Tag: central silk board recruitment 2024

  • CSB Jobs: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಉದ್ಯೋಗ; 122 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

    CSB Jobs: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಉದ್ಯೋಗ; 122 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ

    CSB Recruitment 2024: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ (ಸಿಎಸ್‌ಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 122 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸೈಂಟಿಸ್ಟ್-ಬಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು, ಹೆಚ್ಚಿನ ವಿವರ ಇಲ್ಲಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-04-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2024
    ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 11-05-2024
    ಅರ್ಜಿ ನಮೂನೆಯ ವಿವರಗಳಲ್ಲಿ ತಿದ್ದುಪಡಿಯ ದಿನಾಂಕ: 13 ರಿಂದ 15 ನೇ ಮೇ 2024
    ಪರೀಕ್ಷೆಯ ದಿನಾಂಕಗಳು: 29-ಜೂನ್-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು:
    ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಸಂಸ್ಥೆಯಲ್ಲಿ ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು, ಒಟ್ಟು 122 ಸಂಖ್ಯೆ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ಸಿಗಲಿದೆ.

    ವಿದ್ಯಾರ್ಹತೆ: CSB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ವಿಜ್ಞಾನ/ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯೋಮಿತಿಯು ಈ ಹುದ್ದೆಗೆ 35 ವರ್ಷ ಗರಿಷ್ಠ ಮಿತಿಯನ್ನು ಮೀರಿರಬಾರದು. ಕೇಂದ್ರ ರೇಷ್ಮೆ ಮಂಡಳಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

    ಅರ್ಜಿ ಶುಲ್ಕ:
    SC/ST/PwBD/ತೃತೀಯ ಲಿಂಗ ಅಭ್ಯರ್ಥಿಗಳಿಗೆ ರೂ.975/-, OBC (NCL)/UPS/EWS ಅಭ್ಯರ್ಥಿಗಳಿಗೆ ರೂ.1800/-, ಸಾಮಾನ್ಯ/UR ಅಭ್ಯರ್ಥಿಗಳಿಗೆ ರೂ.1900/-, ಅರ್ಜಿ ಶುಲ್ಕ ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಈ ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

  • CSB Recruitment 2024: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ

    CSB Recruitment 2024: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ

    CSB Recruitment 2024: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 122 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಿಎಸ್‌ಬಿ ಯಲ್ಲಿ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಯ ಮಾನದಂಡಗಳನ್ನು ಪೂರೈಸುವವರು, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.

    ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುವವರು ಈ ಉದ್ಯೋಗದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಕೇಂದ್ರ ಸರಕಾರದ ಉದ್ಯೋಗ ಹುಡುಕುವವರಿಗೆ ಇದೊಂದು ಸುವರ್ಣಾವಕಾಶ. ಈ ಹುದ್ದೆಗೆ 31-Mar-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2024

    ಹುದ್ದೆಗಳ ವಿವರ:
    ಹುದ್ದೆ ಹೆಸರು: ಸೈಂಟಿಸ್ಟ್‌ ಬಿ ಹುದ್ದೆಗೆ ಅರ್ಜಿಗಳನ್ನು ಸೆಂಟ್ರಲ್ ಸಿಲ್ಕ್‌ ಬೋರ್ಡ್‌ ‌ಸಂಸ್ಥೆ ಅರ್ಜಿಯನ್ನು ಆಹ್ವಾನಿಸಿದೆ.
    ಹುದ್ದೆ ಸಂಖ್ಯೆ: ಒಟ್ಟು 122 ಹುದ್ದೆಗಳು ಖಾಲಿ ಇದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100-ರೂ.1,77,500/- ವೇತನ ದೊರಕಲಿದೆ.

    ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ವಿಜ್ಞಾನ/ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯೋಮಿತಿ 35 ವರ್ಷ ಮೀರಿರಬಾರದು. ಸಂಸ್ಥೆಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ