Tag: Davanagere

  • ದಾವಣಗೆರೆ : 80 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ

    ದಾವಣಗೆರೆ : 80 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ

    ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆ ಮತ್ತು 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 08-04-2021
    ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 07-05-2021 ಸಂಜೆ 5.30 ಗಂಟೆ

    ವಯೋಮಿತಿ : 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು ಮತ್ತು ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ ವಿಕಲಚೇತನ ವರ್ಗದ ಅರ್ಹ ಸ್ಥಳೀಯ ( ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆ.

    ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ಅಲ್ಲಿ ಮಾಹಿತಿಗಳನ್ನು ಓದಿ, ಅಧಿಕೃತ ದಾಖಲೆಗಳೊಂದಿಗೆ ಸಂಬಂಧಿತರು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 07-05-2021 ರ ಸಂಜೆ 5.30 ಗಂಟೆಯೊಳಗೆ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ಅಧಿಕೃತ ವೆಬ್‌ಸೈಟ್ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

  • ದಾವಣಗೆರೆ ಜಿಲ್ಲಾ ಪಂಚಾಯತ್ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ ಜಿಲ್ಲಾ ಪಂಚಾಯತ್ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ಸೇವೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ: ತಾಂತ್ರಿಕ ಸಹಾಯಕ (ಅರಣ್ಯ)-03
    ತಾಂತ್ರಿಕ ಸಹಾಯಕ (ಕೃಷಿ) – 04
    ತಾಂತ್ರಿಕ ಸಹಾಯಕ (ತೋಟಗಾರಿಕೆ) -03
    ತಾಂತ್ರಿಕ ಸಹಾಯಕ (ಸಿವಿಲ್) -04
    ತಾಲೂಕು ಎಂಇಎಸ್ ಸಂಯೋಜಕರು -01 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-04-2021

    ವಿದ್ಯಾರ್ಹತೆ: ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಅರಣ್ಯ)/ಎಂಎಸ್ಸಿ (ಅರಣ್ಯ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ಕೃಷಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (ಕೃಷಿ)/ಎಂಎಸ್ಸಿ (ಕೃಷಿ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ತೋಟಗಾರಿಕೆ) ಬಿ.ಎಸ್ಸಿ ( ತೋಟಗಾರಿಕೆ )/ಎಂಎಸ್ಸಿ (ತೋಟಗಾರಿಕೆ) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2-3 ವರ್ಷಗಳ ಅನುಭವ.
    ತಾಂತ್ರಿಕ ಸಹಾಯಕ (ಸಿವಿಲ್) – ಈ‌ ಹುದ್ದೆಗೆ ಬಿಇ(ಸಿವಿಲ್)/ಬಿಟೆಕ್(ಸಿವಿಲ್) ಇಂಜಿನಿಯರಿಂಗ್ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ, ಕಂಪ್ಯೂಟರ್ ಅನುಭವ ಇರಬೇಕು. ತಾಲೂಕು ಎಂಇಎಸ್ ಸಂಯೋಜಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಸಿಎ/ಬಿಎಸ್ಸಿ ( ಕಂಪ್ಯೂಟರ್ ಸೈನ್ಸ್) ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ ಜೊತೆಗೆ ಸಂಬಂದಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ, ಕಂಪ್ಯೂಟರ್ ಅನುಭವ, ಎಂಎಸ್ ಆಫೀಸ್, ಎಕ್ಸೆಲ್ ಅನುಭವ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಕನಿಷ್ಠ 21 ರಿಂದ ಗರಿಷ್ಠ 45 ವರ್ಷ ರೊಳಗಿನವರಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಬಾಲಭವನ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಬಾಲಭವನ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ ಜಿಲ್ಲಾ ಬಾಲ ಭವನದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆ: ಬಾಲ ಭವನದಲ್ಲಿ ಜಿಲ್ಲಾಭವನದಲ್ಲಿ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    2021-22 ನೇ ಸಾಲಿನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಹೊಂದಿರುವ ಜೊತೆಗೆ ಕಂಪ್ಯೂಟರ್ ಜ್ಞಾನ, ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯ ಹೊಂದಿರಬೇಕು. ಬಾಲಭವನದಲ್ಲಿ ಕನಿಷ್ಠ 5 ವರ್ಷ ಹಾಗೂ ಅಥವಾ ಅದಕ್ಕಿಂತ ಮೇಲ್ಪಟ್ಟು ಅನುಭವ ಹೊಂದಿರುವವರಿಗೆ ಆದ್ಯತೆ ಮೇರೆಗೆ ವಿದ್ಯಾರ್ಹತೆಯಲ್ಲಿ ಸಡಿಲಿಕೆ ನೀಡಲಾಗಿದೆ.

    ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹಾಗೂ ಅದಕ್ಕಿಂತ ಮೇಲ್ಪಟ್ಟು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

    ವೇತನ : ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ವೇತನ ನೀಡಲಾಗುತ್ತದೆ.

    ಕಚೇರಿ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ. 10,000/- ವೇತನ ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಬಾಲಭವನ, ಜೆಹೆಚ್ ಬಡಾವಣೆ, ಪಾರ್ಕ್ -1 ಎ ಬ್ಲಾಕ್, ನಾಗನೂರು ರಸ್ತೆ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು