಾರ್‌ ವೆಹಿಕಲ್‌ ಲೈಸೆನ್ಸ್‌ ಪಡೆದಿರಬೇಕು.
    ಹ್ಯಾಂಡಿಮ್ಯಾನ್‌/ಹ್ಯಾಂಡಿವುಮೆನ್ ಈ ಹುದ್ದೆಗೆ ಇಂಗ್ಲೀಷ್‌ ಭಾಷೆ ಬರೆಯಲು ಓದಲು ಗೊತ್ತಿರಬೇಕು. ಹಿಂದಿ ಭಾಷೆ ತಿಳಿದಿರಬೇಕು.

    ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 31 ವರ್ಷ, ಇತರೆ ಕೆಟಗರಿಯವರಿಗೆ 33 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

    ನೇರ ಸಂದರ್ಶನ ನಡೆಯುವ ಸ್ಥಳ: ಹೆಚ್‌ಆರ್‌ಡಿ ಡಿಪಾರ್ಟ್‌ಮೆಂಟ್ ಕಚೇರಿ, ಎಐ ಯುನಿಟಿ ಕಾಂಪ್ಲೆಕ್ಸ್‌, ಪಲ್ಲವರಮ್, ಕಂಟಾನ್ಮೆಂಟ್, ಚೆನ್ನೈ – 600 043.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್‌ ಮೇಲೆ ಕ್ಲಿಕ್‌ ಮಾಡಿ